Shivamogga : Jewellery and cash worth lakhs stolen from house in broad daylight ಶಿವಮೊಗ್ಗ : ಹಾಡಹಗಲೇ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು

shimoga | ಶಿವಮೊಗ್ಗ: ರೌಡಿ ಶೀಟರ್ ಕೊ*ಲೆ ಪ್ರಕರಣ – ಐವರು ಆರೋಪಿಗಳ ಬಂಧನ!

ಶಿವಮೊಗ್ಗ (shivamogga), ಜೂ. 23: ಇತ್ತೀಚೆಗೆ ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆಯ ಕೆರೆ ಏರಿ ಮೇಲೆ ನಡೆದಿದ್ದ ರೌಡಿ ಶೀಟರ್ ಅವಿನಾಶ್ (32) ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿನೋಬನಗರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಬೊಮ್ಮನಕಟ್ಟೆ ಬಡಾವಣೆ ನಿವಾಸಿಗಳಾದ ಪ್ರವೀಣ್ (35), ಆನಂದ್ (35), ಸುನೀಲ್ (30), ಜೀತೇಂದ್ರ (28) ಹಾಗೂ ಕಿರಣ್ (34) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. ಆರೋಪಿಗಳೆಲ್ಲರು ಕೃಷಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹಾಗೆಯೇ ಕೊಲೆಗೀಡಾದ ಅವಿನಾಶ್ ಸಂಬಂಧಿಗಳು ಹಾಗೂ ಪರಿಚಯಸ್ಥರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.  

ಎರಡು ದಿನಗಳ ಹಿಂದೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂಭಾಗ ಪೊಲೀಸರು ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದಾರೆ. ಸಬ್ ಇನ್ಸ್’ಪೆಕ್ಟರ್ ಸಂತೋಷ್ ಕುಮಾರ್ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಸಫಲವಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.   

ಭೀಕರ ಕೊ*ಲೆ : ಹಳೇ ಬೊಮ್ಮನಕಟ್ಟೆ 1 ನೇ ಕ್ರಾಸ್ ನಿವಾಸಿಯಾದ ರೌಡಿ ಶೀಟರ್ ಅವಿನಾಶ್ ಎಂಬಾತ, ಜೂ. 21 ರಾತ್ರಿ ಮನೆಯಿಂದ ತೆರಳಿದ್ದ. ನಂತರ ಮನೆಗೆ ಹಿಂದಿರುಗಿರಲಿಲ್ಲ. ಜೂ. 22 ರ ಮುಂಜಾನೆ ಬೊಮ್ಮನಕಟ್ಟೆ ಕೆರೆ ಏರಿ ಸಮೀಪ ಅವಿನಾಶ್ ಮೃ*ತದೇಹ ಪತ್ತೆಯಾಗಿತ್ತು. ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹ*ತ್ಯೆ ಮಾಡಲಾಗಿತ್ತು.

ಈ ಕುರಿತಂತೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೊ*ಲೆಗೀಡಾದ ಅವಿನಾಶನು ಆರೋಪಿಯೋರ್ವನ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಲಾಗಿದೆ ಎಂಬ ಅಂಶವನ್ನು, ಪೊಲೀಸರ ವಿಚಾರಣೆ ವೇಳೆ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

Shimoga, . 23: In connection with the recent murder case of rowdy sheeter Avinash (32) which took place on the outskirts of Bommanakatta lake in Shimoga city, Vinobanagar police have succeeded in arresting five accused.

shimoga APMC vegetable prices | Details of vegetable prices for July 8 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 8 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 26 ರ ತರಕಾರಿ ಬೆಲೆಗಳ ವಿವರ
Shimoga Municipality | Shimoga Municipality area revision: DC Gurudatta Hegde takes important step! ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಡಿಸಿ ಗುರುದತ್ತ ಹೆಗಡೆ ಮಹತ್ವದ ಕ್ರಮ! Next post shimoga palike | ವಿಳಂಬವಾಗುತ್ತಿರುವ ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ : ಗಮನಿಸುವರೆ ಡಿಸಿ?