
bengaluru | ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ : ಸಿಎಂ ಹೇಳಿದ್ದೇನು?
ಬೆಂಗಳೂರು (bengaluru), ಜ. 20 : ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು.
ಪ್ರಶ್ನೆ ಇಲ್ಲ : ಮುಡಾ ಮತ್ತು ವಾಲ್ಮೀಕಿ ನಿಗಮದ ಹಗರಣದ ಪ್ರತಿಪಕ್ಷಗಳ ಆರೋಪ ಹಾಗೂ ರಾಜ್ಯದ ತೆರಿಗೆ ಹಣದಲ್ಲಿ ನಾಳಿನ ಸಮಾರಂಭ ನಡೆಸುತ್ತಿರುವ ಬಗ್ಗೆ ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಣ ದುರುಪಯೋಗ ಆಗಿರುವ ಪ್ರಶ್ನೆಯೇ ಇಲ್ಲ ಎಂದರು.
ಕ್ರಮ : ವಿಜಯಪುರದಲ್ಲಿ ಕಾರ್ಮಿಕರ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ‍್ಳಲಾಗುವುದು ಎಂದರು.
ದಂಧೆ : ಮೈಸೂರು, ಚಾಮರಾಜನಗರ ಜಿಲ್ಲೆಗಳ ಗ್ರಾಮೀಣ ಭಾಗದಲ್ಲಿ ಮೈಕ್ರೋ ಫೈನಾನ್ಸ್ ದಂಧೆ ಹೆಚ್ಚಿದ್ದು ಜನರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಜನರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ನವರ ವಿರುದ್ಧ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. .
1924 ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವ ಸ್ಮರಣಾರ್ಥವಾಗಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಅನಾವರಣ ನಂತರ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದರು.
Bengaluru January 20: Chief Minister Siddaramaiah said that ED’s press release on MUDA is politically motivated. He spoke to the media at Vidhansouda today. Commenting on the ED’s press release on the Muda scam, I have nothing to do with the ED’s press release. He said that BJP has released this press release through ED unnecessarily.