
ಶಿವಮೊಗ್ಗ : ಫೆ. 14 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಫೆ. 12: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ. 14 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಈ ಕುರಿತಂತೆ ಫೆ. 12 ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಫೆ. 14 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.
ವಿವರ : ಸಾಗರ ರಸ್ತೆ, ಎ.ಪಿ.ಎಂ.ಸಿ, ಆರ್.ಎಂ.ಸಿ. 100 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Shimoga, Feb 12: Mescom has informed that emergency work has been started at Alkola power distribution center in Shimoga city on Feb 14.
In this regard, a press release was issued on February 12. In this background, Mescom has informed that there will be power interruption in the following areas on February 14 from 10 am to 5 pm.
Details: Sagar Road, APMC, RMC 100 feet road and surrounding areas will have power interruption. Mescom has asked the public to cooperate.