Allowing alcohol consumption in front of the hotel and shop: File a case! ಹೋಟೆಲ್, ಅಂಗಡಿ ಮುಂಭಾಗ ಮದ್ಯ ಸೇವನೆಗೆ ಅವಕಾಶ : ಕೇಸ್ ದಾಖಲು!

hosanagara taluk news | ಹೊಸನಗರ – ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ : ಕೊನೆಗೂ ಸಿಕ್ಕಿಬಿದ್ದ ಆರೋಪಿ!

ಶಿವಮೊಗ್ಗ (shimoga), ಜೂ. 30: ಜಿಲ್ಲೆಯ ಹೊಸನಗರ ತಾಲೂಕಿನ ಮೇಲಿನ ಸಂಪಳ್ಳಿ ಸಮೀಪದ ವಿಜಾಪುರ ಗ್ರಾಮದಲ್ಲಿ, ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಾಪುರ ಗ್ರಾಮದ ನಿವಾಸಿ ರಾಮಚಂದ್ರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ದ ಪ್ರಾಣಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ – 1960  (prevention of cruelty to animals act) ರ ಅಡಿ ಪ್ರಕರಣ ದಾಖಲಸಿಕೊಂಡು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಜೂ. 30 ರಂದು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ನವೀನ್ ಶೆಟ್ಟಿ ಎಂಬುವರಿಗೆ ಸೇರಿದ ಹಸುಗಳನ್ನು ಜೂನ್ 28 ರಂದು ಎಂದಿನಂತೆ ಮೇಯಲು ಬಿಡಲಾಗಿತ್ತು. ಮೇಯಲು ಬಿಟ್ಟಿದ್ದ ವೇಳೆ, ಹಸುವೊಂದರ ಕೆಚ್ಚಲು ಕತ್ತರಿಸಿದ್ದು ಕಂಡುಬಂದಿತ್ತು. ಈ ಕುರಿತಂತೆ ಜೂ. 29 ರಂದು ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿ ರಾಮಚಂದ್ರ ಕತ್ತಿ ಹಾಗೂ ದೊಣ್ಣೆಯಿಂದ ಹೊಡೆದು, ಹಸುವಿನ ಕೆಚ್ಚಲು ಗಾಯಪಡಿಸಿದ್ದು ಪತ್ತೆಯಾಗಿತ್ತು. ಆರೋಪಿಯ ತೋಟಕ್ಕೆ ದನಗಳು ನುಗ್ಗುತ್ತಿದ್ದು, ಇದರಿಂದ ಆಕ್ರೋಶಗೊಂಡು ಈ ಕೃತ್ಯ ನಡೆಸಿದ್ದಾನೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga, June. 30: In Vijapura village near Upper Sampalli in Hosanagar taluk of the district, the police have succeeded in arresting the accused in the case of cutting off the udder of a Cow’s.

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜೂನ್ 30 ರ ತರಕಾರಿ ಬೆಲೆಗಳ ವಿವರ
Bhadravati | A young man who had stolen bikes from various places was arrested! ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ! Next post bhadravati crime news | ಭದ್ರಾವತಿ | ವಿವಿಧೆಡೆ ಬೈಕ್ ಕಳವು ಮಾಡಿದ್ದ ಯುವಕ ಸೆರೆ!