
shimoga | ಶಿವಮೊಗ್ಗ : ಗಾಂಜಾ ಸಾಗಾಣೆ ವೇಳೆ ಸಿಕ್ಕಿಬಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ!
ಶಿವಮೊಗ್ಗ (shivamogga), ಏ. 5: ಗಾಂಜಾ ಸಾಗಾಣೆ ಮಾಡುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೋರ್ವನಿಗೆ, 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಏಪ್ರಿಲ್ 4 ರಂದು ತೀರ್ಪು ನೀಡಿದೆ.
ಭದ್ರಾವತಿ ತಾಲೂಕು ಕಲ್ಲಹಳ್ಳಿ ಗ್ರಾಮದ ನಿವಾಸಿ ಮುರುಗ ಎಲ್ (34) ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಶಿಕ್ಷೆಯ ಜೊತೆಗೆ 1 ಲಕ್ಷ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 2 ವರ್ಷ ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್‌ರವರು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಸುರೇಶ್ ಕುಮಾರ್ ಎ ಎಂ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : ಶಿಕ್ಷೆಗೊಳಗಾದ ಮುರುಗ ಎಲ್ 2021 ರಲ್ಲಿ ಓಮ್ನಿ ವ್ಯಾನ್ ನಲ್ಲಿ, ಆಂಧ್ರಪ್ರದೇಶದ ರಾಜಮಂಡ್ರಿಯಿಂದ 50 ಕೆಜಿ 430 ಗ್ರಾಂ ತೂಕದ ಒಣ ಗಾಂಜಾವನ್ನು, ಸಾಗಾಣೆ ಮಾಡುತ್ತಿರುವ ವೇಳೆ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡ ಸೆರೆ ಹಿಡಿದಿತ್ತು.
ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆ 1985 ರ ಕಲಂ 8 (ಸಿ), 20 (ii) (ಸಿ), 20 (ಬಿ), 25 ರ ಅಡಿಯಲ್ಲಿ ಪ್ರಕರಣದ ದಾಖಲಿಸಿಕೊಳ್ಳಲಾಗಿತ್ತು. ನಂತರ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.
Shivamogga, Apr. 5: The Principal District and Sessions Court of Shivamogga sentenced a person who was caught transporting ganja to 10 years rigorous imprisonment on April 4. Muruga L (34), a resident of Kallahalli village in Bhadravati taluk, has been identified as the convicted person. Along with the sentence, a fine of Rs. 1 lakh has been imposed. In case of failure to pay the fine, the court has ordered him to undergo an additional 2 years of simple imprisonment.