Only 16 feet left to fill Bhadra reservoir! ಭದ್ರಾ ಜಲಾಶಯ ಭರ್ತಿಗೆ ಕೇವಲ 16 ಅಡಿ ಬಾಕಿ

bhadra dam | ಭದ್ರಾ ಜಲಾಶಯದಿಂದ ನದಿಗೆ ಹೆಚ್ಚುವರಿ ನೀರು ಬಿಡುಗಡೆ ಕುರಿತಂತೆ ನೀಡಲಾದ ಸ್ಪಷ್ಟನೆಯೇನು?

ಶಿವಮೊಗ್ಗ (shivamogga), ಜುಲೈ 04: ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸುವುದಕ್ಕೆ ಸಂಬಂಧಿಸಿದಂತೆ, ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಅವರು ಜು. 4 ರಂದು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ವಿವರ ಈ ಕೆಳಕಂಡಂತಿದೆ.

ಪ್ರಕಟಣೆಯೇನು? : ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20,000-25,000 ಕ್ಯೂಸೆಕ್ ಇದ್ದು, ಯಾವ ಸಮಯದಲ್ಲಾದರು ಜಲಾಶಯ ಭರ್ತಿಯಾಗುವ ಸಾಧ್ಯತೆಯಿದೆ.

ಅಣೆಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿರುತ್ತದೆ.

ಆದರೆ ಅಚ್ಚುಕಟ್ಟು ವ್ಯಾಪ್ತಿಯ ರೈತರು ಜಲಾಶಯದಲ್ಲಿ ನೀರು ಸಂಗ್ರಹಣೆ ಮಾಡದೆ, ನದಿಗೆ ನೀರು ಬಿಡಲಾಗುತ್ತಿದೆ ಎಂದು ಕಚೇರಿಗೆ ಕರೆ ಮಾಡಿ ಮಾಹಿತಿ ಕೇಳುತ್ತಿದ್ದಾರೆ.

ಜಲಾಶಯದ ಸುರಕ್ಷತೆ ದೃಷ್ಟಿಯಿಂದ, ನೀರಿನ ಸಂಗ್ರಹಣೆ ಕುರಿತು Rule Curve  ಪಾಲನೆ ಮಾಡಲಾಗುತ್ತಿದೆ. Rule Curve  ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾದಲ್ಲಿ, ಹೆಚ್ಚುವರಿ ನೀರನ್ನು ಹೊರ ಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಆರ್. ರವಿಚಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shimoga, July 04: Regarding the release of water from Bhadra Reservoir to the river, Bhadra Plan Irrigation Advisory Committee Member Secretary R. Ravichandra has released an announcement on July 4.

Shimoga: TT collided with a tree - those who left for Siganduri from Bangalore escaped from danger! ಶಿವಮೊಗ್ಗ : ಮರಕ್ಕೆ ಡಿಕ್ಕಿ ಹೊಡೆದ ಟಿಟಿ – ಬೆಂಗಳೂರಿನಿಂದ ಸಿಗಂದೂರಿಗೆ ಹೊರಟವರು ಅಪಾಯದಿಂದ ಪಾರು! Previous post shimoga accident news | ಶಿವಮೊಗ್ಗ : ಮರಕ್ಕೆ ಡಿಕ್ಕಿ ಹೊಡೆದ ಟಿಟಿ – ಬೆಂಗಳೂರಿನಿಂದ ಸಿಗಂದೂರಿಗೆ ಹೊರಟವರು ಅಪಾಯದಿಂದ ಪಾರು!
Shivamogga: Hydrarama of a young man in the police station premises - Police are shocked! ಶಿವಮೊಗ್ಗ : ಠಾಣೆ ಆವರಣದ ಅರಳಿ ಮರವೇರಿ ಯುವಕನ ಹೈಡ್ರಾಮಾ - ಕಕ್ಕಾಬಿಕ್ಕಿಯಾದ ಪೊಲೀಸರು! Next post shimoga BREAKING NEWS | ಶಿವಮೊಗ್ಗ : ಠಾಣೆ ಆವರಣದ ಅರಳಿ ಮರವೇರಿ ಯುವಕನ ಹೈಡ್ರಾಮಾ – ಕಕ್ಕಾಬಿಕ್ಕಿಯಾದ ಪೊಲೀಸರು!