ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುವವರ ವಿರುದ್ದ ಕೇಸ್ ದಾಖಲಿಸಿ!

ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ

ಅಧಿಕಾರಿಗಳಿಗೆ ಶಿವಮೊಗ್ಗ ಡಿಸಿ ಖಡಕ್ ಸೂಚನೆ  

****************************************************************

ಶಿವಮೊಗ್ಗ, ಏ. 5 : ಚೆಕ್‍ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಎಚ್ಚರವಹಿಸಬೇಕು ಎಂದು ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳಿಗೆ, ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬುಧವಾರ ಶಿವಮೊಗ್ಗ ನಗರದ ಜಿಲ್ಲಾಡಳಿತ ಕಚೇರಿಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ವೇಳೆ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ.

ಕೇಸ್ ದಾಖಲಿಸಿ: ಜಿಲ್ಲೆಯಾದ್ಯಂತ ಅಬಕಾರಿ ಅಧಿಕಾರಿಗಳು ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ದ ಅಬಕಾರಿ ಕಾಯ್ದೆ ಸೆಕ್ಷನ್ 15 ಎ ರಡಿ ಕೇಸ್ ದಾಖಲಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯ್ತಿ ಸಿಇಓ ಸ್ನೇಹಲ್ ಲೋಖಂಡೆ ಮಾತನಾಡಿದರು. ಎಂಸಿಸಿ ನೋಡಲ್ ಅಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಿಗೆ ಭೇಟಿ ನೀಡಿ ಜಾಗರೂಕತೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರತಿ ದಿನ ನಿಗದಿತ ಅವಧಿಯೊಳಗೆ ವರದಿಯನ್ನು ನೀಡಬೇಕು ಎಂದರು.

ನಿಗಾವಹಿಸಿ: ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಕೈಗೊಂಡು ವಶ ಹೆಚ್ಚಾಗಬೇಕು. ನಗದು ಚಲನೆ ಕುರಿತು ಹೆಚ್ಚಿನ ನಿಗಾ ವಹಿಸಿ, ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

‘ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲಿಸುತ್ತಿದ್ದೆನೆ. ಅವರು ನನಗೆ ಕಷ್ಟ ಕಾಲದಲ್ಲಿ ಸ್ಪಂದಿಸಿದ್ದಾರೆ. ಅದಕ್ಕಾಗಿ ಅವರ ಪರವಾಗಿ ನಿಲ್ಲುತ್ತಿದ್ದೆನೆ. ತಮಗೆ ಯಾವುದೇ ಒತ್ತಡವಿಲ್ಲ. ಒತ್ತಡಕ್ಕಾಗಿ ಬರುವ ವ್ಯಕ್ತಿಯಲ್ಲ’ ಎಂದು ಚಿತ್ರನಟ ಸುದೀಪ್ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜೊತೆ ಕಿಕ್ಕಿರಿದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ‘ರಾಜಕೀಯಕ್ಕೆ ಬರುವುದಿಲ್ಲ. ಬಿಜೆಪಿಗೆ ಸೇರ್ಪಡೆಯಾಗಿಲ್ಲ. ತಮ್ಮದೇನಿದ್ದರೂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ’ ಎಂದು ಸುದೀಪ್ ಗೊಂದಲದ ಹೇಳಿಕೆ ನೀಡಿದರು. Previous post ‘ಬಸವರಾಜ ಬೊಮ್ಮಾಯಿಗೆ ಬೆಂಬಲ : ರಾಜಕೀಯಕ್ಕೆ ಬರಲ್ಲ!’ – ನಟ ಸುದೀಪ್ ಹೇಳಿಕೆ
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಹಂತದ ಹುರಿಯಾಳುಗಳ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ್ದು, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ. Next post ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ : ಕಿಮ್ಮನೆ ‘ಕೈ’ ಹಿಡಿದ ಕಾಂಗ್ರೆಸ್ ವರಿಷ್ಠರು!