shimoga | Shimoga: Anganwadi Worker - Assistant Posts Provisional Selection List Announced, Objection Allowed shimoga | ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆ - ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಅವಕಾಶ

shimoga | ಶಿವಮೊಗ್ಗ : ಅಂಗನವಾಡಿ ಕಾರ್ಯಕರ್ತೆ – ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಸಲು ಅವಕಾಶ

ಶಿವಮೊಗ್ಗ (shivamogga) ಫೆ. 12: ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು, ಜಿಲ್ಲೆಯ ಭದ್ರಾವತಿ ತಾಲೂಕು ಹೊರತುಪಡಿಸಿ ಉಳಿದ 06 ತಾಲೂಕುಗಳಲ್ಲಿ ಖಾಲಿಯಿರುವ 116 ಅಂಗನವಾಡಿ ಕಾರ್ಯಕರ್ತೆ ಮತ್ತು 360 ಸಹಾಯಕಿ ಹುದ್ದೆಗಳ ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಈ ಕುರಿತಂತೆ ಫೆ. 12 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪರಿಷ್ಕೃತ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 20 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga Feb 12: Women and Child Development Department of Shimoga district has published the revised provisional selection list for 116 Anganwadi workers and 360 assistant posts vacant in remaining 06 taluks except Bhadravati taluk.

In this regard, the Deputy Director of Women and Child Development Department has given information in this regard on February 12.

shimoga | Power outage in various parts of Shivamogga city on March 12! shimoga | ಶಿವಮೊಗ್ಗ ನಗರದ ವಿವಿಧೆಡೆ ಮಾ.12 ರಂದು ವಿದ್ಯುತ್ ವ್ಯತ್ಯಯ! Previous post ಶಿವಮೊಗ್ಗ : ಫೆ. 14 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
shimoga | Which areas of Shimoga taluk will not have electricity on February 15? shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ? Next post shimoga | ಶಿವಮೊಗ್ಗ ತಾಲೂಕಿನ ಯಾವೆಲ್ಲ ಪ್ರದೇಶಗಳಲ್ಲಿ ಫೆ. 15 ರಂದು ವಿದ್ಯುತ್ ಇರಲ್ಲ?