
shimoga | BREAKING NEWS | ಭಾರೀ ಮಳೆ : ಶಿವಮೊಗ್ಗ ಜಿಲ್ಲೆಯ 3 ತಾಲೂಕಿನ ಶಾಲಾ – ಕಾಲೇಜುಗಳಿಗೆ ಜು. 4 ರಂದು ರಜೆ ಘೋಷಣೆ!
ಶಿವಮೊಗ್ಗ (shivamogga), ಜು. 4: ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಪಶ್ಚಿಮಘಟ್ಟ ವ್ಯಾಪ್ತಿಯ ಪ್ರದೇಶಗಳಲ್ಲಿ ಮಳೆ ಅಬ್ಬರ ಮತ್ತಷ್ಟು ಜೋರಾಗಿದೆ. ಧಾರಕಾರ ಮಳೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲೂಕುಗಳ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಜುಲೈ 4 ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.
ಜುಲೈ 3 ರಂದು ಭಾರೀ ಮಳೆ ಕಾರಣದಿಂದ ಹೊಸನಗರ, ಸಾಗರ ತಾಲೂಕುಗಳ ಅಂಗನವಾಡಿ ಹಾಗೂ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯ ಪ್ರಮಾಣ ಇಳಿಮುಖವಾಗದ ಕಾರಣದಿಂದ, ಮುನ್ನೆಚ್ಚರಿಕೆ ಕ್ರಮವಾಗಿ ಜು. 4 ರಂದು ಕೂಡ ರಜೆ ವಿಸ್ತರಣೆ ಮಾಡಲಾಗಿದೆ.
ಇದರ ಜೊತೆಗೆ ಶಿವಮೊಗ್ಗ ತಾಲೂಕು ಆಡಳಿತವು ಕೂಡ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 4 ರ ಶುಕ್ರವಾರ ರಜೆ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ಇಂದು ಕೂಡ ಆರಿದ್ರಾ ಮಳೆ ಆರ್ಭಟ ಬಿರುಸುಗೊಂಡಿದೆ. ಎಡೆಬಿಡದೆ ಮಳೆಯಾಗುತ್ತಿದೆ. ಇದರಿಂದ ಕೆರೆಕಟ್ಟೆ, ನದಿಗಳ ನೀರಿನ ಹರಿವಿನಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ.
ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ಆದೇಶ!

ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 4 ರ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ ಎಂದು ತಹಶೀಲ್ದಾರ್ ವಿ ಎಸ್ ರಾಜೀವ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
Shivamogga Jul. 4: Monsoon rains have intensified in Shivamogga district. The rains have intensified in the areas under the Western Ghats. It is raining heavily.
In this context, a holiday has been declared for Anganwadis, schools and colleges in Shivamogga, Hosanagar and Sagar taluks of the district on Friday, July 4. The taluk administrations there have issued an order in this regard.