ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್!

ಶಿವಮೊಗ್ಗ, ಏ. 3: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ.

ಸಬ್ ಇನ್ಸ್’ಪೆಕ್ಟರ್ ರಘುವೀರ್ ನೇತೃತ್ವದಲ್ಲಿ ಆಲ್ಕೋಳ, ಗೋಪಾಳ, ರಾಮನಗರ, ಮಲ್ಲಿಗೇನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

ಈ ವೇಳೆ ಅಸಭ್ಯವಾಗಿ ಹಾಗೂ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ 18 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಠಾಣೆಗೆ ಕರೆತಂದು, ಸದರಿ ವ್ಯಕ್ತಿಗಳ ಪೂರ್ವಾಪರ ಪರಿಶೀಲಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ಕಾಯ್ದೆಯಡಿ 7 ಹಾಗೂ ಕೋಟ್ಪಾ ಕಾಯ್ದೆಯಡಿ 8 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಏ. 3 ರಂದು ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಮಹತ್ವದ ರಾಜಕೀಯ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದು ಸಾಕಷ್ಟು ಕುತೂಹಲ ಮೂಡಿಸಿದೆ! Previous post ಬಿಜೆಪಿಯಲ್ಲಿ ಇರ್ತಾರಾ? ಕಾಂಗ್ರೆಸ್’ಗೆ ಹೋಗ್ತಾರಾ?
‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ. Next post ‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ