
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ : ಎಫ್.ಐ.ಆರ್. ದಾಖಲು!
ಸಾಗರ, ಎ. 7: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದ ಆರೋಪದ ಮೇರೆಗೆ, ಪಕ್ಷದ ಮುಖಂಡರೋರ್ವರ ವಿರುದ್ದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಅಡಿ, ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಉಪ ವಿಭಾಗಾಧಿಕಾರಿಗಳಿಂದ ಷರತ್ತುಬದ್ಧ ಅನುಮತಿ ಪಡೆದುಕೊಂಡು, ಕಳೆದ 30-3-2023 ರಂದು ಸಾಗರ ಪಟ್ಟಣದ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್ ಪಕ್ಷವು ಕಾರ್ಯಕರ್ತರ ಸಭೆ ಆಯೋಜಿಸಿತ್ತು.
ಚುನಾವಣಾ ಎ.ಎಸ್.ಟಿ. ತಂಡದ ಅಧಿಕಾರಿಗಳು ಕಾಂಗ್ರೆಸ್ ಸಭೆಗೆ ಭೇಟಿ ನೀಡಿ ಪರಿಶೀಲಿಸಿದಾಗ, ಕಾರ್ಯಕರ್ತರಿಗೆ ಊಟದ ವ್ಯವಸ್ಥೆ ಮಾಡಿದ್ದು ಕಂಡುಬಂದಿತ್ತು. ಕಾಂಗ್ರೆಸ್ ಸಭೆಯಲ್ಲಿ ಚುನಾವಣಾ ಮಾದರಿ ನೀತಿ-ಸಂಹಿತೆ ಉಲ್ಲಂಘನೆಯಾಗಿದೆ ಎಂದು ಎಂಸಿಸಿ ನೋಡಲ್ ಅಧಿಕಾರಿಯು, ಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದರ ಆಧಾರದ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಸ್ಥಳೀಯ ಕಾಂಗ್ರೆಸ್ ಮುಖಂಡರೋರ್ವರ ವಿರುದ್ಧ ಪೊಲೀಸರು ಎಫ್.ಐ.ಆರ್ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆಯು ಶುಕ್ರವಾರ ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದೆ.
More Stories
ಶಿವಮೊಗ್ಗದಲ್ಲಿ ಮ್ಯಾರಥಾನ್ ಓಟ ಆಯೋಜನೆ
ಶಿವಮೊಗ್ಗ, ಆ. 14: ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಿಂದ ಇಂದು ಮ್ಯಾರಥಾನ್ ಓಟ ಏರ್ಪಡಿಸಲಾಗಿತ್ತು. ಯುವಸಬಲೀಕರಣ...