bengaluru | Bangalore | What did CM Siddaramaiah say to BJP's criticism of halal budget? bengaluru | ಬೆಂಗಳೂರು | ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

bengaluru | ಬೆಂಗಳೂರು | ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು (bangalore), ಮಾರ್ಚ್ 07: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿಯಾಗಿದ್ದು, ಮೊದಲ ಬಾರಿಗೆ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು  2025-26 ನೇ ಸಾಲಿನ ಆಯವ್ಯಯ ಕುರಿತಂತೆ ಇಂದು ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಆಯವ್ಯಯ ಗಾತ್ರ: 2025-26 ನೇ ಸಾಲಿನ ಮುಂಗಡ ಪತ್ರವನ್ನು ಮಂಡಿಸಲಾಗಿದ್ದು, ಕರ್ನಾಟಕ ಸರ್ಕಾರ ಕಳೆದ ಸಾಲಿನಲ್ಲಿ 3,71,121 ಕೋಟಿ  ಬಜೆಟ್ ಮಂಡಿಸಿತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ಮೊದಲ ಬಾರಿಗೆ ನಮ್ಮ ರಾಜ್ಯದ ಆಯವ್ಯಯ ಗಾತ್ರ 4 ಲಕ್ಷ ಕೋಟಿ ರೂ.ಗಳ ಗಡಿ ದಾಟಿರುವುದು ಒಂದು ಹೊಸ ಮೈಲಿಗಲ್ಲು.  ಕಳೆದ ಬಾರಿಗಿಂತ ಈ ಬಾರಿ 38166 ಕೋಟಿ ರೂ.ಗಳು ಹೆಚ್ಚಾಗಿದೆ. ಬಜೆಟ್ ನ ಬೆಳವಣಿಗಯ ದರ  10.3 ರಷ್ಟು ಹೆಚ್ಚಳವಾಗಿದೆ.

ರಾಜಸ್ವ ಸ್ವೀಕೃತಿ: ಕಳೆದ ವರ್ಷ ರಾಜಸ್ವ ಸ್ವೀಕೃತಿಗಳು, 263178 ಕೋಟಿ ಇದ್ದು ಈ ಬಾರಿ 2,92,477 ಕೋಟಿ ರೂ. ಇದೆ. 2024-25ರ ಆಯವ್ಯಯಕ್ಕೆ ಹೋಲಿಸಿದರೆ 29,299 ಕೋಟಿ ಹೆಚ್ಚಾಗಿದೆ –ಬೆಳವಣಿಗೆ ದರ 11.1 % ರಷ್ಟಿದೆ. 2024-25ರ ರಲ್ಲಿ ರಾಜಸ್ವ ವೆಚ್ಚ 2,90,531 ಕೋಟಿ ಇದ್ದದ್ದು, 2025-26ರಲ್ಲಿ  3,11,739 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 21,207 ಕೋಟಿ ಹೆಚ್ಚಳ-ಬೆಳವಣಿಗೆ ದರ  7.3 % ರಷ್ಟಿದೆ ಎಂದರು.

ವಿತ್ತೀಯ ಶಿಸ್ತು: 2024-25ರಲ್ಲಿ  ಸಾಲ 1,05,246 ಕೋಟಿ , ಈ ವರ್ಷ ಸಾಲ 1,16,000 ಕೋಟಿ , 2024-25ರ ಆಯವ್ಯಯಕ್ಕೆ ಹೋಲಿಸಿದರೆ 10,754 ಕೋಟಿ ಹೆಚ್ಚಳವಾಗಿದೆ(10.2% ರಷ್ಟು ಹೆಚ್ಚಳ). ಇದಕ್ಕೆ ವಿರೋಧಪಕ್ದದವರು ಟೀಕಿಸುತ್ತಾರೆ . ನಮಗೆ ಸಾಲ ಮಾಡುವ ಅವಕಾಶವೆಷ್ಟಿದೆ.  ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP  ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆಯನ್ನು  GSDPಯ  ಶೇ.3 ರಷ್ಟುನ್ನು ಮೀರಬಾರದೆಂದಿದ್ದು,  2.95 % ರಷ್ಟಿದೆ ಎಂದರು.

ಆರ್ಥಿಕ ಶಿಸ್ತು ಪಾಲನೆ : ರಾಜಸ್ವ ಕೊರತೆ  19262 ಕೋಟಿ ಇದೆ . ಈ ಬಾರಿ ರಾಜಸ್ವ ಕೊರತೆಯಿಂದ ರಾಜಸ್ವ ಹೆಚ್ಚುವರಿ  ಸ್ಥಿತಿಗೆ ಬರಲಿದ್ದೆವೆ. 2024-25 ರಲ್ಲಿ ರಾಜಸ್ವ ಕೊರತೆ 0.95 ಇತ್ತು, 2025-26ರಲ್ಲಿ 0.63 ಆಗಿದೆ.  ರಾಜ್ಯದ GSDP ಕಳೆದ ವರ್ಷ 28,61929 ಕೋಟಿಗಳಾಗಿತ್ತು, 2025-26 ರಲ್ಲಿ 30,70,103 ಕೋಟಿಯಾಗಿದೆ, ಇದರಲ್ಲಿ ಶೇ. 25 ರಷ್ಟು ಸಾಲ ಪಡೆಯಬಹುದಾಗಿದ್ದು,  ಸರ್ಕಾರ ಆರ್ಥಿಕ ಶಿಸ್ತನ್ನು ಪಾಲನೆ ಮಾಡಿದೆ .ಆಯವ್ಯಯದಲ್ಲಿ ಬಡವರು, ಮಹಿಳೆಯರು, ಕಾರ್ಮಿಕರು, ದುರ್ಬಲರಿಗೆ, ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಆರ್ಥಿಕ ಬೆಳವಣಿಗೆಗೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ವಿವರಿಸಿದರು.

ಪದದ ಅರ್ಥ ಗೊತ್ತೇ? : ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣಗಾರಿಕೆ ಅಧಿನಿಯಮದ ಬಗ್ಗೆ ತಿಳಿಯದೇ, ನಮ್ಮ ಆಯವ್ಯಯದ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರದ ವಿತ್ತೀಯ ಕೊರತೆ ಶೇ.  4.61 ರಷ್ಟಿದೆ. ಆದರೆ ರಾಜ್ಯದ ವಿತ್ತೀಯ ಕೊರತೆ ಶೇ.2.95  ರಷ್ಟಿದೆ. ಕೇಂದ್ರಸರ್ಕಾರದ ಬಜೆಟ್ 50 ಲಕ್ಷ ಕೋಟಿಯಲ್ಲಿ 15.66 ಲಕ್ಷ ಕೋಟಿ ಸಾಲ ಪಡೆದಿದ್ದು( ಶೇ.56 ಸಾಲ), ರಾಜ್ಯ  2.95 ರಷ್ಟು ಸಾಲ ಪಡೆದಿದ್ದೇವೆ. ಅಶೋಕ್ ರವರು ರಾಜಕೀಯಕ್ಕಾಗಿ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ದಿವಾಳಿ ಪದದ ಅರ್ಥ ಗೊತ್ತೇ?  ರಾಜ್ಯಸರ್ಕಾರ ಆರ್ಥಿಕವಾಗಿ ಸದೃಢವಾಗಿದ್ದು, ಆರ್ಥಿಕ ಶಿಸ್ತನ್ನು ಪಾಲಿಸಲಾಗುತ್ತಿದೆ. ವಿತ್ತೀಯ ಹೊಣೆಗಾರಿಕೆ ಕಾಯ್ದೆಯ ಮಾನದಂಡಗಳನ್ನು ಪಾಲಿಸಲಾಗಿದೆ ಎಂದರು.

ನುಡಿದಂತೆ ನಡೆದ ಸರ್ಕಾರ : ಹಿಂದಿನ ನಮ್ಮ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಆಭಿವೃದ್ಧಿಗೂ ಹಣ ಖರ್ಚು ಮಾಡಿ,  ಗ್ಯಾರಂಟಿಗಳಿಗೆ 52009 ಕೊಟಿ , ಎಲ್ಲ ಗ್ಯಾರಂಟಿಗಳು ಜಾರಿಯಾಗಿದೆ. ಮುಂದಿನ ವರ್ಷವೂ ಮುಂದುವರೆಸುತ್ತೆವೆ. ಈ ವರ್ಷ ಬಜೆಟ್ ನಲ್ಲಿ   ಗ್ಯಾರಂಟಿಗಳಿಗೆ 51034 ಕೋಟಿ ಮೀಸಲಿರಿಸಿದ್ದೇವೆ. 2025-26ನೇ ಸಾಲಿಗೆ ಗೃಹಲಕ್ಷ್ಮಿ ಯೋಜನೆಗೆ 28608 ಕೋಟಿಗಳನ್ನು ಮೀಸಲಿರಿಸಿದೆ. 

ಗೃಹಜ್ಯೋತಿ ಯೋಜನೆ 10,100 ಕೋಟಿ , ಅನ್ನಭಾಗ್ಯ ಯೋಜನೆಗೆ 6426 ಕೋಟಿ , ಶಕ್ತಿ ಯೋಜನೆಗೆ 5,300 ಕೋಟಿ, ಯುವನಿಧಿ ಯೋಜನೆಗೆ 600 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಈ ಬಾರಿ ಆಯವ್ಯಯದಲ್ಲಿ ಎಲ್ಲಾ ಇಲಾಖೆಗಳಿಗೆ ಹೆಚ್ಚು ಅನುದಾನ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳಿಗೆ ಅನುದಾನದ ಕೊರತೆ ಇಲ್ಲ. ಬಿಜೆಪಿಯವರ ಹೇಳಿಕೆಗಳು ಸತ್ಯಕ್ಕೆ ದೂರವಾದುದು. ದೆಹಲಿ, ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಹರಿಯಾಣಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.

ಹಲಾಲ್ ಬಜೆಟ್ ಟೀಕೆ : ಗ್ಯಾರಂಟಿಗಳನ್ನು ಮದ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಫಲಾನುಭವಿಗಳಿಗೆ ಡಿಬಿಟಿ ಮಾಡಲಾಗುತ್ತಿದ್ದು, ಸಾರ್ವತ್ರಿಕ ಮೂಲ ಆದಾಯ  ತತ್ವದ ಆಧಾರದ ಮೇಲೆ ರೂಪಿಸಲಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 232 ಕೋಟಿಗಳು  ವೆಚ್ಚವಾಗುತ್ತಿದೆ. ಜನರಿಗೆ ಆರ್ಥಿಕ ಬಲ ತುಂಬಿದರೆ, ಅವರ ಖರೀದಿ ಶಕ್ತಿಯೂ ಹೆಚ್ಚಿ, ರಾಜ್ಯದ ಆರ್ಥಿಕತೆಯೂ ಬೆಳೆಯುತ್ತದೆ.

ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದರು.

ಯೋಜನೆ : ಎಸ್ ಸಿ ಎಸ್ ಪಿ- ಟಿಎಸ್ ಪಿ ಯೋಜನೆಗಳಿಗೆ 42000 ಕೋಟಿ ನೀಡಲಾಗುತ್ತಿದೆ. ಅಲ್ಪಸಂಖ್ಯಾತರಿಗೆ 4500 ಕೋಟಿ, ಓಬಿಸಿಗೆ 4300 ಕೋಟಿ ನೀಡಲಾಗಿದೆ. ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು SCP TSP  ಕಾಯ್ದೆ ಮಾಡಿ ಜಾರಿಗೊಳಿಸಿದ್ದಾರೆಯೇ ? ಎಂದು ಪ್ರಶ್ನಿಸಿದರು.

ಕರ್ನಾಟಕದ ಮಾದರಿಯಲ್ಲಿ ಕೇಂದ್ರದಲ್ಲಿ ಜಾರಿ ಮಾಡಿ ಎಂದು ಹೇಳಲು ರಾಜ್ಯ ಬಿಜೆಪಿಯವರಿಗೆ ಧೈರ್ಯವಿಲ್ಲ ಎಂದು ಟೀಕಿಸಿದ ಮುಖ್ಯಮಂತ್ರಿಗಳು, ಬಿಜೆಪಿಗೆ ನಮ್ಮನ್ನು ಪ್ರಶ್ನಿಸಲು ಯಾವ ನೈತಿಕತೆ ಇದೆ.  ,ಅಲ್ಪಸಂಖ್ಯಾತರು  ಶಿಕ್ಷಣದಿಂದ ವಂಚಿತರು. 75% ಅಲ್ಪಸಂಖ್ಯಾತರಿಗೆ ಹಾಗೂ 25% ಇತರರಿಗೂ ಅವರ ಸಂಸ್ಥೆಯಲ್ಲಿ ಅವಕಾಶನೀಡಿದೆ. ಅಲ್ಪಸಂಖ್ಯಾತರಿಗೆ ಶಿಕ್ಷಣ ನೀಡಿದರೆ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ.

ನಾವು ಅವರಂತೆ ಸಬ್ ಕ ಸಾಥ್, ಸಬ್ ಕ ವಿಕಾಸ್ ಎಂದು ಹೇಳುವುದಿಲ್ಲ. ಇದು ಬಹುತ್ವದ ದೇಶ. ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಅದರಲ್ಲಿ ನಮಗೆ ನಂಬಿಗೆ ಇದೆ. ಬಿಜೆಪಿ ಜಾತ್ಯಾತೀತೆಯ  ವಿರೋಧಿಗಳು , ಭಾರತ ಬಹುತ್ವದ ದೇಶ, ಯಾವುದೇ ಒಂದು ಧರ್ಮ , ಜಾತಿಗೆ ಸೇರಿಲ್ಲ. ಸಂವಿಧಾನ, ಎಲ್ಲರಿಗೂ ಸಮಾನ ಅವಕಾಶ ನೀಡಬೇಕು ಎಂದು ಹೇಳಿದೆ. ಬಿಜೆಪಿಯವರು ಸಂವಿಧಾನದ ಆಶಯಗಳನ್ನು ಪಾಲಿಸುವುದಿಲ್ಲ.

ಅವರು  ಜಾತ್ಯಾತೀತತೆ, ಬಹುತ್ವ, ಹಾಗೂ ಸಂವಿಧಾನದ ವಿರುದ್ಧವಾಗಿದ್ದಾರೆ. ನಮ್ಮ ಬಜೆಟ್ ದೂರದೃಷ್ಟಿಯ, ಸಮಾನತೆ,  ಸಾಮಾಜಿಕ ಬೆಳವಣಿಗೆ, ಆರ್ಥಿಕ ಹೊಣೆಗಾರಿಕೆ ಅಧಿನಿಯಮದ ಮಾನದಂಡಗಳೊಳಗೆ ಬಜೆಟ್ . 94-95 ರಲ್ಲಿ 13 ಸಾವಿರ ಕೋಟಿ ಬಜೆಟ್ , 4 ಲಕ್ಷ ಕೋಟಿಗಳ ಗಾತ್ರಕ್ಕೆ ಎರಿರುವುದು ಸಂತಸದ ತಂದಿದೆ . ಸರ್ವರಿಗೂ ಸಮಪಾಲು, ಸಮಬಾಳು ದೊರಕಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಧರ್ಮದ ಆಧಾರದ ಮೇಲೆ ನೀಡಿಲ್ಲ : ಅಲ್ಪಸಂಖ್ಯಾತರಿಗೆ ಸರ್ಕಾರದ ಗುತ್ತಿಗೆಯಲ್ಲಿ  ಮೀಸಲಾತಿ   ನೀಡಿರುವ ಕುರಿತು ಮಾಧ್ಯಮದವರ  ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಅಲ್ಪಸಂಖ್ಯಾತರ ಸಾಕ್ಷರತಾ ಪ್ರಮಾಣ ಎಷ್ಟಿದೆ  ಎಂದು ಪ್ರಶ್ನಿಸಿ ಮೀಸಲಾತಿ ನೀಡಿರುವುದು ಧರ್ಮದ ಆಧಾರದ ಮೇಲೆ ಅಲ್ಲ . 2 ಎ, ಎಸ್‌ಸಿ, ಎಸ್‌ಟಿ, ಪ್ರವರ್ಗ 1  ಕೊಟ್ಟಿಲ್ಲವೇ? ಕೇವಲ ಮುಸ್ಲಿಂರದ್ದು ಮಾತ್ರ ಯಾಕೆ ಹೇಳುತ್ತೀರಿ  ? ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು.  ಪ್ರತಿಪಕ್ಷಗಳಿಗೆ ಅಲ್ಪಸಂಖ್ಯಾತರನ್ನು ಆಕ್ಷೇಪಿಸುವುದೇ ಕೆಲಸ ಎಂದರು.

ಕೇಂದ್ರದ ಅಸಹಕಾರ : ನೀರಾವರಿ ಯೋಜನೆಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಇನ್ನೂ ಹೊರಡಿಸಿಲ್ಲ.  ಭದ್ರಾ ಮೇಲ್ದಂಡೆಗೆ 5300 ಕೋಟಿಗಳನ್ನು ಬಜೆಟ್ ನಲ್ಲ ಘೋಷಿಸಿದ್ದರೂ ಈವರೆಗೆ ಅನುದಾನ ಬಿಡುಗಡೆಯಾಗಿಲ್ಲ. 15 ನೇ ಹಣಕಾಸು ಆಯೋಗದಲ್ಲಿ ವಿಶೇಷ ಅನುದಾನ ಕೊಡಲು ಶಿಫಾರಸ್ಸು ಮಾಡಿದ್ದರೂ, ಕೇಂದ್ರ ಹಣ ಬಿಡುಗಡೆ ಮಾಡಿಲ್ಲ.  ರಾಜ್ಯದ ಬಗ್ಗೆ ಕಳಕಳಿ ಇದ್ದಿದ್ದಲ್ಲಿ ರಾಜ್ಯದ ಶಾಸಕರು, ಸಂಸದರು ಈ ಬಗ್ಗೆ ಪ್ರಶ್ನೆ ಕೇಳಬೇಕಿತ್ತು. ಸರ್ಕಾರ ದೆಹಲಿಯಲ್ಲಿ ಈ ಬಗ್ಗೆ ಪ್ರತಿಭಟನೆ ಮಾಡಿದರೂ ಪ್ರಯೋಜನವಾಗಿಲ್ಲ ಎಂದರು.

ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ. Previous post shimoga | ಏರುತ್ತಿರುವ ರಣ ಬಿಸಿಲು : ನಾಗರೀಕರಿಗೆ ಶಿವಮೊಗ್ಗ ಡಿಸಿ ನೀಡಿದ ಮಹತ್ವದ ಸಲಹೆಯೇನು?
Shimoga | Shivamogga: When will the Upa Lokayukta hear the public's complaints? Where? shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಲಿರುವ ಉಪ ಲೋಕಾಯುಕ್ತರು, ಯಾವಾಗ? ಎಲ್ಲಿ? Next post shimoga | ಶಿವಮೊಗ್ಗ : ಸಾರ್ವಜನಿಕರ ಅಹವಾಲು ಆಲಿಸಲಿರುವ ಉಪ ಲೋಕಾಯುಕ್ತರು, ಯಾವಾಗ? ಎಲ್ಲಿ?