
jogfalls |ಜೋಗ ಜಲಪಾತಕ್ಕೆ ಪ್ರವೇಶ ನಿರ್ಬಂಧ ಎಲ್ಲಿಯವರೆಗೆ? ಕಾರಣವೇನು?
ಶಿವಮೊಗ್ಗ (shivamogga), ಮಾ. 14 : ಜಿಲ್ಲೆಯ ವಿಶ್ವ ವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ, ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ.
ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ, ಏ.30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ಈ ಕುರಿತಂತೆ ಮಾರ್ಚ್ 14 ರಂದು ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಮಗಾರಿ ಅನುಷ್ಠಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂಬ ಹಿತದೃಷ್ಟಿಯಿಂದ, ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜನವರಿ 1 ರಿಂದ ಮಾರ್ಚ್15 ರವರೆ ಮುಚ್ಚಲಾಗಿತ್ತು.
ಮಾ.15 ರ ವೇಳೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿ ಪೂರ್ಣಗೊಳ್ಳದ ಕಾರಣದಿಂದ, ಏಪ್ರಿಲ್ 30 ರವರೆಗೆ ಪ್ರವೇಶ ನಿರ್ಬಂಧ ವಿಸ್ತರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರು ಸೂಕ್ತ ಸಹಕಾರ ನೀಡಬೇಕು ಎಂದು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಆದ ಡಿಸಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-251444 ಸಂಪರ್ಕಿಸಬಹುದಾಗಿದೆ ಎಂದು ಇದೇ ವೇಳೆ ಮಾಹಿತಿ ನೀಡಿದ್ದಾರೆ.
Shivamogga. Mar 14: In the wake of the construction work at the main entrance of the world-famous Jog Falls, entry to the Jog Falls for the general public and tourists has been restricted until April 30, said Shivamogga dc Gurudatta Hegde. He issued a press statement in this regard on March 14. He informed that the work on the main gate of Jog Falls needs to be completed within the time limit.
In this context, DC Gurudatta Hegde, who is also the Chief Executive Officer of the Jog Management Authority, has appealed to the public and tourists to provide appropriate cooperation.