ಮಾ. 25 ರಂದು ಸರ್ಕಾರಿ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ!

ಶಿವಮೊಗ್ಗ ಮಾ. 24: ಮಾ.25 ರಂದು ಪ್ರಧಾನ ಮಂತ್ರಿಗಳು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಶಿವಮೊಗ್ಗ ಜಿಲ್ಲೆಯ ಸಾರ್ವಜನಿಕರು ತೆರಳುವ ಸಲುವಾಗಿ ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 90 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. 

ಆದ್ದರಿಂದ ಮಾ. 25 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ. 

Previous post ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ ಡಾ.ಸೆಲ್ವಮಣಿ ಆರ್
Next post ದೇಶದ ಹಿರಿಯ ಪತ್ರಕರ್ತ ಕಾಮ್ರೇಡ್ಎಂ.ಲಿಂಗಪ್ಪ ವಿಧಿವಶ!