India-Pakistan ceasefire agreed: US President Donald Trump statement india - pakistan tension | ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ

india – pakistan ceasefire | ಭಾರತ – ಪಾಕಿಸ್ತಾನ ಕದನ ವಿರಾಮಕ್ಕೆ ಸಮ್ಮತಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ

ನವದೆಹಲಿ, ಮೇ 10: ಭಾರತ ಮತ್ತು ಪಾಕಿಸ್ತಾನ ದೇಶಗಳು ಪೂರ್ಣ ಹಾಗೂ ತಕ್ಷಣದ ಕದನ ವಿರಾಮಕ್ಕೆ ಪರಸ್ಪರ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೇ 10 ರಂದು ಮಾಹಿತಿ ನೀಡಿದ್ದಾರೆ.

‘ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ದೇಶಗಳು ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು’ ಎಂದು ಡೊನಾಲ್ಡ್ ಟ್ರಂಪ್ ಅವರು ಸಾಮಾಜಿಕ ಜಾಲತಾಣದ ಸಂದೇಶದಲ್ಲಿ ಪ್ರಕಟಿಸಿದ್ದಾರೆ.

ಈ ಕುರಿತಂತೆ ಭಾರತದ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ಅವರು ಟ್ವೀಟ್ ಮಾಡಿದ್ದು, ‘ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ. ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ’ ಎಂದಿದ್ದಾರೆ.

ಈ ಕುರಿತಂತೆ ಪಾಕಿಸ್ತಾನ ವಿದೇಶಾಂಗ ಸಚಿವ ಇಸಾಕ್ ದಾರ್ ಪ್ರತಿಕ್ರಿಯೆ ನೀಡಿದ್ದು, ‘ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಮಾಹಿತಿ ನೀಡಿದ್ದಾರೆ.  

ಜಮ್ಮ-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯ ನಂತರ ಭಾರತ ದೇಶವು ಪಾಕಿಸ್ತಾನ ವಿರುದ್ದ ಹಲವು ತೀಕ್ಷ್ಣ ಕ್ರಮಗಳನ್ನು ಕೈಗೊಂಡಿತ್ತು. ನಾಲ್ಕು ದಿನಗಳ ಹಿಂದೆ ‘ಆಪರೇಷನ್ ಸಿಂದೂರ’ #OperationSindoor, ಕಾರ್ಯಾಚರಣೆ ಆರಂಭಿಸಿತ್ತು.

New Delhi, May 10: US President Donald Trump informed on May 10 that India and Pakistan have mutually agreed to a complete and immediate ceasefire.

bengaluru | CM instructs for strict action against those who spread fake news! bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ! Previous post bengaluru | ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕ್ರಮಕ್ಕೆ ಸಿಎಂ ಸೂಚನೆ!
shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಮೇ 11 ರ ತರಕಾರಿ ಬೆಲೆಗಳ ವಿವರ