shimoga | Shivamogga: Ragigudda case – Two in police custody! ಶಿವಮೊಗ್ಗ : ರಾಗಿಗುಡ್ಡ ಪ್ರಕರಣ – ಇಬ್ಬರು ಪೊಲೀಸ್ ವಶಕ್ಕೆ!

shimoga | ಶಿವಮೊಗ್ಗ : ರಾಗಿಗುಡ್ಡ ಪ್ರಕರಣ – ಇಬ್ಬರು ಪೊಲೀಸ್ ವಶಕ್ಕೆ!

ಶಿವಮೊಗ್ಗ (shivamogga), ಜು. 6: ಶಿವಮೊಗ್ಗ ನಗರದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿನ ಉದ್ಯಾನವನವೊಂದರಲ್ಲಿದ್ದ ನಾಗರ ಮೂರ್ತಿ ಕಿತ್ತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಈ ಕುರಿತಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು, ವ್ಯಾಟ್ಸಾಪ್ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ. ‘ಘಟನೆ ಕುರಿಂತೆ ಪ್ರಕರಣ ದಾಖಲಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಕುರಿತಂತೆ ಯಾವುದೇ ಸುಳ್ಳು ಸುದ್ದಿ, ವದಂತಿ ಹರಡಬಾರದು. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ.

ಘಟನೆಯ ಹಿನ್ನೆಲೆ : ಬಂಗಾರಪ್ಪ ಬಡಾವಣೆಯ ನಿರ್ಮಾಣ ಹಂತದ ಕಟ್ಟಡವೊಂದರ ಮುಂಭಾಗವಿರುವ ಉದ್ಯಾನವನದಲ್ಲಿ, ದೇವರಮೂರ್ತಿಗಳ ಪ್ರತಿಷ್ಠಾಪಿಸಲಾಗಿತ್ತು. ಜು. 5 ರ ಸಂಜೆ ಕಿಡಿಗೇಡಿಗಳು ನಾಗರಕಲ್ಲನ್ನು ಕಿತ್ತು ಹಾಕಿದ್ದರು.

ಈ ವಿಷಯ ತಿಳಿದ ಸ್ಥಳೀಯ ನಿವಾಸಿಗಳು ಸ್ಥಳದಲ್ಲಿ ಜಮಾಯಿಸಿದ್ದು, ಕೆಲ ಸಮಯ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

ರಾತ್ರಿಯೇ ಶಾಸಕ ಚನ್ನಬಸಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿದ್ದರು. ಭಾನುವಾರ ಬೆಳಿಗ್ಗೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ,ರವರು ಸ್ಥಳಕ್ಕೆ ಭೇಟಿ ನೀಡಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಪಹರೆಯ ವ್ಯವಸ್ಥೆ ಮಾಡಲಾಗಿದೆ.

Shivamogga, July 6: The police have taken two people into custody and are interrogating them intensively in connection with the case of the removal of a nagara statue from a open park in Bangarappa Layout, Ragigudda, Shivamogga city.

shimoga APMC vegetable prices | Details of vegetable prices for July 18 in Shimoga APMC wholesale market shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 18 ರ ತರಕಾರಿ ಬೆಲೆಗಳ ವಿವರ Previous post shimoga APMC vegetable prices | ಶಿವಮೊಗ್ಗ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲಿ ಜುಲೈ 6 ರ ತರಕಾರಿ ಬೆಲೆಗಳ ವಿವರ
The deceased has been identified as Anavatti Police Station ASI Basavarajappa (50). He is originally from Shikaripura taluk. shimoga | ಅಪಘಾತದಲ್ಲಿ ಗಾಯಗೊಂಡಿದ್ದ ಆನವಟ್ಟಿ ಪೊಲೀಸ್ ಠಾಣೆ ಎಎಸ್ಐ ಸಾವು! Next post shimoga | ಅಪಘಾತದಲ್ಲಿ ಗಾಯಗೊಂಡಿದ್ದ ಆನವಟ್ಟಿ ಪೊಲೀಸ್ ಠಾಣೆ ಎಎಸ್ಐ ಸಾವು!