ಇಬ್ಬರು ಯುವಕರಿಗೆ ಚೂರಿಯಿಂದ ಇರಿದು, ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕೆಂದು ಗುರುತಿಸಲಾಗಿದೆ.

ಚೂರಿಯಿಂದ ಇರಿದು ಹಲ್ಲೆ ಮಾಡಿದ್ದ ಐವರು ಯುವಕರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ!

ಶಿವಮೊಗ್ಗ, ಎ. 7: ಇಬ್ಬರಿಗೆ ಚೂರಿಯಿಂದ ಇರಿದು ಹಾಗೂ ಇತರೆ ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ, 3 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್ (26), ಪ್ರವೀಣ್ (20), ನವೀನ್ (24), ಚೇತನ (24) ಹಾಗೂ ಸಂತೋಷ್ (33) ಶಿಕ್ಷೆಗೊಳಗಾದ ಯುವಕರೆಂದು ಗುರುತಿಸಲಾಗಿದೆ. ಇವರಿಗೆ 65 ಸಾವಿರ ರೂ. ದಂಡ ವಿಧಿಸಲಾಗಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ 3 ತಿಂಗಳು ಸಾಧಾರಣ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.

ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಎ.6 ರಂದು ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶಾಂತರಾಜ್ ಅವರು ವಾದ ಮಂಡಿಸಿದ್ದರು.

ಘಟನೆ ಹಿನ್ನೆಲೆ

21-1-2018 ರಂದು ಶಿಕ್ಷೆಗೊಳಗಾದ ಯುವಕರು ಗೋವಿಂದಪುರ ಗ್ರಾಮದ ನಿವಾಸಿಗಳಾದ ನವೀನ್, ನಿತಿನ್, ಗೋಪಿ, ಲೋಹಿತ್, ಪ್ರಜ್ವಲ್, ರಾಜು ಅವರ ಮೇಲೆ ಹಳೇ ವೈಷ್ಯಮದ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದರು.

ಈ ವೇಳೆ ನವೀನ ಮತ್ತು ನಿತಿನ್ ರವರ ಹೊಟ್ಟೆ ಹಾಗೂ ಪಕ್ಕೆಗೆ ಚಾಕುವಿನಿಂದ ಚುಚ್ಚಿ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಉಳಿದ ನಾಲ್ವರ ಮೇಲೆ ದೊಣ್ಣೆ, ಕೈಗಳಿಂದ ಹೊಡೆದಿದ್ದರು. ಈ ಕುರಿತಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಸಬ್ ಇನ್ಸ್’ಪೆಕ್ಟರ್ ಆಗಿದ್ದ ಬಿ.ಸಿ.ಗಿರೀಶ್ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.

ಶಿವಮೊಗ್ಗ, ಎ. 6: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶಾಂತಿನಗರ ಭಾಗದ ಗುಡ್ಡದ ಭಾಗದಲ್ಲಿ ಸಂಜೆ ದಿಢೀರ್ ಆಗಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ರವಾನಿಸಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಗುಡ್ಡಕ್ಕೆ ತುಗಲಿದ್ದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ. ಗುಡ್ಡದ ಇತರೆಡೆ ಅಗ್ನಿಯ ಕೆನ್ನಾಲಿಗೆ ವ್ಯಾಪಿಸುವುದನ್ನು ನಿಯಂತ್ರಿಸಿದೆ. ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಹೇಗೆಂಬುವುದು ಸ್ಪಷ್ಟವಾಗಿಲ್ಲ. ತೀವ್ರ ಸ್ವರೂಪದ ಬಿಸಿಲಿನಿಂದ ಗುಡ್ಡದಲ್ಲಿ ಕುರುಚಲು ಗಿಡಗಂಟೆಗಳು, ಹಸಿರು ಹುಲ್ಲು ಒಣಗಿದೆ. ಪ್ರಸ್ತುತ ಬೇಸಿಗೆ ವೇಳೆ ಕಾಡ್ಗಿಚ್ಚಿನಿಂದ ರಾಗಿಗುಡ್ಡ ಉಳಿಸುವ ನಿಟ್ಟಿನಲ್ಲಿ, ಆಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಶಿವಮೊಗ್ಗ ನಗರಕ್ಕೆ ಹೊಂದಿಕೊಂಡಂತಿರುವ ಏಕೈಕ ಗುಡ್ಡ ರಾಗಿಗುಡ್ಡವಾಗಿದೆ. ಪ್ರಾಣಿ-ಪಕ್ಷಿಗಳ ಆವಾಸ ಸ್ಥಾನವಾಗಿದೆ. ಆದರೆ ವಿವಿಧ ಅಭಿವೃದ್ದಿ ಕಾಮಗಾರಿ, ಕಟ್ಟಡಗಳ ನಿರ್ಮಾಣದಿಂದ ಗುಡ್ಡ ಕಣ್ಮರೆಯಾಗುತ್ತಿದೆ. ಇದೀಗ ಕಾಳ್ಗಿಚ್ಚಿನಿಂದ ಅಳಿದುಳಿದ ಪ್ರಕೃತಿ ಸಂಪತ್ತು ವಿನಾಶವಾಗಲಾರಂಭಿಸಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಾರೆ. Previous post ಶಿವಮೊಗ್ಗ ಹೊರವಲಯ ರಾಗಿಗುಡ್ಡದಲ್ಲಿ ಬೆಂಕಿ!
ಗಾಂಜಾ ಮಾರಾಟ ಅಡ್ಡೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಮೂವರು ಯುವಕರನ್ನು ಬಂಧಿಸಿದ ಘಟನೆ, ಭದ್ರಾವತಿ ಪಟ್ಟಣದ ಹೊಳೆಹೊನ್ನೂರು ರಸ್ತೆಯ ಲಕ್ಷ್ಮೀ ಸಾಮಿಲ್ ಸಮೀಪ ನಡೆದಿದೆ. Next post ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರು ಪೊಲೀಸ್ ಬಲೆಗೆ!