‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ

ಬಿಜೆಪಿಗೆ ಗುಡ್ ಬೈ ನಿಶ್ಚಿತ… ಕಾಂಗ್ರೆಸ್ ಸೇರ್ಪಡೆಯಾಗೋದು ಸನ್ನಿಹಿತ..??

********************************************************************************************************

-ಬಿ. ರೇಣುಕೇಶ್-

ಶಿವಮೊಗ್ಗ, ಎ. 3: ‘ವಿಧಾನ ಪರಿಷತ್ ಸ್ಥಾನಕ್ಕೆ ಇಷ್ಟರಲ್ಲಿಯೇ ರಾಜೀನಾಮೆ ನೀಡುತ್ತಿದ್ದೆನೆ. ಕೆ.ಎಸ್.ಈಶ್ವರಪ್ಪ ವಿರುದ್ದ ಚುನಾವಣಾ ಕಣಕ್ಕಿಳಿಯುತ್ತಿದ್ದೆನೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ಘೋಷಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಕುರಿತಂತೆ ಯಾವುದೇ ಸ್ಪಷ್ಟ ಪ್ರತಿಕ್ರಿಯೆ ನೀಡದ ಅವರು, ‘ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳುತ್ತೆನೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಸಿಗುವ ಲಕ್ಷಣಗಳು ಕಂಡುಬರುತ್ತಿಲ್ಲ. ಆದರೆ ತಾವು ಚುನಾವಣಾ ಕಣಕ್ಕಿಳಿಯುವುದು ನಿಶ್ಚಿತ. ಬಿಜೆಪಿ ಪಕ್ಷ ಹಾಗೂ ನಾಯಕರ ಬಗ್ಗೆ ತಮಗೆ ಅಸಮಾಧಾನವಿಲ್ಲ.  ಆದರೆ ಕೆ.ಎಸ್.ಈಶ್ವರಪ್ಪರ ನಡವಳಿಕೆ ಬಗ್ಗೆ ಅಸಮಾಧಾನವಿದೆ. ಆ ಕಾರಣದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೆನೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್, ಜೆಡಿಎಸ್ ಅಥವಾ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಬೇಕು ಎಂಬುವುದನ್ನು ನಿರ್ಧರಿಸಿಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.  

ಟೀಕಾಪ್ರಹಾರ: ‘ನಾನ್ಯಾವ ಲೆಕ್ಕ ಎಂದು ಅವರು ಕೇಳಿದ್ದಾರೆ. ಅವರ ಸವಾಲನ್ನು ಸ್ವೀಕರಿಸಿದ್ದೆನೆ. ನೀವಾಗಲಿ, ನಿಮ್ಮ ಮಗನಾಗಲಿ ತಮ್ಮೆದುರು ಕಣಕ್ಕಿಳಿಯಲಿ. ತಾವು ಏನೆಂಬುವುದನ್ನು ಚುನಾವಣೆಯಲ್ಲಿ ತೋರಿಸುತ್ತೆನೆ’ ಎಂದು ಕೆ.ಎಸ್.ಈಶ್ವರಪ್ಪ ವಿರುದ್ದ ಹರಿಹಾಯ್ದಿದ್ದಾರೆ.

ಕಳೆದ 32 ವರ್ಷಗಳಿಂದ ಶಿವಮೊಗ್ಗದಿಂದ ಆಯ್ಕೆಯಾಗಿರುವ ಕೆ.ಎಸ್.ಈಶ್ವರಪ್ಪ ಅವರು, ಜನರ ಸಮಸ್ಯೆ ಹಾಗೂ ಕ್ಷೇತ್ರದ ಅಭಿವೃದ್ದಿಗೆ ಸ್ಪಂದಿಸುವ ಕಾರ್ಯ ನಡೆಸಿಲ್ಲ. ಶಿವಮೊಗ್ಗದಲ್ಲಿ ನಡೆದಿರುವ ಅಭಿವೃದ್ದಿ ಕಾರ್ಯಗಳಿಗೆ ಯಡಿಯೂರಪ್ಪ, ಬಿ.ವೈ.ರಾಘವೇಂದ್ರ ಕಾರಣಕರ್ತರಾಗಿದ್ದಾರೆ. ಹೇಳಿಕೊಳ್ಳುವಂತಹ ಯಾವುದೇ ಕೆಲಸ ಮಾಡಿಲ್ಲ ಎಂದು ಟೀಕಾಪ್ರಹಾರ ನಡೆಸಿದ್ದಾರೆ.

ಯಡಿಯೂರಪ್ಪಗೆ ಸಾಕಷ್ಟು ಬಾರಿ ಈಶ್ವರಪ್ಪ ಅಪಮಾನ ಮಾಡಿದ್ದಾರೆ. ಸಿಎಂಗೆ ಆಗಿದ್ದಾಗ ಸೂಕ್ತ ಗೌರವ ಕೊಡಲಿಲ್ಲ. ಈಶ್ವರಪ್ಪರ ಹೇಳಿಕೆಯಿಂದ ಪಕ್ಷಕ್ಕೆ ಸಾಕಷ್ಟು ಬಾರಿ ಮುಜುಗರ ಹಾಗೂ ಡ್ಯಾಮೇಜ್ ಆಗಿದೆ ಎಂದು ಆರೋಪಗಳ ಸುರಿಮಳೆಗೈದರು.

ಈಗಾಗಲೇ ಚುನಾವಣೆಗೆ ಭಾರೀ ಪ್ರಮಾಣದಲ್ಲಿ ಹಣ ಖರ್ಚು ಮಾಡಲು ಸಿದ್ದ ಮಾಡಿಕೊಂಡಿದ್ದಾರೆ. ಲಕ್ಷ್ಮೀಪುತ್ರರ ಎದುರು ಈ ಬಡವ ನಿಂತುಕೊಳ್ಳಲಿದ್ದಾನೆ ಎಂದು ಕೆ.ಎಸ್.ಈಶ್ವರಪ್ಪ ವಿರುದ್ದ ಆರೋಪಗಳ ಸುರಿಮಳೆಗೈದಿದ್ದಾರೆ.

ಬಿಜೆಪಿಯಲ್ಲಿಯೇ ಈಶ್ವರಪ್ಪ ಬಗ್ಗೆ ಅಸಮಾಧಾನವಿದೆ!

*** ಶಿವಮೊಗ್ಗ ನಗರ ಬಿಜೆಪಿ ಘಟಕದಲ್ಲಿ ಈಶ್ವರಪ್ಪ ವಿರುದ್ದ ಸಾಕಷ್ಟು ಅಸಮಾಧಾನವಿದೆ. ಪಕ್ಷದ ಹಲವು ನಿಷ್ಠಾವಂತ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ತಮ್ಮ ಹಿಂಬಾಲಕರಿಗೆ ಈಶ್ವರಪ್ಪ ಮಣೆ ಹಾಕಿಕೊಂಡು ಬರುತ್ತಿದ್ದಾರೆ. ಈ ಕಾರಣದಿಂದ ನೀವು ಚುನಾವಣಾ ಕಣಕ್ಕಿಳಿಯಬೇಕು ಎಂದು ಕಾರ್ಯಕರ್ತರೇ ಒತ್ತಾಯಿಸುತ್ತಿದ್ದಾರೆ ಎಂದು ಆಯನೂರು ಮಂಜುನಾಥ್ ಅವರು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಅಶಾಂತಿ ಸೃಷ್ಟಿಗೆ ಸಂಚು!

*** ವಿಧಾನಸಭೆ ಚುನಾವಣೆ ವೇಳೆ ಶಿವಮೊಗ್ಗ ನಗರದಲ್ಲಿ ಅಶಾಂತಿ ಸೃಷ್ಟಿಸುವ ಸಂಚು ನಡೆಯುತ್ತಿದೆ. ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ. ಹಿಂದೂ – ಮುಸ್ಲಿಂ ಬಾಂಧವರು ಕೂಡ ಇತ್ತ ಗಮನಹರಿಸಬೇಕಾಗಿದೆ. ಅಶಾಂತಿ ಸೃಷ್ಟಿಸುವ ಸಂಚುಗಳನ್ನು ವಿಫಲಗೊಳಿಸಬೇಕಾಗಿದೆ ಎಂದು ಆಯನೂರು ಮಂಜುನಾಥ್ ಅವರು ತಿಳಿಸಿದ್ದಾರೆ.

ಕಾಂಗ್ರೆಟ್ ಟಿಕೆಟ್ ಆಕಾಂಕ್ಷಿಗಳಲ್ಲಿ ಹೆಚ್ಚಿದ ಆತಂಕ!

*** ಆಯನೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿಯೇ, ಇತ್ತೀಚೆಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಸ್ಪರ್ಧಾಕಾಂಕ್ಷಿಗಳು ಬೆಂಗಳೂರಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಟಿಕೆಟ್ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರಿಗೆ ಮನವಿ ಮಾಡಿಕೊಂಡಿದ್ದರು. ಇದೀಗ ಆಯನೂರು ಮಂಜುನಾಥ್ ಅವರು ಬಿಜೆಪಿ ತೊರೆಯುವುದು ಬಹುತೇಕ ನಿಶ್ಚಿತವಾಗಿದೆ. ಮತ್ತೊಂದೆಡೆ ಚುನಾವಣಾ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಇದರಿಂದ ಕಾಂಗ್ರೆಸ್ ಟಿಕೆಟ್ ಸ್ಪರ್ಧಾಕಾಂಕ್ಷಿಗಳಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

One thought on “‘ಎಂ.ಎಲ್.ಸಿ. ಸ್ಥಾನಕ್ಕೆ ರಾಜೀನಾಮೆ : ಕೆ.ಎಸ್.ಈಶ್ವರಪ್ಪ ವಿರುದ್ದ ಕಣಕ್ಕೆ!’ – ಆಯನೂರು ಮಂಜುನಾಥ್ ಘೋಷಣೆ

  1. ಒಳ್ಳೇ ದೃಢ ವರದಿ, ಹಾಗೂ ಸೂಕ್ತ ಸದೃಢ ವಿಶ್ವಾಸಕ್ಕೆ ಜಯವಾಗಲಿ

Comments are closed.

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆಗಳಿಗೆ ಚಾಲನೆ ನೀಡಿದೆ. ಭಾನುವಾರ ರಾತ್ರಿ ತುಂಗಾ ನಗರ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ, ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದೆ. Previous post ಪೊಲೀಸರ ಕಾರ್ಯಾಚರಣೆ : ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದವರ ವಿರುದ್ದ ಕೇಸ್!
Next post ಶಿವಮೊಗ್ಗದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಪುಷ್ಪನಮನ