ಚೆಕ್ ಪೋಸ್ಟ್ ಗಳಿಗೆ ಡಿಸಿ ದಿಢೀರ್ ಭೇಟಿ!

ಶಿವಮೊಗ್ಗ, ಮಾ. 31: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. 

ಶಿವಮೊಗ್ಗ, ಸಾಗರ ಸೇರಿದಂತೆ ವಿವಿಧ ತಾಲೂಕುಗಳ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಚೆಕ್ ಪೋಸ್ಟ್ ಗಳಲ್ಲಿದ್ದ ಅಧಿಕಾರಿ – ಸಿಬ್ಬಂದಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಚುನಾವಣಾ ಮಾದರಿ ನೀತಿ – ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಯಾವುದೇ ಗೊಂದಲ, ಗಡಿಬಿಡಿ ಆಸ್ಪದವಾಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

Previous post ಮತದಾರರಿಗೆ ಆಮಿಷ – ಶಿಕ್ಷಾರ್ಹ ಅಪರಾಧ! : ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಎಚ್ಚರಿಕೆ
ಸೂಕ್ತ ದಾಖಲೆಯಿಲ್ಲದೆ ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆದ ಘಟನೆ, ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. 'ಒಟ್ಟಾರೆ 26 ಕ್ವಿಂಟಾಲ್ ತೂಕದ 100 ಬ್ಯಾಗ್ ಅಕ್ಕಿ ಚೀಲಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಅಂದಾಜು ಮೌಲ್ಯ 1.56 ಲಕ್ಷ ರೂ.ಗಳಾಗಿದೆ' ಎಂದು ಜಿಲ್ಲಾ ಪೊಲೀಸ್ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Next post ಲಾರಿಯಲ್ಲಿ ಸಾಗಾಣೆ ಮಾಡುತ್ತಿದ್ದ ಲಕ್ಷಾಂತರ ರೂ. ಮೌಲ್ಯದ ಅಕ್ಕಿ ವಶ!