‘ತಾವು ಈಗಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಯಾವ ಪಕ್ಷದಿಂದ ಎಂಬುವುದು ಇಷ್ಟರಲ್ಲಿಯೇ ಸ್ಪಷ್ಟವಾಗಲಿದೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

‘ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ : ಪಕ್ಷ ಯಾವುದೆಂಬುವುದು ಇಷ್ಟರಲ್ಲಿಯೇ ಗೊತ್ತಾಗುತ್ತದೆ’ – ಆಯನೂರು ಮಂಜುನಾಥ್

ಶಿವಮೊಗ್ಗ, ಎ. 12: ‘ತಾವು ಈಗಲೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಯಾವ ಪಕ್ಷದಿಂದ ಎಂಬುವುದು ಇಷ್ಟರಲ್ಲಿಯೇ ಸ್ಪಷ್ಟವಾಗಲಿದೆ’ ಎಂದು ಬಿಜೆಪಿ ವಿಧಾನ ಪರಿಷತ್ ಶಾಸಕ ಆಯನೂರು ಮಂಜುನಾಥ್ ತಿಳಿಸಿದ್ದಾರೆ.

ಶಿವಮೊಗ್ಗ ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಯಾವ ಪಕ್ಷದಿಂದ ತಾವು ಸ್ಪರ್ಧಾಕಾಂಕ್ಷಿ ಎಂಬುವುದನ್ನು ಸ್ಪಷ್ಟವಾಗಿ ಹೇಳದ ಆಯನೂರು ಮಂಜುನಾಥ್, ‘ಶಿವಮೊಗ್ಗ ಕ್ಷೇತ್ರಕ್ಕೆ ಯಾವ ಪಕ್ಷಗಳ ಅಭ್ಯರ್ಥಿಗಳ ಹೆಸರು ಪ್ರಕಟವಾಗಿಲ್ಲ. ಕಾದು ನೋಡಿ ಗೊತ್ತಾಗುತ್ತದೆ’ ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿದ್ದಾರೆ.

ಕೆ.ಎಸ್.ಈಶ್ವರಪ್ಪಅವರ ವಿರುದ್ದ ತಮಗೆ ಯಾವುದೇ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ಆದರೆ ಅವರ ಸ್ಪರ್ಧೆಗೆ ತಮ್ಮ ಆಕ್ಷೇಪವಿತ್ತು. ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಿರುವುದರಿಂದ, ತಮ್ಮ ನಿಲುವಿನಲ್ಲಿ ಯಾವುದೇ ವ್ಯತ್ಯಾಸವಿಲ್ಲ. ತಾವು ಈಗಲೂ ಶಿವಮೊಗ್ಗ ನಗರ ಕ್ಷೇತ್ರದ ಸ್ಪರ್ಧಾಕಾಂಕ್ಷಿಯಾಗಿದ್ದೆನೆ. ಇಷ್ಟರಲ್ಲಿಯೇ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

ಮುಂದುವರಿದ ಗೊಂದಲ: ಸುದ್ದಿಗೋಷ್ಠಿಯುದ್ದಕ್ಕೂ ಆಯನೂರು ಮಂಜುನಾಥ್, ತಾವು ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಕುರಿತಂತೆ ಸ್ಪಷ್ಟವಾಗಿ ಏನನ್ನೂ ಹೇಳಲಿಲ್ಲ. ಯಾವ ಪಕ್ಷದಿಂದ ಟಿಕೆಟ್ ನಿರೀಕ್ಷೆಯಲ್ಲಿರುವ ಬಗ್ಗೆಯೂ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಲಿಲ್ಲ.

ಕೆ.ಎಸ್.ಈಶ್ವರಪ್ಪರ ಗುಣಗಾನ..!

*** ಇತ್ತೀಚೆಗೆ ನಡೆಸಿದ ಪತ್ರಿಕಾಗೋಷ್ಠಿಯ ವೇಳೆ ಕೆ.ಎಸ್.ಈಶ್ವರಪ್ಪ ವಿರುದ್ದ ಆರೋಪಗಳ ಸುರಿಮಳೆಗೈದಿದ್ದ ಆಯನೂರು ಮಂಜುನಾಥ್, ಬುಧವಾರದ ಸುದ್ದಿಗೋಷ್ಠಿಯಲ್ಲಿ ಅವರ ಗುಣಗಾನ ಮಾಡಿದರು. ಮೃಧು ಧೋರಣೆ ತಳೆದಿದ್ದು ಕಂಡುಬಂದಿತು. ‘ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕಾರಣದ ನಿವೃತ್ತಿ ಘೋಷಿಸಿದ್ದಾರೆ. ಇದು ಶಿವಮೊಗ್ಗ ರಾಜಕಾರಣದ ಮೇಲೆ ಪ್ರಭಾವ ಬೀರುತ್ತದೆ. ಸುದೀರ್ಘ ರಾಜಕೀಯ ಪ್ರಯಾಣದಲ್ಲಿ ಅವರಿಗೆ ವ್ಯಕ್ತಿಗತ ಶತೃಗಳು ಕಡಿಮೆ. ಸ್ನೇಹದಿಂದ ಇರುವುದು ಅವರ ಸ್ವಭಾವವಾಗಿದೆ. ತಮ್ಮ ರಾಜಕೀಯ ನಿಲುವುಗಳೇನೇ ಇದ್ದರೂ ಅವರೊಂದಿಗೆ ಆತ್ಮೀಯತೆಯಿದೆ. ಅವರ ನಿರ್ಗಮನ ಸ್ವಲ್ಪ ಆಘಾತಕಾರಿ ಹಾಗೂ ನಿರಾಶದಾಯಕ. ಆದರೆ ಅವರ ನಿಯಂತ್ರಣವಿಲ್ಲದ ಮಾತು, ಮೊದಲ ಶತೃವಾಗಿತ್ತು. ಸಚಿವರಾಗಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರ ಮನೆಯಲ್ಲಿಯೇ ಇದ್ದ ಮತ್ತೋರ್ವ ಶತೃವಿನಿಂದ ಅವರಿಗೆ ಅಪಖ್ಯಾತಿ ಬರುವಂತಾಗಿತ್ತು. ಸಚಿವ ಸ್ಥಾನ ಕಳೆದುಕೊಳ್ಳುವಂತಾಗಿತ್ತು. ಪುತ್ರ ವ್ಯಾಮೋಹದಿಂದ ಹೊರಬಂದಿದ್ದರೆ, ರಾಜಕೀಯದಲ್ಲಿ ಅವರಿಗೆ ಕಪ್ಪುಚುಕ್ಕೆ ಬರುತ್ತಿರಲಿಲ್ಲ’ ಎಂದು ಆಯನೂರು ಮಂಜುನಾಥ್ ಹೇಳಿದ್ದಾರೆ.

ಕೊನೆಗೂ ವಿಧಾನಸಭೆ ಚುನಾವಣಾ ಅಖಾಡಕ್ಕೆ ಬಿಜೆಪಿ ಪಕ್ಷ ತನ್ನ ಹುರಿಯಾಳುಗಳ ಮೊದಲ ಹಂತದ ಪಟ್ಟಿ ಪ್ರಕಟಿಸಿದೆ. ಮಂಗಳವಾರ ರಾತ್ರಿ ನವದೆಹಲಿಯಲ್ಲಿ ಬಿಡುಗಡೆಯಾದ ಅಭ್ಯರ್ಥಿಗಳ ಪಟ್ಟಿಯಲ್ಲಿ, ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳಲ್ಲಿ 6 ಕ್ಷೇತ್ರಗಳಲ್ಲಿ ತನ್ನ ಹುರಿಯಾಳುಗಳು ಹೆಸರು ಪ್ರಕಟಿಸಿದೆ. ನಿರೀಕ್ಷಿಸಿದಂತೆ ನಾಲ್ವರು ಹಾಲಿ ಶಾಸಕರಿಗೆ ಮತ್ತೆ ಸ್ಪರ್ಧೆಗೆ ಅವಕಾಶ ನೀಡಿದೆ. ಸಾಕಷ್ಟು ಕುತೂಹಲ ಮೂಡಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಿಸಿಲ್ಲ. Previous post ವಿಧಾನಸಭೆ ಸಾರ್ವತ್ರಿಕ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
Next post ಸಾಗರ ವಿಧಾನಸಭಾ ಕ್ಷೇತ್ರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಬಿಜೆಪಿಯತ್ತ!