
ಒಳ ಮೀಸಲಾತಿ ವಿರುದ್ದ ರಾಷ್ಟ್ರೀಯ ಹೆದ್ಧಾರಿಯಲ್ಲಿ ಪ್ರತಿಭಟನೆ : ಟೈರ್ ಗಳಿಗೆ ಬೆಂಕಿ!
ಶಿವಮೊಗ್ಗ, ಮಾ. 28: ಒಳ ಮೀಸಲಾತಿ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ, ಬುಧವಾರ ಬೆಳಿಗ್ಗೆ ಶಿವಮೊಗ್ಗ ನಗರದ ಹೊರವಲಯ ಗಾಡಿಕೊಪ್ಪದ ರಾಷ್ಟ್ರೀಯ ಹೆದ್ಧಾರಿಯಲ್ಲಿ ಸ್ಥಳೀಯ ಬಣಜಾರ ಸಮುದಾಯದವರು ದಿಢೀರ್ ಪ್ರತಿಭಟನೆ ನಡೆಸಿದರು!
ಪ್ರತಿಭಟನಾಕಾರರು ಹೆದ್ಧಾರಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ, ಸರ್ಕಾರದ ಪ್ರತಿಕೃತಿ ದಹಿಸಿ, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ದಿಢೀರ್ ಪ್ರತಿಭಟನೆಯಿಂದ ಸ್ಥಳದಲ್ಲಿ ಕೆಲ ಸಮಯ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಹೆದ್ದಾರಿಯ ಮತ್ತೊಂದು ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಪೊಲೀಸರು ಅವಕಾಶ ಕಲ್ಪಿಸಿದ್ದರಿಂದ, ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಗಲಿಲ್ಲ.
ಸ್ಥಳದಲ್ಲಿ ಭಾರೀ ಸಂಖ್ಯೆಯ ಪೊಲೀಸರು ಜಮಾಯಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿತ್ತು.
In##ಒಳಮೀಸಲಾತಿ, #banjaracommunity, #banjaracommunityprotest, #banjaraprotest, #internalreservation, #lambani, #reservation, #Shivamogga, #shivamogganews #shimoganews, #udayasaakshi, #udayasaakshi #ಉದಯಸಾಕ್ಷಿ #ಉದಯಸಾಕ್ಷಿನ್ಯೂಸ್ #udayasaakshinews #shimoga #shimoganews #shimogalocalnews #shivamogganews #ಶಿವಮೊಗ್ಗ #ಶಿವಮೊಗ್ಗಸುದ್ದಿ, #ಒಳಮೀಸಲಾತಿ, #ಪ್ರತಿಭಟನೆ, #ಬಂಜಾರ, #ಬಣಜಾರಸಮುದಾಯ, #ಬಣಜಾರಸಮುದಾಯದಪ್ರತಿಭಟನೆ, #ರಸ್ತೆತಡೆ, #ರಾಜ್ಯಸರ್ಕಾರದ ವಿರುದ್ದಆಕ್ರೋಶ, #ಲಂಬಾಣಿ