ವಿಧಾನಸಭೆ ಚುನಾವಣೆ ಮಾದರಿ ನೀತಿ ಸಂಹಿತೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ ವಿವರ ಈ ಮುಂದಿನಂತಿದೆ.

ಗ್ಯಾಸ್ ಸ್ಟವ್, ಅಕ್ಕಿ, ನಗದು, ಬಟ್ಟೆ, ಕಾಫಿ – ಟೀ ಪುಡಿ ಮತ್ತೀತರ ವಸ್ತುಗಳು ವಶ!

ಅನುಮತಿಯಿಲ್ಲದೆ ಕಾಂಗ್ರೆಸ್ ಶಾಸಕರ ಪರ ವಾಹನದಲ್ಲಿ ಪ್ರಚಾರ : ಕೇಸ್ ದಾಖಲು

***********************************************

ಶಿವಮೊಗ್ಗ, ಎ. 4: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಜಿಲ್ಲೆಯ ವಿವಿಧೆಡೆ ತೆರೆಯಲಾಗಿರುವ ಚೆಕ್ ಪೋಸ್ಟ್ ಗಳಲ್ಲಿ, ಸೂಕ್ತ ದಾಖಲೆಯಿಲ್ಲದೆ ವಾಹನಗಳಲ್ಲಿ ಸಾಗಾಣೆ ಮಾಡಲಾಗುತ್ತಿದ್ದ ವಿವಿಧ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಹಾಗೆಯೇ ಅನುಮತಿಯಿಲ್ಲದೆ ಚುನಾವಣೆ ಪ್ರಚಾರ ನಡೆಸುತ್ತಿದ್ದ ವಾಹನ ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಲಾಗಿದೆ. ಈ ಕುರಿತಂತೆ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ. ವಿವರ ಈ ಮುಂದಿನಂತಿದೆ.

ಶಿವಮೊಗ್ಗ: ಎ. 4 ರಂದು ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 7 ಲಕ್ಷ ರೂ. ಮೌಲ್ಯದ, 119 ಕ್ವಿಂಟಾಲ್ ತೂಕದ 460 ಚೀಲ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ತೀರ್ಥಹಳ್ಳಿ : ಎ. 3 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಯಿಲ್ಲದೆ ಸಾಗಾಣೆ ಮಾಡಲಾಗುತ್ತಿದ್ದ 95,890 ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಎ.4 ರಂದು ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1.40 ಲಕ್ಷ ರೂ. ಮೌಲ್ಯದ 50 ಗ್ಯಾಸ್ ಸ್ಟವ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ : ಎ. 3 ರಂದು ಯಾವುದೇ ಅನುಮತಿಯಿಲ್ಲದೆ ಭದ್ರಾವತಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್ ಅವರ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹೆಚ್.ಕೆ.ಜಂಕ್ಷನ್ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ವಾಹನ ಚಾಲಕನ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಾಗರ: ಎ.3 ರಂದು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ 2.30 ಲಕ್ಷ ರೂ. ಮೊತ್ತದ ಬಟ್ಟೆ-ಗೃಹೋಪಯೋಗಿ ವಸ್ತುಗಳು, ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1 ಲಕ್ಷ ರೂ. ಮೌಲ್ಯದ ಕಾಫಿ-ಟೀ ಪುಡಿ, ಲಗೇಜ್ ವಾಹನದಲ್ಲಿ ಸಾಗಿಸುತ್ತಿದ್ದ 1.38 ಲಕ್ಷ ರೂ. ಮೌಲ್ಯದ ಹಾರ್ಡ್ ವೇರ್ ಪರಿಕರಗಳು,

ಲಗೇಜ್ ವಾಹನದಲ್ಲಿ ಕೊಂಡೊಯ್ಯಲಾಗುತ್ತಿದ್ದ 1.50 ಲಕ್ಷ ರೂ. ಮೌಲ್ಯದ ಅಡುಗೆ ಎಣ್ಣೆ-ಜ್ಯೂಸ್ ಪ್ಯಾಕ್ ಹಾಗೂ ವಾಹನವೊಂದರಲ್ಲಿ ಸಾಗಿಸಲಾಗುತ್ತಿದ್ದ 15 ಲಕ್ಷ ರೂ. ಮೌಲ್ಯದ ಬಟ್ಟೆ ಮತ್ತು ಹಾರ್ಡ್ ವೇರ್ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಭದ್ರಾವತಿ, ಎ. 4: ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂದು ಅಧಿಕಾರಿಯೋರ್ವರ ಮೊಬೈಲ್ ಫೋನ್ ಗೆ ಕರೆ ಮಾಡಿ ಲಕ್ಷಾಂತರ ರೂ. ನೀಡುವಂತೆ ಬ್ಲ್ಯಾಕ್’ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದೆ. Previous post ಲೋಕಾಯುಕ್ತ ಪೊಲೀಸ್ ಅಧಿಕಾರಿ ಎಂದು ಲಕ್ಷಾಂತರ ರೂ. ಬ್ಲ್ಯಾಕ್’ಮೇಲ್! : ಕೇಸ್ ದಾಖಲು
ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ. ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. Next post ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ