shimoga vinobanagara police station limit bommanakatte crime news update shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!

shimoga | BREAKING NEWS | ಶಿವಮೊಗ್ಗ : ಕೆರೆ ಏರಿ ಮೇಲೆ ರೌಡಿ ಶೀಟರ್ ಭೀಕರ ಕೊ*ಲೆ!

ಶಿವಮೊಗ್ಗ (shivamogga), ಜೂ. 22: ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಬಡಾವಣೆಯ ಕೆರೆ ಏರಿಯ ಮೇಲೆ, ಯುವಕನೋರ್ವನನ್ನು ಬರ್ಬರವಾಗಿ ಕೊ*ಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಜೂ. 22 ರ ಭಾನುವಾರ ಮುಂಜಾನೆ ಘಟನೆ ಬೆಳಕಿಗೆ ಬಂದಿದೆ.

ಹಳೇ ಬೊಮ್ಮನಕಟ್ಟೆ ಬಡಾವಣೆ 1 ನೇ ಕ್ರಾಸ್ ನಿವಾಸಿ ಅವಿನಾಶ್ (32) ಕೊಲೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ಈತ ಏಳನೀರು ವ್ಯಾಪಾರ, ಟೈಲ್ಸ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದುಬಂದಿದೆ.

ಮನೆಯಲ್ಲಿದ್ದ ಅವಿನಾಶ್ ರಾತ್ರಿ ಹೊರ ತೆರಳಿದ್ದು, ನಂತರ ಮನೆಗೆ ಹಿಂದಿರುಗಿರಲಿಲ್ಲ ಎನ್ನಲಾಗಿದೆ. ಮುಂಜಾನೆ ಕೆರೆ ಏರಿ ಮೇಲೆ ಕೊಲೆಗೀಡಾದ ಮೃತದೇಹ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.  

ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಸೇರಿದಂತೆ ವಿನೋಬನಗರ ಠಾಣೆ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.

ಕಾರಣವೇನು? : ಕೊಲೆಗೀಡಾದ ಅವಿನಾಶ್ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹಳೇಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯ ನಂತರವಷ್ಟೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಾಗಿದೆ.

#shimoga, #shivamogga, #crimenews, #bommanakatte, #shimogapolice, #shimogacrimenewsupdate, #vinobanagarapolicestation, #policestation, #vinobanagarapolicestation,

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 22 ರ ತರಕಾರಿ ಬೆಲೆಗಳ ವಿವರ
Police briefings at public places across Shivamogga district! ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್! Next post shimoga | police stations | ಶಿವಮೊಗ್ಗ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಬ್ರೀಫಿಂಗ್!