
shimoga | ಶಿವಮೊಗ್ಗ : ಕೌಟಂಬಿಕ ದೌರ್ಜನ್ಯ ಪ್ರಕರಣ – ಪತಿಗೆ ಜೈಲು ಶಿಕ್ಷೆ!
ಶಿವಮೊಗ್ಗ (shivamogga), ಏ. 11: ಕೌಟಂಬಿಕ ದೌರ್ಜನ್ಯ ಪ್ರಕರಣದಲ್ಲಿ ವ್ಯಕ್ತಿಯೋರ್ವನಿಗೆ 1 ವರ್ಷ 6 ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ, ಶಿವಮೊಗ್ಗದ 2 ನೇ ಜೆಎಂಎಫ್’ಸಿ ನ್ಯಾಯಾಲಯ ಇತ್ತೀಚೆಗೆ ತೀರ್ಪು ನೀಡಿದೆ.
ಮೂಲತಃ ಚನ್ನಗಿರಿ ತಾಲೂಕು ರಾಮೇನಹಳ್ಳಿ ಸಮೀಪದ ದೇವರಹಳ್ಳಿ ನಿವಾಸಿ, ಶಿವಮೊಗ್ಗದ ಹೊಸಮನೆಯಲ್ಲಿ ನೆಲೆಸಿದ್ದ ಶಶಿಧರ್ ಶರ್ಮಾ (43) ಶಿಕ್ಷೆಗೊಳಗಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 7 ತಿಂಗಳ ಕಾಲ ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.
ನ್ಯಾಯಾಧೀಶರಾದ ಶಾರದಾ ಕೊಪ್ಪದ ಅವರು 3-4-2025 ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಕಿರಣ್ ಕುಮಾರ್ ಅವರು ವಾದ ಮಂಡನೆ ಮಾಡಿದ್ದರು.
ಪ್ರಕರಣದ ಹಿನ್ನೆಲೆ : ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇರೆಗೆ, ಶಶಿಧರ್ ಶರ್ಮಾ ವಿರುದ್ದ ಕೌಟಂಬಿಕ ದೌರ್ಜನ್ಯ ಪ್ರಕರಣದಡಿ 2017 ರಂದು ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಅಂದಿನ ಮಹಿಳಾ ಪೊಲೀಸ್ ಠಾಣೆ ಪಿಎಸ್ಐ ಪ್ರಭಾವತಿ ಸೇತುನನದಿ ಅವರು ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.
Shivamogga, Apr. 11: The 2nd JMFC Court in Shivamogga recently handed down a verdict in a domestic violence case, sentencing a person to 1 year and 6 months simple imprisonment and a fine of Rs. 15,000.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 25 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 25: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 25-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ : ಅಂತಿಮ ಯಾತ್ರೆಗೆ ಜನಸಾಗರ.. ಮುಗಿಲು ಮುಟ್ಟಿದ ಆಕ್ರಂದನ..!
shimoga | Manjunath Rao who was killed in a terrorist attack: Arrangements made for the last rites at Vijayanagara residence in Shivamogga
shimoga | ಭಯೋತ್ಪಾದಕ ಗುಂಡೇಟಿಗೆ ಬಲಿಯಾದ ಮಂಜುನಾಥ್ ರಾವ್ : ಶಿವಮೊಗ್ಗದ ವಿಜಯನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
shimoga|ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 24 ರ ತರಕಾರಿ ಬೆಲೆಗಳವಿವರ
ಶಿವಮೊಗ್ಗ (shivamogga), ಏ. 24: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 24-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 23 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 23: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, 23-4-2025 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ ಕೆಜಿ...