ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ!

ಶಿವಮೊಗ್ಗ, ಜ.6: ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು.

ಅವರು ಶುಕ್ರವಾರ ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳ ಮುಖ್ಯಸ್ಥರ ಸಭೆಯನ್ನು ನಡೆಸಿ ಮಾತನಾಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಮತ್ತು ಪುನರುಜ್ಜೀವನ ಕುರಿತಾಗಿ ಲೋಕಾಯುಕ್ತ ಸಂಸ್ಥೆ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಸಂರಕ್ಷಿಸಲು ಗುರಿಯನ್ನು ನಿಗದಿಪಡಿಸಲಾಗಿದ್ದು, ನಿಯಮಿತವಾಗಿ ಈ ಕುರಿತು ವಿಚಾರಣೆಯನ್ನು ನಡೆಸಲಾಗುವುದು. ಜಿಲ್ಲೆಯಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು 6ಸಾವಿರಕ್ಕೂ ಅಧಿಕ ಕೆರೆಗಳಿದ್ದು, ಇವುಗಳ ಸರ್ವೇ ಕಾರ್ಯವನ್ನು ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಆದ್ಯತೆ ಮೇರೆಗೆ ಈ ಕಾರ್ಯವನ್ನು ಕೈಗೊಂಡು ವರದಿಯನ್ನು ಸಲ್ಲಿಸಬೇಕು. ಇದೇ ರೀತಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಕೆರೆಗಳ ಸ್ಥಿತಿಗತಿ ಕುರಿತು ವರದಿಯನ್ನು ಪ್ರತ್ಯೇಕವಾಗಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

Previous post ಹಿರಿಯ ಅರ್ಚಕ ಹೆಚ್.ಎಸ್.ತಿಪ್ಪಾಶಾಸ್ತ್ರೀ ವಿಧಿವಶ
Next post ಬೆಂಗಳೂರಿನ ಉದ್ಯಮಿಯಿಂದ 3000 ಹಳ್ಳಿ ಮಕ್ಕಳಿಗೆ ನೋಟ್ ಬುಕ್ ವಿತರಣೆ!