shimoga rain | BREAKING NEWS | Shivamogga: Elderly man dies after house wall collapses due to rain – many injured! shimoga rain | BREAKING NEWS | ಶಿವಮೊಗ್ಗ : ಮಳೆಯಿಂದ ಮನೆಯ ಗೋಡೆ ಕುಸಿದು ವೃದ್ದೆ ಸಾವು – ಹಲವರಿಗೆ ಗಾಯ!

shimoga rain | BREAKING NEWS | ಶಿವಮೊಗ್ಗ : ಮಳೆಗೆ ಮನೆಯ ಗೋಡೆ ಕುಸಿದು ವೃದ್ದೆ ಸಾವು – ಹಲವರಿಗೆ ಗಾಯ!

ಶಿವಮೊಗ್ಗ (shivamogga), ಜೂ. 16: ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟು ಮನೆಯಲ್ಲಿದ್ದ ಇತರೆ ಸದಸ್ಯರಿಗೆ ಸಣ್ಣಪುಟ್ಟ ಗಾಯವಾದ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ.

100 ವರ್ಷ ವಯೋಮಾನದ ಸಿದ್ದಮ್ಮ ಮೃತಪಟ್ಟ ವಯೋವೃದ್ದೆಯಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ ಸಂಭವಿಸಿದೆ.

ಘಟನೆಯಲ್ಲಿ ಮನೆಯಲ್ಲಿದ್ದ ಹೇಮಾವತಿ ಎಂಬುವರಿಗೆ ಗಾಯವಾಗಿದ್ದು, ಅವರುನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ.

ಶಿವಮೊಗ್ಗ ತಾಲೂಕಿನ ಅಡಗಡಿ ಗ್ರಾಮದಲ್ಲಿ ತಡರಾತ್ರಿ ಮನೆ ಗೋಡೆ ಕುಸಿದು, ಸುಮಾರು 95 ರಿಂದ 100 ವರ್ಷ ವಯೋಮಾನದ ವಯೋವೃದ್ದೆ ಸಿದ್ದಮ್ಮ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇವರು ಮೂಲತಃ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದವರಾಗಿದ್ದಾರೆ. ಸಂಬಂಧಿ ಮನೆಗೆ ಆಗಮಿಸಿದ್ದರು. ಘಟನೆಯಲ್ಲಿ ಹೇಮಾವತಿ ಎಂಬುವರಿಗೆ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ತಾಲೂಕು ಕಚೇರಿ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ ಎಂದು ಶಿವಮೊಗ್ಗ ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಸೋಮವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

Shivamogga, June 16: An elderly woman died on the spot and other members of the house sustained minor injuries after a wall of a house collapsed due to rain in Adagadi village near Kumsi in Shivamogga taluk late last night.

shimoga APMC vegetable prices | Details of vegetable prices for July 8 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 16 ರ ತರಕಾರಿ ಬೆಲೆಗಳ ವಿವರ
Thunderstorm in many parts of Shimoga district! ಶಿವಮೊಗ್ಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆ! Next post shimoga rain | ಮಾಣಿ 307, ಹುಲಿಕಲ್ 279, ಸಾವೆಹಕ್ಲು 262 ಮಿ.ಮೀ. ಭಾರೀ ಮಳೆ : ತುಂಗಾ, ಲಿಂಗನಮಕ್ಕಿ ಡ್ಯಾಂ ಒಳಹರಿವು ಏರಿಕೆ!