ಚುನಾವಣೆಗೆ ಮಕ್ಕಳ ಬಳಕೆ ನಿರ್ಬಂಧ : ಶಿಸ್ತುಕ್ರಮದ ಎಚ್ಚರಿಕೆ!

ಶಿವಮೊಗ್ಗ, ಮಾ. 28: ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯ ಹಾಗೂ ಚುನಾವಣೆ ಸಂಬಂಧಿತ ಕೆಲಸಕಾರ್ಯಗಳಲ್ಲಿ, ಮಕ್ಕಳ ಬಳಕೆ ಮಾಡಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು, ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆ 1992 ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ.

ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಮಕ್ಕಳು ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿದೆ.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಅಗತ್ಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೋರಿದ್ದು, ಮಕ್ಕಳನ್ನು ಚುನಾವಣಾ ಕಾರ್ಯಗಳಲ್ಲಿ ಬಳಸಿಕೊಂಡಲ್ಲಿ ಕಾಯ್ದೆ ಅನ್ವಯ ಸೂಕ್ತ ಶಿಸ್ತಿನ ಕ್ರಮ ಜರುಗಿಸಲಾಗುವುದು ಎಂದು ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

#ಬಣಜಾರಸಮುದಾಯದಪ್ರತಿಭಟನೆ, Previous post ಶಿವಮೊಗ್ಗ – ಶಿಕಾರಿಪುರ ಹೆದ್ದಾರಿ ಮಧ್ಯೆ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ
Next post ಪ್ರಿಂಟಿಂಗ್ ಪ್ರೆಸ್ ಮಾಲೀಕರು – ಕೇಬಲ್ ಟಿವಿ ಆಪರೇಟರ್‌ಗಳಿಗೆ ಡಿಸಿ ನೀಡಿದ ಖಡಕ್ ಸೂಚನೆಯೇನು?