shimoga | Shivamogga: Two youths die after falling into a farm pond! shimoga | ಶಿವಮೊಗ್ಗ : ತೋಟದ ಕೃಷಿ ಹೊಂಡಕ್ಕೆ ಬಿದ್ದು ಯುವಕರಿಬ್ಬರ ಸಾ*ವು!

shimoga | BREAKING NEWS | ಶಿವಮೊಗ್ಗ : ಕೃಷಿ ಹೊಂಡಕ್ಕೆ ಬಿದ್ದು ಯುವಕರಿಬ್ಬರ ಸಾ*ವು!

ಶಿವಮೊಗ್ಗ (shivamogga), ಜೂ. 22: ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಯಡವಾಲ ಗ್ರಾಮದ ನಿವಾಸಿ ಗೌತಮ್ (22) ಹಾಗೂ ಶಿವಮೊಗ್ಗದ ಕುಂಬಾರಗುಂಡಿ ಬಡಾವಣೆ ನಿವಾಸಿ ಚಿರಂಜೀವಿ (22) ಮೃತಪಟ್ಟವರೆಂದು ಗುರುತಿಸಲಾಗಿದೆ.

ಘಟನೆಯಲ್ಲಿ ಹೊಂಡಕ್ಕೆ ಬಿದ್ದಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ ಆಗಮಿಸಿದೆ. ಕೃಷಿ ಹೊಂಡದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಮೃತ ದೇಹಗಳನ್ನು ರವಾನಿಸಲಾಗಿದೆ.

ಲಭ್ಯ ಮಾಹಿತಿ ಅನುಸಾರ, ಮೃತ ಗೌತಮ್ ಅವರ ಕುಟುಂಬಕ್ಕೆ ಸೇರಿದ ತೋಟದ ಪಕ್ಕದ ಜಮೀನೊಂದರ ಬಳಿ ಘಟನೆ ನಡೆದಿದೆ. ರಾತ್ರಿ ಗೌತಮ್ ಸುಮಾರು 10 ಜನ ಸ್ನೇಹಿತರ ಜೊತೆಗೂಡಿ ತೋಟಕ್ಕೆ ಹೋಗಿದ್ದಾರೆ.

ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋದ ಯುವಕ, ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದು ಈತನ ರಕ್ಷಣೆಗೆ ಹೋದ ಮತ್ತೋರ್ವನು ನೀರು ಪಾಲಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಇವರಿಬ್ಬರ ರಕ್ಷಣೆಗೆ ತೆರಳಿದ್ದ ಮತ್ತೋರ್ವ ಯುವಕ ಈಜಿ ದಡ ಸೇರಿದ್ದಾನೆ ಎಂದು ಹೇಳಲಾಗುತ್ತಿದೆ. ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

‘ಘಟನೆಯ ಕುರಿತಂತೆ ಪೊಲೀಸರು ಸೂಕ್ತ ತನಿಖೆ ನಡೆಸಿ, ಮೃತ ಯುವಕರ ಕುಟುಂಬಗಳಿಗೆ ನ್ಯಾಯ ಕೊಡಿಸಬೇಕು’ ಎಂದು ಯಡವಾಲ ಗ್ರಾಮದ ಮುಖಂಡ ಗಿರೀಶ್ ನಾಯ್ಕ್ ಅವರು ಮನವಿ ಮಾಡಿದ್ದಾರೆ.

ಘಟನೆಯ ಕುರಿತಂತೆ ಇನ್ನಷ್ಟೆ ಕುಂಸಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಬೇಕಾಗಿದೆ. ಘಟನೆಯ ಕುರಿತಂತೆ ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.  

Shivamogga, June 22: A horrific incident occurred late last night in Yadavala village under the jurisdiction of Kumsi police station in Shivamogga taluk, where two youths accidentally fell into a farm pond and died.

Sudden inspection of school vehicles in Shimoga city – Khadak warning! ಶಿವಮೊಗ್ಗ ನಗರದಲ್ಲಿ ಶಾಲಾ ವಾಹನಗಳ ದಿಢೀರ್ ತಪಾಸಣೆ – ಖಡಕ್ ವಾರ್ನಿಂಗ್! Previous post shimoga | ಶಿವಮೊಗ್ಗ | ಶಾಲಾ ವಾಹನಗಳ ದಿಢೀರ್ ತಪಾಸಣೆ – ಖಡಕ್ ವಾರ್ನಿಂಗ್!
shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Next post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 22 ರ ತರಕಾರಿ ಬೆಲೆಗಳ ವಿವರ