
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ : ರಾಜ್ಯದಲ್ಲಿ 7 ದಿನ ಶೋಕಾಚರಣೆ – ಡಿ. 27 ರಂದು ಸರ್ಕಾರಿ ರಜೆ ಘೋಷಣೆ
ಬೆಂಗಳೂರು, ಡಿ. 27: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು, ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.
ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಸರ್ಕಾರ ತೀವ್ರ ಶೋಕ ವ್ಯಕ್ತಪಡಿಸಿದೆ. ಡಿ. 26 ರಿಂದ ಜನವರಿ 1 ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಣೆ ಮಾಡಿದೆ.
ಹಾಗೆಯೇ ಡಿ. 27 ರ ಶುಕ್ರವಾರ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಸರ್ಕಾರಿ ಕಚೇರಿಗಳು, ಶಾಲಾ – ಕಾಲೇಜುಗಳು, ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳಿಗೆ ರಜೆ ಅನ್ವಯವಾಗಲಿದೆ.
ರಾಜ್ಯಾದ್ಯಂತ 7 ದಿನಗಳ ಶೋಕಾಚಾರಣೆ ಘೋಷಣೆ ಮಾಡಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಮನರಂಜನಾ ಕಾರ್ಯಕ್ರಮಗಳ ಆಚರಣೆ ಮಾಡುವುದನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಷ್ಟ್ರಧ್ವಜ ಹಾರಿಸಲ್ಪಡುವ ಕಟ್ಟಡಗಳ ಮೇಲೆ, ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಸಲಾಗುತ್ತದೆ.
ಶೋಕ : ಮಾಜಿ ಪ್ರಧಾನಮಂತ್ರಿ ಮನೋಹನ್ ಸಿಂಗ್ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ರಾಜನೀತಿ ತಜ್ಞತೆ, ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆಗಳು ಭಾರತದ ನೆಲದಲ್ಲಿ ಅಳಿಸಲಾಗದ ಗುರುತು ಹಾಕಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿತ್ತು.
ಅವರ ಕುಟುಂಬ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ. ಮನಮೋಹನ್ ಸಿಂಗ್ ಅವರ ಪರಂಪರೆ ತಲೆಮಾರುಗಳಿಗೆ ಸ್ಫೂರ್ತಿ ನೀಡುತ್ತಲೆ ಇರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Former Prime Minister Manmohan Singh (92) passed away on Thursday night. He was suffering from age-related diseases and was admitted to Delhi AIIMS Hospital.
The Karnataka State Government has expressed deep grief over the demise of Manmohan Singh. Mourning has been declared in the state from December 26 to January 1.
Also, Friday, December 27 has been declared a public holiday in the state. The leave will be applicable to government offices, schools and colleges, government-owned affiliates.