ಕಾಂಗ್ರೆಸ್ ಮುಖಂಡ ಪಿ.ವಿ.ವಿಶ್ವನಾಥ್ (ಕಾಶಿ) ನೇಮಕ

ಶಿವಮೊಗ್ಗ, ಮಾ. 24: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡ, ಮಹಾನಗರ ಪಾಲಿಕೆ ಮಾಜಿ ಕಾರ್ಪೋರೇಟರ್ ಪಿ.ವಿ.ವಿಶ್ವನಾಥ್ (ಕಾಶಿ) ಅವರನ್ನು ನೇಮಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಮೇರೆಗೆ, ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದಾರೆ. ಪಕ್ಷದ ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.

‘ತಮ್ಮ ಮೇಲೆ ಭರವಸೆಯಿಟ್ಟು ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಇದನ್ನು ಸರ್ಮಥವಾಗಿ ನಿಭಾಯಿಸುತ್ತೆನೆ. ಪಕ್ಷದ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೆನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಎಲ್ಲ ಮುಖಂಡರಿಗೆ ಅಭಿನಂದನೆ ಸಲ್ಲಿಸುವುದಾಗಿ’ ಪಿ.ವಿ.ವಿಶ್ವನಾಥ್ (ಕಾಶಿ) ಅವರು ತಿಳಿಸಿದ್ದಾರೆ.

Previous post <strong>ನಂದಿತಾ ಸಾವಿನ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹಿಸಿ ಪ್ರಧಾನಿಗೆ ಎನ್.ಎಸ್.ಯು.ಐ. ಮನವಿ</strong>
Next post ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ ಡಾ.ಸೆಲ್ವಮಣಿ ಆರ್