Congress MLA from Belur demands Minister Jamir's resignation: What did Siddaramaiah say? ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?

ಸಚಿವ ಜಮೀರ್ ರಾಜೀನಾಮೆಗೆ ಕಾಂಗ್ರೆಸ್ ಶಾಸಕ ಬೇಳೂರು ಆಗ್ರಹ : ಸಿದ್ದರಾಮಯ್ಯ ಹೇಳಿದ್ದೇನು?

ರಾಯಚೂರು (raichur) ಜೂನ್ 23: 14 ನೇ ಹಣಕಾಸು ಆಯೋಗದಿಂದ 15 ನೇ ಹಣಕಾಸಿನ ಆಯೋಗಕ್ಕೆ  ಹೋಲಿಸಿದರೆ, ರಾಜ್ಯಕ್ಕೆ  ಅನುದಾನ ನೀಡಿಕೆಯಲ್ಲಿ ಸುಮಾರು 80 ಸಾವಿರ ಕೋಟಿಗಳ ನಷ್ಟವಾಗಿದೆ. ಈ ಬಗ್ಗೆ ಯಾವುದೇ ಬಿಜೆಪಿ ಸಂಸದರೂ ಧ್ವನಿ ಎತ್ತುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಪ್ರದಾನಿ ಮೋದಿಯವರೊಂದಿಗೆ ನಿಕಟಸಂಪರ್ಕ ಹೊಂದಿರುವ ಪ್ರಭಾವಿ ಸಚಿವ ಎಂದು ಹೇಳಲಾಗುತ್ತದೆ.

11495 ಕೋಟಿ ರೂ.ಗಳನ್ನು ಹಣಕಾಸಿನ ಆಯೋಗದಲ್ಲಿ ವಿಶೇಷ ಅನುದಾನ ನೀಡಲು ಸಮ್ಮತಿ ನೀಡಲಾಗಿದ್ದರೂ , ಕೇಂದ್ರ ಸರ್ಕಾರ ಈ ಅನುದಾನವನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಅವರು ಯಾವುದೇ ಸಹಾಯವನ್ನು ಮಾಡಿಲ್ಲ. ಕರ್ನಾಟಕದ ಬಗ್ಗೆ ಮಾತನಾಡಲು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರಿಗೆ ಯಾವುದೇ ನೈತಿಕತೆ ಇಲ್ಲ.  ರಾಜ್ಯಕ್ಕೆ 11495 ಕೋಟಿ ರೂ. ಇನ್ನೂ ಬಿಡುಗಡೆಯಾಗಿಲ್ಲ  ಎಂದರು.

ಅನುದಾನ ಬಿಡುಗಡೆಗೆ ಒತ್ತಾಯ : ದೆಹಲಿ ಪ್ರವಾಸದ ವಿವರಗಳನ್ನು ಪತ್ರಕರ್ತರಿಗೆ ತಿಳಿಸುತ್ತಾ, ರಾಷ್ಟ್ರಪತಿಗಳ ಅಂಗಳಕ್ಕೆ ಹೋಗಿರುವ ಹಲವು ವಿಧೇಯಕಗಳ ಬಗ್ಗೆ ವಿವರಣೆ ನೀಡಲು ರಾಷ್ಟ್ರಪತಿಗಳನ್ನು ಭೇಟಿಯಾಗುವ ಸಮಯ ಕೋರಲಾಗಿದೆ. 16 ನೇ ಹಣಕಾಸಿನ ಆಯೋಗಕ್ಕೆ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಗಿತ್ತು.

ಈ ಬಗ್ಗೆ ಚರ್ಚಿಸಲು ಪ್ರಧಾನಿಯವರನ್ನು, ಹಣಕಾಸಿನ ಸಚಿವರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ರಾಜ್ಯಸರ್ಕಾರ 5 ಸಾವಿರ ಕೋಟಿಗಳ ವಿಶೇಷ ಅನುದಾನವನ್ನು ಪ್ರತಿವರ್ಷ ನೀಡುತ್ತಿದ್ದು, ಇದೇ ರೀತಿ, ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರವು ಅನುದಾನ ನೀಡಬೇಕೆಂದು ಒತ್ತಾಯಿಸಲಾಗಿದೆ. ಈ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ಮಾಡುವ ವಿಚಾರವನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಶಿಕ್ಷಕರ ನೇಮಕಾತಿಗೆ ಆದೇಶ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿಯಲು ಶಿಕ್ಷಕರ ಕೊರತೆ ಕಾರಣವಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಹೊಸ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆದೇಶ ನೀಡಲಾಗಿದೆ.  ಎಸ್ ಎಸ್ ಎಲ್ ಸಿ  ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಹೊರಬರಲು ಸರ್ಕಾರ ಎಲ್ಲ ಪ್ರಯತ್ನಗಳನ್ನು ಕೈಗೊಳ್ಳಲಿದೆ ಎಂದರು.

ವಿಶೇಷ ಕೋರ್ಟ್ : ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆಯ ಬಗ್ಗೆ ಸಚಿವ ಎಚ್.ಕೆ.ಪಾಟೀಲ್ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಅಕ್ರಮ ಗಣಿಗಾರಿಕೆ ಪ್ರಕರಣಗಳು ಹಿಂದಿನ ಅವಧಿಯಲ್ಲಿ ನಡೆದಿದ್ದು,  ಈ ಬಗ್ಗೆ ತ್ವರಿತ ತನಿಖೆ ನಡೆಸಲು ವಿಶೇಷ ಕೋರ್ಟ್ ರಚಿಸಿ,  ಗಣಿಗಾರಿಕೆಯಲ್ಲಿರುವ ಬಾಕಿಯ ವಸೂಲಾತಿಗೆ ಶೀಘ್ರ ಕ್ರಮಗಳನ್ನು ತೆಗೆದುಕೊಳ್ಳಲು ಪತ್ರದಲ್ಲಿ ತಿಳಿಸಿದ್ದಾರೆ.

ಸಚಿವ ಸಂಪುಟದಲ್ಲಿ ಸದರಿ ವಿಷಯವನ್ನು ಚರ್ಚಿಸಿ ವಿಶೇಷ ನ್ಯಾಯಾಲಯ ರಚಿಸಬೇಕೆಂಬ ಉದ್ದೇಶದಿಂದ ಸಚಿವರು ಪತ್ರ ಬರೆದಿದ್ದಾರೆ. ಅಂದಿನ ಲೋಕಾಯುಕ್ತ ಸಂತೋಷ್ ಹೆಗಡೆಯವರು ಅಕ್ರಮ ಗಣಿಗಾರಿಕೆ ಬಗ್ಗೆ ವರದಿಯನ್ನೂ  ನೀಡಿದ್ದರು. ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ನಾನು ಕೇಳಿದ ಪ್ರಶ್ನೆಗೆ ಸರ್ಕಾರದಿಂದ ಸಮರ್ಪಕ ಉತ್ತರ ಬಂದಿರಲಿಲ್ಲ. ಆಗ ಅಕ್ರಮ ಗಣಿಗಾರಿಕೆ ವಿರುದ್ಧ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸಲಾಗಿತ್ತು ಎಂದರು. 

ಕಾಂಗ್ರೆಸ್ ಶಾಸಕ ರಾಜು ಕಾಗೆಯವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಪ್ರಾರಂಭವಾಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿರುವ  ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಅವರೊಂದಿಗೆ ಚರ್ಚಿಸಲಾಗುವುದು. ವಿಶೇಷ ಅನುದಾನವನ್ನು ಅಗತ್ಯವಿರುವ ವಿಧಾನಸಭಾ ಕ್ಷೇತ್ರಗಳಿಗೆ ನೀಡಲಾಗುತ್ತದೆ ಎಂದರು.

ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ವಸತಿ ಸಚಿವರು ರಾಜಿನಾಮೆ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ವಸತಿ ಇಲಾಖೆಯ ವಿಷಯದ ಕುರಿತು ಚರ್ಚಿಸಲು ಶಾಸಕ ಬಿ.ಆರ್.ಪಾಟೀಲ್ ರವರು ಇದೇ 25 ರಂದು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದರು.

Raichur: CM Siddaramaiah spoke to reporters on Monday. Responding to a question from reporters regarding MLA Belur Gopalakrishna’s demand for the resignation of the Housing Minister, the CM said, “I will get information about this. MLA B.R. Patil has said that he will meet on the 25th to discuss the issue of the Housing Department.

Allowing alcohol consumption in front of the hotel and shop: File a case! ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು! Previous post shimoga | ಶಿವಮೊಗ್ಗ : ಅಡಕೆ ತೋಟದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪುರುಷನ ಶ*ವ ಪತ್ತೆ!
Rows of cases against government school vehicles in Shivamogga! ಶಿವಮೊಗ್ಗ ನಗರದಲ್ಲಿ ಶಾಲಾ ವಾಹನಗಳ ವಿರುದ್ದ ಸಾಲುಸಾಲು ಕೇಸ್ Next post shimoga | ಶಿವಮೊಗ್ಗ ನಗರದಲ್ಲಿ ಶಾಲಾ ವಾಹನಗಳ ವಿರುದ್ದ ಸಾಲುಸಾಲು ಕೇಸ್!