
shimoga rain | ಮಲೆನಾಡಲ್ಲಿ ಮುಂಗಾರು ಮಳೆ : ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಂಗಳ ಒಳಹರಿವೆಷ್ಟು?
ಶಿವಮೊಗ್ಗ (shivamogga), ಜೂ. 13: ಮಲೆನಾಡಲ್ಲಿ ಮುಂಗಾರು ಮಳೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಹಾಗೂ ಭದ್ರಾ ಜಲಾಶಯಗಳ ಒಳಹರಿವಿನಲ್ಲಿ ಹೆಚ್ಚಳ ಕಂಡುಬಂದಿದೆ.
ಜೂ. 13 ರ ಬೆಳಿಗ್ಗೆ 8 ಗಂಟೆಯ ಮಾಹಿತಿಯಂತೆ, ರಾಜ್ಯದ ಪ್ರಮುಖ ಜಲವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಡ್ಯಾಂನ ಒಳಹರಿವು 13,675 ಕ್ಯೂಸೆಕ್ ಇದೆ. 6752 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ.
ಡ್ಯಾಂ ನೀರಿನ ಮಟ್ಟ 1763.30 (ಗರಿಷ್ಠ ಮಟ್ಟ : 1819) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 1745.65 ಅಡಿಯಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ ಸುಮಾರು 18 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಮುಂದುವರಿದಿದೆ. ಈ ಕಾರಣದಿಂದ ಮಧ್ಯ ಕರ್ನಾಟಕ ಭಾಗದ ಪ್ರಮುಖ ಜಲಾಶಯವಾದ ಭದ್ರಾ ಡ್ಯಾಂ ಒಳಹರಿವು 4459 ಕ್ಯೂಸೆಕ್ ಗೆ ಏರಿಕೆಯಾಗಿದೆ. 269 ಕ್ಯೂಸೆಕ್ ಹೊರಹರಿವಿದೆ.
ಪ್ರಸ್ತುತ ಜಲಾಶಯದ ನೀರಿನ ಮಟ್ಟ 144 (ಗರಿಷ್ಠ ಮಟ್ಟ : 186) ಅಡಿಯಿದೆ. ಕಳೆದ ವರ್ಷ ಇದೇ ದಿನದಂದು ಡ್ಯಾಂ ನೀರಿನ ಮಟ್ಟ 118.8 ಅಡಿ ಸಂಗ್ರಹವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸ್ತುತ ವರ್ಷ 26 ಅಡಿಯಷ್ಟು ಹೆಚ್ಚು ನೀರು ಸಂಗ್ರಹವಾಗಿದೆ.
ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿರುವ ತುಂಗಾ ಡ್ಯಾಂ ಈಗಾಗಲೇ ಗರಿಷ್ಠ ಮಟ್ಟವಾದ 588.24 ಅಡಿ ತಲುಪಿದೆ. ಪ್ರಸ್ತುತ ಡ್ಯಾಂನ ಒಳಹರಿವು 4500 ಕ್ಯೂಸೆಕ್ ಇದ್ದು, ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ಒಳಹರಿವಿನಷ್ಟೆ ನೀರನ್ನು ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಬಿಡಲಾಗುತ್ತಿದೆ.
Shivamogga, June 13: Monsoon rains have continued in the malnad areas. There has been a significant increase in the inflow of major reservoirs in Shivamogga district, namely Linganamakki, Tunga and Bhadra reservoirs.