ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ. ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ : ಎ.13 ರಿಂದ ಆರಂಭವಾಗುವ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ದತೆ – ಚುನಾವಣಾಧಿಕಾರಿ ಮಾಹಿತಿ

ಶಿವಮೊಗ್ಗ, ಏ. 10 : ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎ.13 ರಿಂದ ಪಾಲಿಕೆ ಕಚೇರಿ ಪರಿಷತ್ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ಸ್ವೀಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶಿವಮೊಗ್ಗ ಅಸೆಂಬ್ಲಿ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ಎನ್.ಚಂದ್ರಕುಮಾರ್ ಅವರು ತಿಳಿಸಿದ್ದಾರೆ.

ಸೋಮವಾರ ಪಾಲಿಕೆ ಪರಿಷತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. 20-04-2023 ರವರೆಗೆ ನಿಯಮಾನುಸಾರ ಅಭ್ಯರ್ಥಿಗಳಿಂದ ನಾಮಪತ್ರ ಸ್ವೀಕರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ 1,26,568 ಪುರುಷ, 1,32,334 ಮಹಿಳೆ ಮತ್ತು 14 ತೃತೀಯ ಲಿಂಗಿ ಸೇರಿದಂತೆ ಒಟ್ಟು 2,58,916 ಮತದಾರರಿದ್ದಾರೆ. 286 ಮತದಾನ ಕೇಂದ್ರಗಳಿದ್ದು, 8 ಹೆಚ್ಚುವರಿ ಮತದಾನ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆಯೋಗದಿಂದ ಅನುಮತಿ ದೊರೆತ ನಂತರದಲ್ಲಿ ಮತದಾನ ಕೇಂದ್ರ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗುರುತಿನ ಚೀಟಿ ವಿತರಣೆ: ದಿನಾಂಕ 05-01-2022 ರ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ನಂತರದಲ್ಲಿ ಹೊಸದಾಗಿ ಸೇರ್ಪಡೆಯಾದ ಮತದಾರರಿಗೆ, ಗುರುತಿನ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಈವರೆಗೆ ಸುಮಾರು 10,090 ಮತದಾರರ ಗುರುತಿನ ಚೀಟಿಗಳನ್ನು ಸ್ಪೀಡ್ ಪೊಸ್ಟ್  ಮೂಲಕ ಮತದಾರರಿಗೆ ರವಾನಿಸಿದೆ.

ಮತದಾರರ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ದಿನಾಂಕ: 11-04-2023 ಅಂತಿಮ ದಿನವಾಗಿದ್ದು, ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಮತಗಟ್ಟೆ ಏಜೆಂಟರುಗಳ ಪಟ್ಟಿ:  ಭಾರತೀಯ ಜನತಾ ಪಾರ್ಟಿ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿ ನೀಡಿದ್ದಾರೆ. ಜನತಾದಳ ಜಾತ್ಯಾತೀತ ಪಕ್ಷದವರು ಮತಗಟ್ಟೆ ಏಜೆಂಟರುಗಳ ಪಟ್ಟಿ ನೀಡಬೇಕಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಂಚೆ ಮತಪತ್ರ ವಿತರಣೆ: 80 ವರ್ಷ ವಯೋಮಾನ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಬಾಧಿತ ಮತದಾರರಿಗೆ ಅಂಚೆ ಮೂಲಕ ಮತದಾನ ಮಾಡಲು ಭಾರತ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಸದರಿ ವ್ಯಕ್ತಿಗಳು ಮತದಾನ ಮಾಡುವ ಪ್ರಕ್ರಿಯೆಯನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ವೀಕ್ಷಿಸಲು ಅವಕಾಶವಿದೆ.

ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್ ಲ್ಲಿ 09-05-2022 ರಂದು ಮಸ್ಟರಿಂಗ್ ಮತ್ತು 10- 05-2022 ರಂದು ಡಿ ಮಸ್ಟರಿಂಗ್ ಕಾರ್ಯ ನಡೆಯಲಿದೆ.

ಸಹಾಯವಾಣಿ: ಮಹಾನಗರ ಪಾಲಿಕೆಯಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತ ಸಹಾಯವಾಣಿಯು 24*7 ಕಾರ್ಯನಿರ್ವಹಿಸುತ್ತಿದೆ. ಟೋಲ್‍ಫ್ರೀ ದೂರವಾಣಿ ಸಂಖ್ಯೆ: 1800-4257677 ಗೆ ಸಾರ್ವಜನಿಕರು, ಮತದಾರರು ಚುನಾವಣೆಗೆ ಸಂಬಂಧಿಸಿದ ಮಾದರಿ ನೀತಿ ಸಂಹಿತೆಯ ಅಥವಾ ಯಾವುದೇ ವಿಷಯಗಳ ಬಗ್ಗೆ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ನೋಂದಾಯಿಸಲ್ಪಟ್ಟ ಮತದಾರರಿಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ವೋಟರ್ ಸ್ಲಿಪ್‍ನ್ನು ವಿತರಿಸುತ್ತಾರೆ ಎಂದರು.

ಡಿವೈಎಸ್‍ಪಿ ಬಾಲರಾಜ್ ಮಾತನಾಡಿ, ನಾಮಪತ್ರ ಸಲ್ಲಿಕೆ ಆರಂಭ ದಿನಾಂಕದಿಂದ ಅಂತಿಮ ದಿನದವರೆಗೆ ಪಾಲಿಕೆ ಹಿಂದಿನ ಗೇಟ್‍ನ್ನು ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗುವುದು, ಪಾಲಿಕೆಯ ಇನ್ನೊಂದು ಗೇಟ್‍ನಿಂದ ಪ್ರವೇಶಿಸಿ ತಮ್ಮ ಕೆಲಸಗಳನ್ನು ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಐಎಎಸ್ ಪ್ರೊಬೇಷನರಿ ಅಧಿಕಾರಿ ದಲ್ಜೀತ್ ಕುಮಾರ್ ಉಪಸ್ಥಿತರಿದ್ದರು.

Previous post ಉದ್ಯೋಗಾವಕಾಶ : ಎ.12 ರಂದು ವಿವಿಧ ಕಂಪನಿಗಳಿಂದ ನೇರ ಸಂದರ್ಶನ
ಆದರೆ ಹಲವು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ರಾಜ್ಯ ನಾಯಕರ ನಡುವೆ ಒಮ್ಮತದ ಅಭಿಪ್ರಾಯ ಏರ್ಪಡದ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ ಎಂಬ ಮಾತುಗಳು ಕೇಳಿಬರಲಾರಂಭಿಸಿದೆ. ಯಾವಾಗ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂಬುವುದು ಪಕ್ಷದ ಮುಖಂಡರಿಗೂ ಸ್ಪಷ್ಟತೆಯಿಲ್ಲದಂತಾಗಿದೆ! ಪಕ್ಷದ ಉನ್ನತ ಮೂಲಗಳ ಮಾಹಿತಿ ಅನುಸಾರ ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಿಗ್ಗೆ ಬಿಜೆಪಿ ಪ್ರಥಮ ಹಂತದ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಸುಮಾರು 150 ಕ್ಕೂ ಹೆಚ್ಚು ಕ್ಷೇತ್ರಗಳ ಹುರಿಯಾಳುಗಳ ಹೆಸರು ಅಂತ್ಯಗೊಂಡಿದೆ ಎಂದು ಹೇಳಲಾಗುತ್ತಿದೆ. Next post ಮೋದಿ – ಅಮಿತ್ ಶಾ ಬಿಗಿ ನಿಲುವು : ಹಲವು ಕ್ಷೇತ್ರಗಳಲ್ಲಿ ಕಣಕ್ಕಿಳಿಯಲಿದ್ದಾರೆಯೇ ಅಚ್ಚರಿಯ ಅಭ್ಯರ್ಥಿಗಳು?