ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಅಕ್ರಮದ ಪೋಟೋ – ವೀಡಿಯೋಗಳನ್ನು ಮೊಬೈಲ್ ಫೋನ್ ಮೂಲಕ ಕಳುಹಿಸಲು ಸಾರ್ವಜನಿಕರಿಗೆ ಚುನಾವಣಾ ಆಯೋಗದ ಮನವಿ

ಮಾಹಿತಿ ನೀಡುವವರ ಹೆಸರು ಗೌಪ್ಯ : ದೂರುಗಳ ಪರಿಶೀಲನೆಗೆ ಪ್ರತ್ಯೇಕ ಅಧಿಕಾರಿಗಳ ತಂಡ ರಚನೆ

ಕಾಲಮಿತಿಯೊಳಗೆ ದೂರು ಇತ್ಯರ್ಥ : ಶಿವಮೊಗ್ಗ ಡಿಸಿ ಡಾ.ಆರ್.ಸೆಲ್ವಮಣಿ ಮಾಹಿತಿ

ಶಿವಮೊಗ್ಗ, ಏ. 08 : ವಿಧಾನಸಭಾ ಚುನಾವಣಾ ಅಕ್ರಮಗಳ ತಡೆಗೆ  ಹಾಗೂ ಮುಕ್ತ -ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ, ಚುನಾವಣಾ ಆಯೋಗವು ‘ಸಿ-ವಿಜಿಲ್ (cVIGIL) ಆ್ಯಪ್ ಬಿಡುಗಡೆ ಮಾಡಿದೆ. ಸಾರ್ವಜನಿಕರು ಈ ಆ್ಯಪ್ ಮೂಲಕ, ಪಾರದರ್ಶಕ ಚುನಾವಣೆ ನಡೆಸಲು ಆಡಳಿತದೊಂದಿಗೆ ಕೈಜೋಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದ್ದಾರೆ.

ಚುನಾವಣಾ ಸಂದರ್ಭದಲ್ಲಿ ಮತದಾರಿಗೆ ಆಮಿಷವೊಡ್ಡುವುದನ್ನು ತಡೆಗಟ್ಟಲು ಹಾಗೂ ಅಕ್ರಮಗಳ ತಡೆಗೆ ಸಿ-ವಿಜಿಲ್ ಆ್ಯಪ್ ಬಿಡುಗಡೆಗೊಳಿಸಲಾಗಿದೆ. ಸಿ-ವಿಜಿಲ್ ಮೊಬೈಲ್ ಅಪ್ಲಿಕೇಷನ್ ಮೂಲಕ, ಸಾರ್ವಜನಿಕರು ಚುನಾವಣಾ ಅಕ್ರಮಗಳನ್ನು ತಮ್ಮ ಮೊಬೈಲ್‍ಗಳ ಮೂಲಕ ನೇರವಾಗಿ ಆಯೋಗಕ್ಕೆ ಮಾಹಿತಿ ನೀಡಬಹುದು. ದೂರುದಾರರ ಹೆಸರು, ವಿಳಾಸವನ್ನು ಆಯೋಗ ಗೌಪ್ಯವಾಗಿಡುತ್ತದೆ.

ಚುನಾವಣಾ ಸಮಯದಲ್ಲಿ ಮತದಾರರು ನಿರ್ಧಿಷ್ಟ ವ್ಯಕ್ತಿ ಅಥವಾ ಪಕ್ಷಕ್ಕೆ ಮತ ಹಾಕುವಂತೆ ವಿವಿಧ ರೀತಿಯಲ್ಲಿ ಆಮಿಷ ನೀಡಬಹುದಾದ ಹಣ ವಿತರಣೆ, ಉಡುಗೊರೆಗಳು, ಕೂಪನ್ ವಿತರಣೆ, ಮದ್ಯ ವಿತರಣೆ, ಅನುಮತಿ ಇಲ್ಲದ ಪೋಸ್ಟರ್ ಮತ್ತು ಬ್ಯಾನರ್‍ಗಳು, ಬಂದೂಕುಗಳ ಪ್ರದರ್ಶನ ಹಾಗೂ ಬೆದರಿಕೆ,

ಆಸ್ತಿ ವಿರೂಪ, ಧಾರ್ಮಿಕ ಅಥವಾ ಕೋಮು ಭಾಷಣಗಳು/ಸಂದೇಶಗಳು, ಮತಗಟ್ಟೆಯ 200 ಮೀ.ಪ್ರದೇಶದಲ್ಲಿ ಪ್ರಚಾರ, ನಿಷೇಧದ ಅವಧಿಯಲ್ಲಿ ಪ್ರಚಾರ, ಮತದಾನದ ದಿನದಂದು ವಾಹನಗಳಲ್ಲಿ ಮತದಾರರ ಸಾಗಣೆ ಮುಂತಾದ ಯಾವುದೇ ರೀತಿಯ ಪ್ರಲೋಭನೆ, ಬೆದರಿಕೆ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರೇ ನೇರವಾಗಿ ಸಿ-ವಿಜಿಲ್ ಆ್ಯಪ್‍ನಲ್ಲಿ ದೂರು ದಾಖಲಿಸಬಹುದು.

ಗೂಗಲ್ ಪ್ಲೇ ನಲ್ಲಿ ಸಿ- ವಿಜಿಲ್ ಆ್ಯಪ್ ಡೌನ್‍ಲೋಡ್ ಮಾಡ್ಕೊಂಡು  ಅತ್ಯಂತ ಸುಲಭವಾಗಿ ಇದನ್ನು ಬಳಸಬಹುದಾಗಿದೆ.  ಅಕ್ರಮದ ಕುರಿತಾದ ಫೋಟೋ ಅಥವಾ ವೀಡಿಯೋ ಗಳನ್ನು ಅಪ್‍ಲೋಡ್ ಮಾಡಿ ದೂರು ನೀಡಬಹುದು.

ಆ್ಯಪ್ ನಲ್ಲಿ ಸ್ವವಿವರ ನೀಡಿಯಾದರೂ ಅಥವಾ ನೀಡದೆಯೂ ದೂರು ನೀಡಬಹುದು. ಆ್ಯಪ್ ನಲ್ಲಿ ತಿಳಿಸಿದ 16 ರೀತಿಯ ದೂರುಗಳ ಪೈಕಿ ಒಂದನ್ನು ಸೆಲೆಕ್ಟ್ ಮಾಡಿ ಅಪ್ ಲೋಡ್ ಮಾಡಬಹುದು.

ಸಿ-ವಿಜಿಲ್‍ನಲ್ಲಿ ದಾಖಲಾಗುವ ದೂರುಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇವರು ಮತದಾನ ಮುಕ್ತಾಯವಾಗುವವರೆಗೂ 3 ಪಾಳಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವರು. ದೂರು ಬಂದ ಕೂಡಲೇ ಅವುಗಳನ್ನು ಪರಿಶೀಲಿಸಿ, ಸದರಿ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಾಪ್ತಿಯ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ರವಾನಿಸಲಾಗುತ್ತದೆ.

ಈ ಮಾಹಿತಿ ಆಧಾರದಲ್ಲಿ ತಕ್ಷಣ ಸ್ಥಳಕ್ಕೆ ಭೇಟಿ ನೀಡುವ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ದೂರು ಕುರಿತಂತೆ ಅಗತ್ಯ ಕ್ರಮ ಕೈಗೊಂಡು ಗರಿಷ್ಟ 100 ನಿಮಿಷದ ಒಳಗೆ ದೂರನ್ನು ಇತ್ಯರ್ಥಪಡಿಸಲಿದ್ದಾರೆ. ಸಾರ್ವಜನಿಕರು ಸಿ-ವಿಜಿಲ್ ಮಾತ್ರವಲ್ಲದೇ ಉಚಿತ ಸಹಾಯವಾಣಿ 1950 ಕ್ಕೆ ಸಹ ಚುನಾವಣಾ ಅಕ್ರಮಗಳ ಕುರಿತು ದೂರು ನೀಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಜಂಗೀ ಕುಸ್ತಿಗೆ ಅಖಾಡ ರೆಡಿಯಾಗಿದೆ… ಆದರೆ ಪೈಲ್ವಾನರುಗಳೇ ಸಿದ್ಧವಾಗಿಲ್ಲ...’ ಇದು, ಶಿವವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸದ್ಯದ ಚುನಾವಣಾ ರಾಜಕಾರಣದ ಚಿತ್ರಣ…! ಹೌದು. ವಿಧಾನಸಭೆ ಚುನಾವಣೆ ಘೋಷಣೆಯಾಗಿ ಹಲವೇ ದಿನಗಳೇ ಕಳೆದಿದೆ. ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾಗಿದೆ. ಆದರೆ ಇಲ್ಲಿಯವರೆಗೂ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಗಳು ಯಾರೆಂಬುವುದು ಖಚಿತವಾಗಿಲ್ಲ. ಯಾವ ಪಕ್ಷದಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬುವುದು ಸಂಪೂರ್ಣ ನಿಗೂಢವಾಗಿ ಪರಿಣಮಿಸಿದೆ. ಇದರಿಂದ ಅಭ್ಯರ್ಥಿಗಳ ಆಯ್ಕೆ ಚರ್ಚೆಗಳಿಗೆ ತೆರೆ ಬಿದ್ದಿಲ್ಲ. Previous post ಶಿವಮೊಗ ನಗರ ಕ್ಷೇತ್ರ : ಮೂರು ಪಕ್ಷಗಳ ಅಭ್ಯರ್ಥಿಗಳ ಆಯ್ಕೆಯತ್ತ ಕುತೂಹಲದ ಚಿತ್ತ!
ರಣ ಬಿಸಿಲಿಗೆ ಮಲೆನಾಡು ಅಕ್ಷರಶಃ ಬಿಸಿಯಾಗಲಾರಂಭಿಸಿದೆ..! ಹೌದು. ಪ್ರಸ್ತುತ ಬೇಸಿಗೆ ತಾಪಕ್ಕೆ, ಶಿವಮೊಗ್ಗ ಜಿಲ್ಲೆಯ ನಾಗರೀಕರು ತತ್ತರಿಸಿದ್ದಾರೆ. ಹೈರಾಣಾಗುವಂತೆ ಮಾಡಿದೆ!! ಜಿಲ್ಲೆಯ ಇತರೆಡೆಯಂತೆ, ಶಿವಮೊಗ್ಗ ನಗರದಲ್ಲಿಯೂ ತಾಪಮಾನದ ಪ್ರಮಾಣ ತೀವ್ರ ಸ್ವರೂಪದಲ್ಲಿದೆ. ಹಗಲು ವೇಳೆ ಇಡೀ ನಗರ ಕಾದ ಕಾವಲಿಯಂತಾಗಿ ಪರಿವರ್ತಿತವಾಗುತ್ತಿದೆ. ಮನೆಯಿಂದ ಹೊರಬರಲಾಗದ ಮಟ್ಟಕ್ಕೆ ಬಿಸಿಲು ಬೀಳುತ್ತಿದೆ. ದಿನದಿಂದ ದಿನಕ್ಕೆ ತಾಪಮಾನ ಏರುಗತಿಯಲ್ಲಿ ಸಾಗುತ್ತಿರುವುದು, ನಾಗರೀಕರನ್ನು ಕಂಗಲಾಗಿಸಿದೆ. ಎದುಸಿರು ಹೆಚ್ಚಾಗುವಂತೆ ಮಾಡಿದೆ. Next post ಮಲೆನಾಡಲ್ಲಿ ರಣ ಬಿಸಿಲು : ನಾಗರೀಕರು ತತ್ತರ!