bhadravati | ಭದ್ರಾವತಿಯಲ್ಲಿ ಮಾಫಿಯಾಗಳ ದರ್ಬಾರ್ : ಶಾಸಕರ ಮನೆ ಚೇಲಾಗಳಾಗಿರುವ ಅಧಿಕಾರಿಗಳು – ಜೆಡಿಎಸ್ ನಾಯಕರ ಆರೋಪ bhadravati | Mafia durbar in Bhadravati: Officials who are house chelas of MLAs - JDS leaders allege

bhadravati | ಭದ್ರಾವತಿಯಲ್ಲಿ ಮಾಫಿಯಾಗಳ ದರ್ಬಾರ್ : ಶಾಸಕರ ಮನೆ ಚೇಲಾಗಳಾಗಿರುವ ಅಧಿಕಾರಿಗಳು – ಜೆಡಿಎಸ್ ನಾಯಕರ ಆರೋಪ

ಶಿವಮೊಗ್ಗ (shimoga), ಫೆ. 12: ‘ಭದ್ರಾವತಿಯಲ್ಲಿ ಅರಣ್ಯ ಕಬಳಿಕೆ, ಮರಳು, ಇಸ್ಪೀಟ್ ಹಾಗೂ ಗಾಂಜಾ ಮಾಫಿಯಾಗಳಿವೆ. ಶಾಸಕರ ಬೆಂಬಲಿತರೇ ಈ ಮಾಫಿಯಾಗಳಲ್ಲಿದ್ದಾರೆ. ಅಧಿಕಾರಿಗಳು ಶಾಸಕರ ಚೇಲಾಗಳಾಗಿದ್ದಾರೆ’ ಎಂದು ಭದ್ರಾವತಿ ಜೆಡಿಎಸ್ ಪಕ್ಷದ ನಾಯಕಿ ಶಾರದಾ ಅಪ್ಪಾಜಿಗೌಡ ಅವರು ಆರೋಪಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಫೆ. 12 ರಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಶಾಸಕರು ನಾಮಕಾವಸ್ತೆಯಾಗಿದ್ದಾರೆ. ಅವರ ಇಬ್ಬರು ಮಕ್ಕಳೆ ಆಳ್ವಿಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಏನಾದರೂ ದೂರು ಕೊಟ್ಟರೆ, ಎಂಎಲ್ಎ ಮನೆಗೆ ಹೋಗಿ ಬನ್ನಿ ಅಥವಾ ಅವರ ಮಕ್ಕಳನ್ನು ಮಾತಾಡಿಸಿಕೊಂಡು ಬನ್ನಿ ಎಂದು ಹೇಳಿ ಕಳುಹಿಸುತ್ತಾರೆ ಎಂದು ದೂರಿದರು.

ಶಾಸಕರು ಎಲ್ಲಿಯೂ ಕಾಣಿಸುವುದಿಲ್ಲ. ಮಕ್ಕಳು, ಅಣ್ಣತಮ್ಮಂದಿರೇ ಎಲ್ಲ ಕಡೆ ಕಾಣಿಸಿಕೊಳ್ಳುತ್ತಾರೆ.  ಶಿಷ್ಟಾಚಾರ ಕಣ್ಮರೆಯಾಗಿದೆ. ಬಡವರ ಪರ ಇವರು ಯಾವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಅಧಿಕಾರಿಗಳನ್ನು ಶಾಸಕರ ಮನೆಗೆ ಕರೆಯಿಸಿಕೊಂಡು ಕೆಲಸ ಮಾಡಿಸಲಾಗುತ್ತಿದೆ. ಅವರ ಮನೆಯಲ್ಲಿ ಅಧಿಕಾರಿಗಳು ಕೆಲಸ ಮಾಡುವುದಾದರೆ, ಕಚೇರಿಗಳು ಏಕೆ ಬೇಕು? ಎಂದು ಪ್ರಶ್ನಿಸಿದ ಶಾರದಾ ಅಪ್ಪಾಜಿಗೌಡ ಅವರು, ‘ಭದ್ರಾವತಿಯಲ್ಲಿ ಭಾರೀ ಅವ್ಯವಹಾರ ನಡೆಯುತ್ತಿದೆ’ ಎಂದು ಆರೋಪಿಸಿದ್ದಾರೆ.

ದೊಡ್ಡೇರಿ ಭಾಗದಲ್ಲಿ 15 ಎಕರೆ ಅರಣ್ಯ ನಾಶ ಮಾಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅರಣ್ಯ ಇಲಾಖೆ ವಾಚರ್ ಅನ್ನು ಕೂಡಿ ಹಾಕಿ ಹೊಡೆಯಲಾಗಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ, ಭದ್ರಾವತಿಯಲ್ಲಿ ಅರಣ್ಯವೇ ಉಳಿಯುವುದಿಲ್ಲ ಎಂದು ತಿಳಿಸಿದರು.

ಭದ್ರಾವತಿಯಲ್ಲಿ ಇಸ್ಪೀಟ್ ಜೂಜು ಅವ್ಯಾಹತವಾಗಿದೆ. ವಿವಿಧೆಡೆ ಶಿಫ್ಟ್ ಪ್ರಕಾರ ಜೂಜಾಟ ನಡೆಸಲಾಗುತ್ತಿದೆ. ದಾಳಿ ಮಾಡುತ್ತಿರುವ ಬಗ್ಗೆ ಅಧಿಕಾರಿಗಳೇ ಮಾಫಿಯಾಗಳಿಗೆ ಮೆಸೇಜ್ ರವಾನಿಸುತ್ತಾರೆ. ಸ್ಥಳದಿಂದ ಹೋಗುವಂತೆ ಸೂಚಿಸುತ್ತಿದ್ದಾರೆ ಎಂದು ಆಪಾದಿಸಿದರು.

ಮಾಜಿ ಶಾಸಕ ಕೆ ಬಿ ಪ್ರಸನ್ನಕುಮಾರ್ ಅವರು ಮಾತನಾಡಿ, ಭದ್ರಾವತಿ ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆ ಹೇಳಿದ್ದರು. ಅವರ ಹೇಳಿಕೆ ನಂತರ ಹೆಚ್ಚೆಚ್ಚು ಅಕ್ರಮಗಳು ನಡೆಯುತ್ತಿವೆ. ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದ ನಿಜವಾದ ತನಿಖೆ ಆಗಬೇಕು. ಫೆ. 14 ರಂದು ಭದ್ರಾವತಿ ಪಟ್ಟಣದಲ್ಲಿ ಜೆಡಿಎಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.  

ಮುಖಂಡ ಮಧುಕುಮಾರ್ ಮಾತನಾಡಿ, ಶಾಸಕರ ಪುತ್ರರೇ ಭದ್ರಾವತಿಯಲ್ಲಿ ಇಸ್ಪೀಟ್ ದಂಧೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ, ನೆಲಮಂಗಲ, ಚಿತ್ರದುರ್ಗ ಮೊದಲಾದ ಕಡೆಯಿಂದ ಭದ್ರಾವತಿಗೆ ಇಸ್ಪೀಟ್ ಜೂಜಾಡಲು ಬರುತ್ತಿದ್ದಾರೆ. ಭದ್ರಾವತಿಯಲ್ಲಿ ಗೋವಾದ ರೀತಿ ಕ್ಯಾಸಿನೋ ಮಾಡಿಬಿಡಲಿ  ಎಂದು ದೂರಿದರು.

ಅಕ್ರಮಗಳನ್ನು ಪ್ರಶ್ನಿಸುವವರ ವಿರುದ್ದ ಅಟ್ರಾಸಿಟಿ ಕೇಸ್ ಸೇರಿದಂತೆ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ. ರಾಜ್ಯ ಸರ್ಕಾರ ತಕ್ಷಣವೇ ಭದ್ರಾವತಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ. ಗೋಷ್ಠಿಯಲ್ಲಿ ಮುಖಂಡರಾದ ಕಡಿದಾಳ್ ಗೋಪಾಲ್, ದೀಪಕ್ ಸಿಂಗ್, ರಾಕೇಶ್ ಡಿಸೋಜಾ ಸೇರಿದಂತೆ ಮೊದಲಾದವರಿದ್ದರು.

Shimoga, Feb 12: There are forest grabbing, sand, gambling and ganja mafias in Bhadravati. Supporters of legislators are in these mafias. Bhadravathi JDS party leader Sharada Appaj Gowda alleged that the officials are the chelas of the MLAs. she was addressing a press conference on February 12 in Shimoga city.

Officials are being called to the MLA’s house and are being worked on. If officers work in their homes, why do they need offices? Sharada Appajigowda questioned that, and alleged that there is a lot of corruption going on in Bhadravati.

Bhadravati: A case of abuse of a female officer - three accused arrested by the police! bhadravati | ಭದ್ರಾವತಿ ಮಹಿಳಾ ಅಧಿಕಾರಿ ಪ್ರಕರಣ - ಪೊಲೀಸರಿಂದ ಮೂವರು ಆರೋಪಿಗಳ ಬಂಧನ! Previous post bhadravati | ಭದ್ರಾವತಿ : ಮಹಿಳಾ ಅಧಿಕಾರಿಗೆ ನಿಂದನೆ ಪ್ರಕರಣ – ಪೊಲೀಸರಿಂದ ಮೂವರು ಆರೋಪಿಗಳ ಬಂಧನ!
What is the instruction of Shimoga district administration for micro finance? shimoga | ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯವಹಾರಸ್ಥರಿಗೆ ಶಿವಮೊಗ್ಗ ಜಿಲ್ಲಾಡಳಿತದ ಸೂಚನೆಯೇನು? Next post shimoga | ಮೈಕ್ರೋ ಫೈನಾನ್ಸ್, ಲೇವಾದೇವಿ ವ್ಯವಹಾರಸ್ಥರಿಗೆ ಶಿವಮೊಗ್ಗ ಜಿಲ್ಲಾಡಳಿತದ ಸೂಚನೆಯೇನು?