
ಇಂದು ಶಿವಮೊಗ್ಗದ ಸೂಡಾ ಕಚೇರಿ, ಕಾಶೀಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ, ಎ. 5: ಶಿವಮೊಗ್ಗ ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್.-8 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎ. 5 ರ ಬುಧವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಸಂಸ್ಥೆ ತಿಳಿಸಿದೆ.
ಹುಚ್ಚುರಾಯ ಕಾಲೋನಿ, ಕುವೆಂಪು ಬಡಾವಣೆ, ಲಕ್ಷ್ಮೀಪುರ, ಎನ್.ಎಂ.ಸಿ. ಕಾಂಪೌಂಡ್ ಹತ್ತಿರ, ವಿಜಯ ಅವೆನ್ಯೂ, ಕಾಶೀಪುರ ಕೆಂಚಪ್ಪ ಲೇಔಟ್, ದಯಾನಂದ ಪ್ರಿಂಟರ್ಸ್, ಸೂಡಾ ಕಚೇರಿ, ವಿಪ್ರ ಟ್ರಸ್ಟ್, ಚೇತನಾ ಪಾರ್ಕ್, ವೀರಣ್ಣ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸೂಕ್ತ ಸಹಕಾರ ನೀಡಬೇಕು ಎಂದು ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ – 3 ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
More Stories
shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಏ. 18 ರ ತರಕಾರಿ ಬೆಲೆಗಳ ವಿವರ
ಶಿವಮೊಗ್ಗ (shivamogga), ಏ. 18: ಶಿವಮೊಗ್ಗದ ವಿನೋಬನಗರ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಪ್ರಾಂಗಣದಲ್ಲಿನ, ಏ. 18 ರಂದು ವಿವಿಧ ತರಕಾರಿಗಳ ಸಗಟು (wholesale) ಮಾರಾಟದ ದರಗಳ...