milk price hike | Nandini milk price hike: More burden on consumers! milk price hike | ನಂದಿನಿ ಹಾಲಿನ ದರ ಹೆಚ್ಚಳ : ಗ್ರಾಹಕರಿಗೆ ಮತ್ತಷ್ಟು ಹೊರೆ!

milk price hike | ಹಾಲಿನ ದರ ಏರಿಕೆ ಪ್ರಸ್ತಾಪ : ಸಚಿವ ಸಂಪುಟದ ತೀರ್ಮಾನದತ್ತ ಚಿತ್ತ!

ಬೆಂಗಳೂರು (bengaluru), ಮಾ. 24: ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾ. 24 ರಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಹಾಲಿನ ದರ ಏರಿಕೆ ಮಾಡಬೇಕೆಂಬ ಒಕ್ಕೂಟಗಳ ಒತ್ತಡಕ್ಕೆ ಮುಖ್ಯಮಂತ್ರಿಗಳು ಮಣೆ ಹಾಕಿಲ್ಲ. ಈ ಕುರಿತಂತೆ ಸಚಿವ ಸಂಪುಟಕ್ಕೆ ವಿಷಯ ರವಾನಿಸಿ, ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ರೈತರಿಗೆ ನೀಡಬೇಕು : ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಿದರು. ಹಾಲಿನ ದರ  ಹೆಚ್ಚಳ ಮಾಡಿದರೆ, ಅದರ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

ಹಾಲು ಒಕ್ಕೂಟಗಳು ಖರ್ಚು-ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆ ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದು ಹೇಳಿದರು.

ಆಡಳಿತಾತ್ಮಕ ವೆಚ್ಚ ಯಾವುದೇ ಕಾರಣಕ್ಕೂ ಶೇ.2ಕ್ಕಿಂತ ಹೆಚ್ಚಾಗಬಾರದು. ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2 ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸಿಎಂ ಸೂಚಿಸಿದರು.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ. ಹಾಲಿನ ದರ ಹೆಚ್ಚಳ ಮಾಡಿದರೆ. ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ.

ಬಳ್ಳಾರಿ  ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಒಕ್ಕೂಟಗಳು ಮನವಿ ಮಾಡಿದರು.. ಇದಕ್ಕೆ ಸಿಎಂ ಸ್ಪಷ್ಟ ನಿರಾಕರಣೆ ಮಾಡಿದ್ದಾರೆ.

Bengaluru, Mar. 24: Regarding the increase in milk prices, Chief Minister Siddaramaiah held a meeting with the President of the Karnataka Cooperative Milk Producers’ Federation Limited and the President and Managing Director of the District Milk Federation at Kaveri Niwas in Bengaluru on Mar. 24.

The Chief Minister has not bowed to the pressure of the unions to increase the price of milk. The matter has been forwarded to the Cabinet and a decision has been taken in the meeting to decide on the price increase after discussing it in the Cabinet meeting.

Bhadravati: A young man who left home in the evening mysteriously disappeared! bhadravati | ಭದ್ರಾವತಿ : ಸಂಜೆ ವೇಳೆ ಮನೆಯಿಂದ ಹೊರಹೋದ ಯುವಕ ನಿಗೂಢ ಕಣ್ಮರೆ! Previous post bhadravati | ಭದ್ರಾವತಿ : ಸಂಜೆ ವೇಳೆ ಮನೆಯಿಂದ ಹೊರಹೋದ ಯುವಕ ನಿಗೂಢ ಕಣ್ಮರೆ!
shimoga | Shimoga: Heavy rain is forecast to continue! shimoga | ಶಿವಮೊಗ್ಗ : ಭಾರೀ ಮಳೆ ಮುಂದುವರಿಕೆ ಮುನ್ಸೂಚನೆ! Next post shimoga rain | ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡಿನಲ್ಲಿ ಬೇಸಿಗೆ ಮಳೆ ಮುನ್ಸೂಚನೆ!