
shimoga rain | ತುಂಗಾ ಡ್ಯಾಂನಿಂದ ಭಾರೀ ಪ್ರಮಾಣದ ನೀರು ಹೊರಕ್ಕೆ : ಶಿವಮೊಗ್ಗದ ನದಿಪಾತ್ರದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ!
ಶಿವಮೊಗ್ಗ (shivamogga), ಜು.3: ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣದಿಂದ, ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯದ ಒಳಹರಿವಿನಲ್ಲಿ ಗಣನೀಯ ಪ್ರಮಾಣದ ಹೆಚ್ಚಳ ಕಂಡುಬಂದಿದೆ!
‘ಈಗಾಗಲೇ ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ, ಒಳ ಹರಿವಿನಷ್ಟೇ ನೀರನ್ನು ಹೊರ ಹರಿಸಲಾಗುತ್ತಿದೆ. ಜು.3 ರ ಗುರುವಾರ ಸಂಜೆ ಡ್ಯಾಂ ನಿಂದ 77,000 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ’ ಎಂದು ಡ್ಯಾಂ ವ್ಯಾಪ್ತಿಯ ಎಂಜಿನಿಯರ್ ತಿಪ್ಪಾನಾಯ್ಕ್ ಅವರು ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ತುಂಗಾ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರ ಬಿಡುತ್ತಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗ ನಗರದ ಮೂಲಕ ಹಾದು ಹೋಗಿರುವ ತುಂಗಾ ನದಿಯು, ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಕೋರ್ಪಳಯ್ಯನ ಛತ್ರದ ಬಳಿ ಅಪಾಯದ ಮಟ್ಟ ತೋರ್ಪಡಿಸುವ ಮಂಟಪದ ಮೇಲೆ ನೀರು ಹರಿಯುತ್ತಿದೆ.
ತುಂಗಾ ಜಲಾಶದ ಹೊರಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾದರೆ, ನದಿ ಪಾತ್ರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಗಳಿವೆ. ಈ ಕಾರಣದಿಂದ ತಗ್ಗು ಪ್ರದೇಶದ ಬಡಾವಣೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪಾಲಿಕೆ ಆಡಳಿತದಿಂದ ಪ್ರವಾಹ ಎಚ್ಚರಿಕೆಯ ಸಂದೇಶ ನೀಡಲಾಗುತ್ತಿದೆ.
ಶಿವಮೊಗ್ಗ ನಗರದಲ್ಲಿ ಮಳೆಯ ಪ್ರಮಾಣ ಕಡಿಮೆಯಿರುವುದರಿಂದ ನದಿ ಪಾತ್ರದ ತಗ್ಗು ಪ್ರದೇಶಗಳ ನಿವಾಸಿಗಳು ಕೊಂಚ ನಿಟ್ಟಿಸಿರು ಬಿಡುವಂತಾಗಿದೆ.
Shivamogga, July 3: Due to widespread rainfall in the catchment area, there has been a significant increase in the inflow of Tunga Reservoir in Gajanur, Shivamogga taluk! Due to the release of a large amount of water from the Tunga Reservoir, the Tunga River, which passes through the city of Shivamogga, has started flowing at a dangerous level.