
bhadra dam | ಭದ್ರಾ ಜಲಾಶಯದಿಂದ 2 ಟಿಎಂಸಿ ನೀರು ಹರಿಸಲು ನಿರ್ಧಾರ : ಕಾರಣವೇನು?
ಬೆಂಗಳೂರು / ಶಿವಮೊಗ್ಗ, ಮಾ. 30: ಶಿವಮೊಗ್ಗ – ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿ ಎಂದೇ ಕರೆಯಲಾಗುವ ಭದ್ರಾ ಜಲಾಶಯದಿಂದ, ಕಲ್ಯಾಣ ಕರ್ನಾಟಕ ಭಾಗಕ್ಕೆ 2 ಟಿಎಂಸಿ ನೀರು ಹರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಮಾ. 30 ರಂದು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ, ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಎಪ್ರಿಲ್ 1 ರಿಂದ 5 ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಅಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆಎಂದು ಹೇಳಿದ್ದಾರೆ.
ಮಾರ್ಚ್ 30 ರ ಮಾಹಿತಿಯಂತೆ ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8 ರವರೆಗೆ ನೀರಾವರಿಗೆ 11 ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14 ಟಿಎಂಸಿ ಅಗತ್ಯವಿದೆ. 3 ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6 ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
Bengaluru / Shivamogga, Mar. 30: The state government has decided to release 2 TMC of water from the Bhadra reservoir to the Kalyan Karnataka region. bhadra dam which is known as the lifeline of farmers in Shivamogga and Davangere districts.
In this regard, CM Siddaramaiah issued a notification on March 30. The Chief Minister said that as a Ugadi gift to the farmers of Kalyan Karnataka region, two TMC of water will be released from the Bhadra reservoir to the Tungabhadra canal.
It has been decided to release water into the canal between April 1 and 5, which will ensure availability of drinking water for the crops growing in Koppal, Raichur and Yadgir districts and the people there, he said.