ಉದ್ಯೋಗಾವಕಾಶ : ಎ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ

ಶಿವಮೊಗ್ಗ, ಎ. 10: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.12 ರ ಬೆಳಗ್ಗೆ 10.00ಕ್ಕೆ ಪತ್ರಿಷ್ಠಿತ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ವಿವಿಧ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕನ್ನಡಿಗರು ಕಷ್ಟಪಟ್ಟು ಬೆಳೆಸಿದ ನಂದಿನಿ ಬ್ರ್ಯಾಂಡ್‌ ಅನ್ನು ಮುಗಿಸಲೆಂದೇ ಅಮುಲ್‌ ಹಾಲು, ಮೊಸರನ್ನು ರಾಜ್ಯಕ್ಕೆ ತರಲಾಗುತ್ತಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ ಕಿಡಿಕಾರಿದ್ದಾರೆ. Previous post ‘ನಂದಿನಿ’ ಕನ್ನಡಿಗರ ಅಸ್ಮಿತೆ : ಶಿವಮೊಗ್ಗ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೆ
ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. Next post ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ