Shivamogga: Graduate student d**ies of heart attack| ಶಿವಮೊಗ್ಗ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು!

shimoga | ಶಿವಮೊಗ್ಗ : ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾ*ವು!

ಶಿವಮೊಗ್ಗ (shivamogga), ಜು. 1: ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃ*ತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ.

ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ.

ಜೂನ್ 29 ರ ಭಾನುವಾರ ಮುಂಜಾನೆ ಶ್ರೀನಿಧಿ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡಿದ್ದು, ತಕ್ಷಣವೇ ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ ಎಂದು ತಿಳಿದುಬಂದಿದೆ.

ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ ಎಂದು ಬಸವನಗಂಗೂರು ಗ್ರಾಮದ ನಿವಾಸಿ ಪ್ರಸನ್ನರವರು ಮಾಹಿತಿ ನೀಡಿದ್ದಾರೆ.

ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಮೃತರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ.

Shivamogga, July 1: A tragic incident in which a graduate student d**ied of a heart attack took place in Basavanagangur village on the outskirts of Shivamogga city.

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 1 ರ ತರಕಾರಿ ಬೆಲೆಗಳ ವಿವರ
shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..! shimoga | sagara | Sagara: 9th grade student commits suicide..! Next post shimoga | sagara | ಸಾಗರ : ಆತ್ಮಹ**ತ್ಯೆಗೆ ಶರಣಾದ 9 ನೇ ತರಗತಿ ವಿದ್ಯಾರ್ಥಿ..!