13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : 25 ವರ್ಷದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ!

ಶಿವಮೊಗ್ಗ, ಮಾ. 24: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಯುವಕನೋರ್ವನಿಗೆ, 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ.

ಭದ್ರಾವತಿ ತಾಲೂಕಿನ 25 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದವನಾಗಿದ್ದಾನೆ. ಸದರಿ ಯುವಕನಿಗೆ 1.10 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ, ಹೆಚ್ಚುವರಿಯಾಗಿ 6 ತಿಂಗಳ ಕಾಲ ಸಾದಾ ಕಾರಾಗೃಹ ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಮಾ.23 ರಂದು ಹೆಚ್ಚುವರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ – II (POCSO) ನ್ಯಾಯಾಧೀಶರಾದ ಮೋಹನ್ ಜಿ.ಎಸ್.ರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ಅವರು ವಾದ ಮಂಡಿಸಿದ್ದರು.

ಘಟನೆ ಹಿನ್ನೆಲೆ: ಶಿಕ್ಷೆಗೊಳಗಾದ ಯುವಕನು 2019 ನೇ ಸಾಲಿನಲ್ಲಿ, 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ನೊಂದ ಬಾಲಕಿಯ ತಂದೆಯು ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸದರಿ ಯುವಕನ ವಿರುದ್ದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Previous post ‘ನೂರಾರು ಕಾಮೆಂಟ್ ಬರ್ತವೆ, ಲೆಕ್ಕಕ್ಕೆ ಇಟ್ಕೊಳ್ಳಲ್ಲ… ಅವನದ್ದೇಕೆ ಕೇಳೋಕೆ ಹೋಗ್ತಿಯಾ..!’
Next post ಅಸೆಂಬ್ಲಿ ಎಲೆಕ್ಷನ್ : ಚೆಕ್ ಪೋಸ್ಟ್ ಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸೀಜ್..!