#ಕರ್ನಾಟಕವಿಧಾನಸಭೆ ಚುನಾವಣೆ2023 #ಕರ್ನಾಟಕವಿಧಾನಸಭೆಎಲೆಕ್ಷನ್, #ಕರ್ನಾಟಕವಿಧಾನಸಭೆ, #ವಿಧಾನಸಭೆಚುನಾವಣೆ, #ಅಸೆಂಬ್ಲಿಎಲೆಕ್ಷನ್, #ಕರ್ನಾಟಕವಿಧಾನಸಭೆಚುನಾವಣೆಗೆವೇಳಾಪಟ್ಟಿಪ್ರಕಟ, #ಅಸೆಂಬ್ಲಿಎಲೆಕ್ಷನ್, #ವಿಧಾನಸಭೆಚುನಾವಣೆ, #ಚುನಾವಣಾವೇಳಾಪಟ್ಟಿ,

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಡಿಸಿ ನೀಡಿದ ಸೂಚನೆಯೇನು?

ಶಿವಮೊಗ್ಗ, ಏ. 2: ವಿಧಾನಸಭೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು, ಮಾದರಿ ನೀತಿ-ಸಂಹಿತೆ ಉಲ್ಲಂಘನೆಗೆ ಆಸ್ಪದವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಭಾನುವಾರ ಶಿವಮೊಗ್ಗ ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ, ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ವೇಳೆ ಅವರು ಈ ಸೂಚನೆ ನೀಡಿದ್ದಾರೆ.

ಎಲ್ಲ ಚುನಾವಣಾಧಿಕಾರಿಗಳು ಮತಗಟ್ಟೆಗಳಿಗೆ ತೆರಳಿ ಅಲ್ಲಿರುವ ಸೌಲಭ್ಯಗಳ ಪರಿಶೀಲನೆ ನಡೆಸಬೇಕು. ಚುನಾವಣಾ ಪ್ರಕ್ರಿಯೆ ಕುರಿತು, ಈಗಿನಿಂದಲೇ ಸಮರ್ಪಕವಾದ ಯೋಜನೆ ಹಾಕಿಕೊಂಡು ಕಾರ್ಯನಿರ್ವಹಿಸಬೇಕು.

ಪ್ರತಿ ಮತಗಟ್ಟೆಗೆ ಪಂಚಾಯಿತಿ ಅಥವಾ ಇತರೆ ಸ್ಥಳೀಯ ಸಂಸ್ಥೆಗಳಿಂದ ಒಬ್ಬರನ್ನು ನಿಯೋಜಿಸಬೇಕು. ಇಓ, ಚೀಫ್ ಆಫೀಸರ್, ಪಿಡಿಓ ಗಳು ಮತಗಟ್ಟೆಗಳು ಹಾಗೂ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಿದ ಅಧಿಕಾರಿ/ಸಿಬ್ಬಂದಿಗಳು ಮೂಲಸೌಕರ್ಯಗಳ ಕುರಿತಂತೆ ನಿಗಾವಹಿಸಬೇಕು ಎಂದು ತಿಳಿಸಿದ್ದಾರೆ.

ಮತಗಟ್ಟೆಗಳಲ್ಲಿ ಮೂಲಸೌಕರ್ಯ, ಚುನಾವಣಾ ಸಿಬ್ಬಂದಿಗಳಿಗೆ ನೀರು, ಊಟದ ವ್ಯವಸ್ಥೆ ಸಮರ್ಪಕವಾಗಿದೆಯೇ ಎಂಬುವುದನ್ನು ಪರಿಶೀಲಿಸಬೇಕು. ಸೌಲಭ್ಯಗಳ ಕೊರತೆಯಿರುವ ಹಳ್ಳಿಗಳಲ್ಲಿ, ಹೆಚ್ಚಿನ ಕಾಳಜಿ ವಹಿಸಿ ವ್ಯವಸ್ಥೆ ಮಾಡಬೇಕು. ಮೂರು ಅಥವಾ ಹೆಚ್ಚು ಮತಗಟ್ಟೆ ಇರುವ ಕ್ಲಸ್ಟರ್ ಮತಗಟ್ಟೆಗಳಲ್ಲಿ, ಪೆಂಡಾಲ್ ಮತ್ತೀತರ ಸೌಕರ್ಯ ಸಮರ್ಪಕವಾಗಿರುವಂತೆ ನಿಗಾ ವಹಿಸಬೇಕು ಎಂದು ಹೇಳಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದರ್, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

ನಾಮಪತ್ರ ಸಲ್ಲಿಕೆ : ಈಗಿನಿಂದಲೇ ಪೂರ್ವತಯಾರಿಗೆ ಸೂಚನೆ

*** ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ತಯಾರಿಯನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ನಾಮಪತ್ರ ಸ್ವೀಕರಿಸುವ ಕುರಿತು ಚುನಾವಣಾಧಿಕಾರಿಗಳು ನಿಯಮಗಳು, ಮಾರ್ಗಸೂಚಿಗಳನ್ನು ಮತ್ತೊಮ್ಮೆ ಓದಿ, ತಿಳಿದುಕೊಂಡು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಬೇಕು. ಮಸ್ಟರಿಂಗ್ ಕೇಂದ್ರಗಳು ಹಾಗೂ` ಇದಕ್ಕೆ ಸಂಬಂಧಿಸಿದ ಸಿಬ್ಬಂದಿಗಳು ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮತದಾರರ ಗುರುತಿನ ಚೀಟಿಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕು. ಹೊಸ ಹಾಗೂ ಉಳಿದ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ವಿತರಿಸಲು ಶೀಘ್ರವೇ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮತದಾನ ಜಾಗೃತಿ ಕಾರ್ಯಕ್ರಮ ಹೆಚ್ಚಿಸಲು ಸಿಇಓ ಸ್ನೇಹಲ್ ಲೋಖಂಡೆ ಸಲಹೆ

*** ಕಳೆದ ವಿಧಾನಸಭೆ ಚುನಾವಣೆ ವೇಳೆ ಕಡಿಮೆ ಮತದಾನವಾದ ಪ್ರದೇಶಗಳಲ್ಲಿ, ಮತದಾನ ಜಾಗೃತಿ ಕಾರ್ಯಕ್ರಮ ಹೆಚ್ಚಿಸಬೇಕು. ಮತದಾನದ ಮಹತ್ವದ ಕುರಿತಂತೆ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಓ) ಸ್ನೇಹಲ್ ಲೋಖಂಡೆ ಸಲಹೆ ನೀಡಿದ್ದಾರೆ.

ಎಫ್‍ಎಸ್‍ಟಿ, ಎಸ್‍ಎಸ್‍ಟಿ, ವಿಎಸ್‍ಟಿ ಮತ್ತು ಇತರೆ ತಂಡಗಳು ತಮ್ಮ ತಮ್ಮ ಕರ್ತವ್ಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಎಲ್ಲ ಹಳ್ಳಿಗಳಲ್ಲಿಯೂ ಮತದಾನ ಜಾಗೃತಿ ಕಾರ್ಯಕ್ರಮ ನಡೆಸಬೇಕು. ಕಸ ಸಂಗ್ರಹ ವಾಹನಗಳಲ್ಲಿ ಮತದಾನ ಮಹತ್ವ-ಅರಿವು ಮೂಡಿಸುವ ಜಿಂಗಲ್‍ಗಳನ್ನು ಹಾಕಬೇಕು. ಸ್ವೀಪ್ ಚಟುವಟಿಕೆಗಳನ್ನು ಸಕ್ರಿಯಗೊಳಿಸಿ ಮತದಾನ ಜಾಗೃತಿ ಮೂಡಿಸಬೇಕು.

ನೋವು ನಿರೋಧಕ, ಹೃದ್ರೋಗ, ಮಧುಮೇಹ, ಮಲೇರಿಯಾ ಸೇರಿದಂತೆ ಹಲವು ಜೀವ ರಕ್ಷಕ ಔಷಧಗಳ ಬೆಲೆ ಏರಿಕೆ ಮಾಡಿರುವ ಕ್ರಮ ಖಂಡನಾರ್ಹ. ತಕ್ಷಣವೇ ಬೆಲೆ ಏರಿಕೆ ಆದೇಶ ಹಿಂಪಡೆಯಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. Previous post ಜೀವ ರಕ್ಷಕ ಔಷಧಗಳ ಬೆಲೆ ಹೆಚ್ಚಳ  : ಮುಖಂಡ ಕಲ್ಲೂರು ಮೇಘರಾಜ್ ಆಕ್ರೋಶ
ಪೊಲೀಸ್ ಧ್ವಜ ದಿನಾಚರಣೆಯ ಹಿನ್ನೆಲೆ… ಕರ್ನಾಟಕ ಪೊಲೀಸ್ ಕಾಯ್ದೆ-1963 ಅಸ್ತಿತ್ವಕ್ಕೆ ಬಂದ ನಂತರ, 2-4-1965 ರಂದು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನುರೂಪಿಸಿ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಏಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆಯನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತದೆ. ಈ ದಿನದಂದು ಪೊಲೀಸ್ ಇಲಾಖೆಯಲ್ಲಿ ನಿವೃತ್ತರಾದ ಅಧಿಕಾರಿ/ಸಿಬ್ಬಂದಿಗಳ ತಮ್ಮ ಸೇವಾವಧಿಯಲ್ಲಿ ನಿರ್ವಹಿಸಿದ ಸೇವೆಯನ್ನು ಸ್ಮರಿಸಲಾಗುತ್ತದೆ. Next post ‘ಪೊಲೀಸ್ ನಿಧಿಯಿಂದ ನೆರವಿನಹಸ್ತ’ : ಎಸ್ಪಿ ಜಿ.ಕೆ.ಮಿಥುನ್ ಕುಮಾರ್