ಶಿವಮೊಗ್ಗ ಗ್ರಾಮಾಂತರ ಮೀಸಲು ಕ್ಷೇತ್ರದತ್ತ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಚಿತ್ತ..?!

ಶಿವಮೊಗ್ಗ, ಮಾ. 21: ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಸ್ಫರ್ಧಾ ಕಣದಿಂದ ಹಿಂದೆ ಸರಿದಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಅವರು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುವ ಚಿಂತನೆ ನಡೆಸುತ್ತಿದ್ದಾರೆಂಬ ಮಾಹಿತಿ ಕಾಂಗ್ರೆಸ್ ಪಾಳೇಯದಿಂದ ಕೇಳಿಬರಲಾರಂಭಿಸಿದೆ!

ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಲು ಸ್ಥಳೀಯ ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಜೊತೆಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ಸಾಕಷ್ಟು ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ಹೆಚ್.ಸಿ.ಮಹದೇವಪ್ಪ ಅವರು ಹೆಸರು ಕೇಳಿಬರಲಾರಂಭಿಸಿರುವುದು ಗ್ರಾಮಾಂತರ ಕೈ ಪಾಳೇಯದಲ್ಲಿ ಸಂಚಲನ ಮೂಡಿಸಿದೆ!

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸೂಕ್ತ ಕ್ಷೇತ್ರದ ಹುಡುಕಾಟದಲ್ಲಿರುವ ಹೆಚ್.ಸಿ.ಮಹದೇವಪ್ಪರವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದತ್ತ ಚಿತ್ತ ನೆಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದೆರೆಡು ದಿನಗಳಿಂದ ಶಿವಮೊಗ್ಗ ಕಾಂಗ್ರೆಸ್ ಪಾಳೇಯದಲ್ಲಿ, ಈ ಕುರಿತಂತೆ ಸಾಕಷ್ಟು ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.

ಮತ್ತೊಂದೆಡೆ, ಹೆಚ್.ಸಿ.ಮಹದೇವಪ್ಪ ಆಪ್ತರು ಕೂಡ ಸ್ಥಳೀಯ ಕಾಂಗ್ರೆಸ್ ಮುಖಂಡರಿಂದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಚಿತ್ರಣದ ಸಮಗ್ರ ವಿವರ ಕಲೆ ಹಾಕಿದ್ಧಾರೆ ಎಂದು ಆ ಪಕ್ಷದ ಉನ್ನತ ಮೂಲಗಳು ಮಾಹಿತಿ ನೀಡುತ್ತವೆ.

ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯಲು ಹಲವು ಕಾಂಗ್ರೆಸ್ ನಾಯಕರು ಕಸರತ್ತು ನಡೆಸುತ್ತಿದ್ದಾರೆ. ಟಿಕೆಟ್ ಗಿಟ್ಟಿಸಿಕೊಳ್ಳಲು ಸಾಕಷ್ಟು ಲಾಬಿ ನಡೆಸುತ್ತಿದ್ದಾರೆ. ಈ ನಡುವೆ ಹೆಚ್.ಸಿ.ಮಹದೇವಪ್ಪ ಅವರು ಹೆಸರು ಕೇಳಿಬರಲಾರಂಭಿಸಿರುವುದು ಗ್ರಾಮಾಂತರ ಕೈ ಪಾಳೇಯದಲ್ಲಿ ಸಂಚಲನ ಮೂಡಿಸಿದೆ.

ಒಂದು ವೇಳೆ ಹೆಚ್.ಸಿ.ಮಹದೇವಪ್ಪ ಅವರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾದರೆ, ಈ ಬಾರಿಯ ಚುನಾವಣೆಯಲ್ಲಿ ಗ್ರಾಮಾಂತರದಲ್ಲಿ ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ನಡುವೆ ತ್ರಿಕೋನ ಹಣಾಹಣಿ ಏರ್ಪಡುವುದು ನಿಶ್ಚಿತವಾಗಿದೆ. ಕಾವೇರಿದ ಅಖಾಡಕ್ಕೆ ಕಣ ಸಾಕ್ಷಿಯಾಗಲಿದೆ.

ಗ್ರಾಮಾಂತರದಿಂದ ಕಣಕ್ಕಿಳಿಯುವಂತೆ ಹೆಚ್.ಸಿ.ಮಹದೇವಪ್ಪರಿಗೆ ಮುಖಂಡರ ಮನವಿ

*** ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದಲ ಕಣಕ್ಕಿಳಿಯುವಂತೆ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪರಿಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಜಗದೀಶ್ ಹಾಗೂ ಕಿಸಾನ್ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಎಸ್.ಗಿರೀಶ್, ಮುಖಂಡರಾದ ಶಶಿಧರ್ ಅವರು ಮನವಿ ಮಾಡಿದ್ದಾರೆ. ಈ ಕುರಿತಂತೆ ಈ ನಾಯಕರು ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾಗಿರುವ ಹೆಚ್.ಸಿ.ಮಹದೇವಪ್ಪ ಅವರು ಹಲವು ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಇವರು ಗ್ರಾಮಾಂತರದಿಂದ ಕಣಕ್ಕಿಳಿದರೆ ದಾಖಲೆ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಬಿಜೆಪಿಯಿಂದ ಕೆ.ಬಿ.ಅಶೋಕನಾಯ್ಕ್, ಜೆಡಿಎಸ್ ನಿಂದ ಶಾರಾದ ಪೂರ್ಯಾನಾಯ್ಕ್ ಅಖಾಡಕ್ಕೆ!

*** ಸದ್ಯದ ರಾಜಕೀಯ ಚಿತ್ರಣ ಗಮನಿಸಿದರೆ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಹಣಾಹಣಿಯ ವಾತಾವರಣ ಕಂಡುಬರುತ್ತಿದೆ. ಬಿಜೆಪಿಯಿಂದ ಹಾಲಿ ಶಾಸಕ ಕೆ.ಬಿ.ಅಶೋಕನಾಯ್ಕ್ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಗಳು ಬಹುತೇಕ ನಿಶ್ಚಿತವಾಗಿದೆ. ಮತ್ತೊಂದೆಡೆ, ಜೆಡಿಎಸ್ ಪಕ್ಷದಿಂದ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು ಸ್ಪರ್ಧಿಸುವುದು ಈಗಾಗಲೇ ಖಚಿತವಾಗಿದೆ.

Previous post <strong>ಖಾಸಗಿ ಆಸ್ಪತ್ರೆ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಿದ್ದೇಕೆ?</strong>
Next post ಸಡಗರ-ಸಂಭ್ರಮದ ಯುಗಾದಿ ಹಬ್ಬ ಆಚರಣೆ