
bengaluru | ಮೈಕ್ರೋ ಫೈನಾನ್ಸ್ ಕಿರುಕುಳ : ಬಲವಂತದ ಸಾಲ ವಸೂಲಾತಿ ವಿರುದ್ಧ ಕ್ರಮ – ಸಿಎಂ ಎಚ್ಚರಿಕೆ
ಬೆಂಗಳೂರು (bengaluru), ಜ. 25: ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತವನ್ನು ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾಲಗಾರರ ಹಿತ ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜ. 25 ರಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಈ ಕುರಿತು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.
ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮಕೈಗೊಳ್ಳಲಾಗುವುದು. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು. ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ತಿಳಿಸಿದರು.
ಈ ಕುರಿತು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗುವುದು. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚನೆ ಕೊಡಲಾಗಿದೆ.
Banning of unregulated lending Activities ಕುರಿತು ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದೆ. ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿರುವವರ ಹಿತ ಕಾಪಾಡಲು ಕ್ರಮವಹಿಸಲಾಗುವುದು. ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು. ಸಾಲ ವಸೂಲಾತಿ ಕುರಿತಾಗಿ ಆರ್ ಬಿಐ ಹಲವು ಮಾರ್ಗಸೂಚಿ ಹೊರಡಿಸಿವೆ. ಸಂಜೆ 5ಗಂಟೆ ಬಳಿಕ ಮನೆಗೆ ಸಾಲ ವಸೂಲಾತಿಗೆ ಹೋಗಬಾರದು; ಬೆದರಿಕೆ ಹಾಕಬಾರದು. ವಸೂಲಾತಿಗೆ ಮೂರನೇ ವ್ಯಕ್ತಿಗಳನ್ನು ಬಳಸಿಕೊಳ್ಳಬಾರದು. ಇದನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಕೈಗೊಳ್ಳಲಾಗುವುದು ಎಂದು ಹೇಳಿದರು.
ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್ ಬಿಐ ಮಿತಿಯಿದೆ. ಇದನ್ನು ಪಾಲಿಸಲಾಗುತ್ತಿದೆಯೇ? ಇದನ್ನು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
Bengaluru, January 25: The government is committed to safeguarding the interests of microfinance borrowers. Strict legal action will be taken against those harassing borrowers. CM Siddaramaiah said that in order to protect the interests of borrowers, a new law will be framed as soon as possible through an ordinance.
He was addressing a press conference in Bangalore on January 25. A criminal case will be filed against the forced debt collector. He said provision will be made in the law to file a voluntary complaint in this regard.