Employing children under the age of 14 and employing minors under the age of 18 in hazardous industries is a punishable offense.

shimoga | ಶಿವಮೊಗ್ಗ | ಬಾಲ ಕಾರ್ಮಿಕರನ್ನು ನೇಮಿಸಿಕೊಂಡರೆ 2 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ. ದಂಡ!

ಶಿವಮೊಗ್ಗ (shivamogga), ಏ. 16 : ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ, ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ತಿಳಿಸಿದೆ.

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾದವಾಗಿದೆ.

ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಯಂತ್ರಣ ಹಾಗೂ ನಿಷೇಧ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016 ರಡಿ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ನೇಮಿಸಿಕೊಂಡ ಮಾಲೀಕರುಗಳಿಗೆ 50,000 ರೂ. ದಂಡ ಅಥವಾ ಎರಡು ವರ್ಷವರೆಗಿನ ಸೆರೆಮನೆ ವಾಸದ ಶಿಕ್ಷೆ ಮತ್ತು ಪೊಲೀಸ್ ಇಲಾಖೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕರು ಜಿಲ್ಲೆಯಲ್ಲಿ ಕಂಡು ಬಂದಲ್ಲಿ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಹಾಗೂ ಮಕ್ಕಳ ಸಹಾಯವಾಣಿ 1098 ನ್ನು ಸಂಪರ್ಕಿಸುವುದು. ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರು ಕಂಡು ಬಂದರೆ ತಕ್ಷಣವೇ ಪೆನ್ಸಿಲ್ ಪೋರ್ಟಲ್‌ನ www.pencil.gov.in  ನಲ್ಲಿ ದೂರನ್ನು ದಾಖಲಿಸಬಹುದು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Shivamogga, Apr. 16: The District Labor Department has stated that employing child laborers in shops, commercial establishments and other industries in urban and rural areas of Shivamogga district is a punishable offense.

Employing children under the age of 14 and employing minors under the age of 18 in hazardous industries is a punishable offense.

Shivamogga: Youth Congress protests against the Centre - Attempt to siege the post office! ಶಿವಮೊಗ್ಗ : ಕೇಂದ್ರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ - ಅಂಚೆ ಕಚೇರಿಗೆ ಮುತ್ತಿಗೆ ಯತ್ನ! Previous post ಶಿವಮೊಗ್ಗ : ಕೇಂದ್ರದ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ – ಅಂಚೆ ಕಚೇರಿಗೆ ಮುತ್ತಿಗೆ ಯತ್ನ!
shivamogga | Details of vegetable prices on April 18 in the Shivamogga APMC wholesale market Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ