
ಶಿವಮೊಗ್ಗದಲ್ಲಿ ಸಿದ್ಧಗಂಗಾ ಶ್ರೀಗಳಿಗೆ ಪುಷ್ಪನಮನ
ಶಿವಮೊಗ್ಗ: ತ್ರಿವಿಧ ದಾಸೋಹಿ, ವಿಶ್ವಪ್ರಸಿದ್ಧ ಸಿದ್ದಗಂಗಾ ಮಠದ ನಡೆದಾಡುವ ದೇವರು ಪರಮಪೂಜ್ಯ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 116ನೇ ವರ್ಷದ ಜಯಂತೋತ್ಸವ ಪ್ರಯುಕ್ತ ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ನಡೆದಾಡುವ ದೇವರು, ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸೇವೆ ಅಪಾರ. ಮಠದಲ್ಲಿ ಶಿಕ್ಷಣ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾಡಿಗೆ ಸಿದ್ಧಗಂಗಾ ಮಠದ ಕೊಡುಗೆ ಅಪಾರ ಎಂದು ಸಿದ್ಧಗಂಗಾ ಶ್ರೀಗಳಿಗೆ ನುಡಿನಮನ ಸಲ್ಲಿಸಿದರು.
ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ವೀರಶೈವ ಸಮಾಜದ ಉಪಾಧ್ಯಕ್ಷೆ ಶಾಂತಾ ಆನಂದ್, ಕಾರ್ಯದರ್ಶಿ ದಿನೇಶ್, ನಿರ್ದೇಶಕರಾದ ಅನಿತಾ ರವಿಶಂಕರ್, ಮೋಹನ್ ಬಾಳೆಕಾಯಿ, ಮಹೇಶ್ ಮೂರ್ತಿ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ, ಜಿ.ವಿಜಯ ಕುಮಾರ್, ಉಮೇಶ್, ಸಿ.ಜೆ.ರವಿ ಸೇರಿದಂತೆ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.