Booker Prize-winning writers Banu Mushtaq and Deepa Basti to be awarded Rs 10 lakh each ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ದೀಪಾ ಬಾಸ್ತಿ ಅವರಿಗೆ 10 ಲಕ್ಷ ರೂ. ಪುರಸ್ಕಾರ ಘೋಷಣೆ

bengaluru | ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್, ದೀಪಾ ಬಾಸ್ತಿಗೆ 10 ಲಕ್ಷ ರೂ. ಪುರಸ್ಕಾರ ಘೋಷಣೆ

ಬೆಂಗಳೂರು (bangalore) ಜೂ. 2: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಬಾನು ಅವರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.

ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ.  ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮುಸ್ಲಿಂ ಸಮುದಾಯದ ಹೆಣ್ಣು‌ಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ,

ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

Bengaluru, June 2: Literature has the power to unite society. Chief Minister Siddaramaiah opined that society should be united through literature, not divided. Banu Mushtaq was felicitated and honored at the government felicitation program for Booker Prize winner Banu Mushtaq organized by the Department of Kannada and Culture at the Banquet Hall.

shimoga | Shivamogga: Drinking water is being wasted - is the water board not paying attention? shimoga | ಶಿವಮೊಗ್ಗ : ವ್ಯರ್ಥವಾಗುತ್ತಿದೆ ಕುಡಿಯುವ ನೀರು - ಗಮನಿಸುವುದೆ ಜಲ ಮಂಡಳಿ?a Previous post shimoga | ಶಿವಮೊಗ್ಗ : ಕುಡಿಯುವ ನೀರು ವ್ಯರ್ಥದ ಜೊತೆ ಬಿದ್ದಿದೆ ಗುಂಡಿ – ಗಮನಿಸುವುದೆ ಜಲ ಮಂಡಳಿ?
shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 3 ರ ತರಕಾರಿ ಬೆಲೆಗಳ ವಿವರ