ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ. ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳ 3 ನೇ ಪಟ್ಟಿ ಪ್ರಕಟ!

ಶಿವಮೊಗ್ಗ ನಗರ – ಹೆಚ್.ಸಿ.ಯೋಗೇಶ್, ಶಿವಮೊಗ್ಗ ಗ್ರಾಮಾಂತರ – ಡಾ.ಶ್ರೀನಿವಾಸ್ ಕರಿಯಣ್ಣ, ಶಿಕಾರಿಪುರ – ಗೋಣಿ ಮಾಲತೇಶ್

*********************************************************

-ಬಿ.ರೇಣುಕೇಶ್-

ಶಿವಮೊಗ್ಗ, ಎ. 15: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಮೂರನೇ ಹಂತದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ. ಸದರಿ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದೆ. ಈ ಮೂಲಕ ಜಿಲ್ಲೆಯ ಎಲ್ಲ 7 ಕ್ಷೇತ್ರಗಳಿಗೆ ಕಾಂಗ್ರೆಸ್ ತನ್ನ ಹುರಿಯಾಳುಗಳನ್ನು ಕಣಕ್ಕಿಳಿಸಿದಂತಾಗಿದೆ.

ಪ್ರತಿಷ್ಠಿತ ಕಣವಾಗಿ ಪರಿಣಮಿಸಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹಾಲಿ ಮಹಾನಗರ ಪಾಲಿಕೆ ಕಾರ್ಪೋರೇಟರ್ ಹಾಗು ಮಾಜಿ ಸಚಿವ ಹೆಚ್.ಎಂ.ಚಂದ್ರಶೇಖರಪ್ಪ ಅವರ ಪುತ್ರ ಹೆಚ್.ಸಿ.ಯೋಗೇಶ್ ಅವರನ್ನು ಕಣಕ್ಕಿಳಿಸಲಾಗಿದೆ.  

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ, ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಉಳಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯುತ್ತಿರುವ ಶಿಕಾರಿಪುರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಗೋಣಿ ಮಾಲತೇಶ್ ಅವರನ್ನು ಕಣಕ್ಕಿಳಿಸಲಾಗಿದೆ.

ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ಹೆಚ್.ಸಿ.ಯೋಗೇಶ್..!

*** ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಟ್ಟಾರೆ 11 ಜನ ಮುಖಂಡರು ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದರು. ಸಾಕಷ್ಟು ಪೈಪೋಟಿ ಏರ್ಪಟ್ಟಿತ್ತು. ಈ ನಡುವೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿಯಾಗಲಿದ್ದಾರೆಂಬ ಮಾತುಗಳು ಕೇಳಿಬಂದಿತ್ತು.

ಇದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ನಿದ್ದೆಗೆಡಿಸಿತ್ತು. ಈ ನಡುವೆ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದ ಸ್ಪರ್ಧಾಕಾಂಕ್ಷಿಗಳು, ಬೇರೆ ಪಕ್ಷದಿಂದ ಬರುವವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು. ಪ್ರಸ್ತುತ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದವರಲ್ಲಿಯೇ ಓರ್ವರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದ್ದರು. ಈ ನಡುವೆ ಹೆಚ್.ಸಿ.ಯೋಗೇಶ್ ಅವರು ಟಿಕೆಟ್ ಗಾಗಿ ದೆಹಲಿಯಲ್ಲಿ ತೀವ್ರ ಲಾಬಿ ನಡೆಸಿದ್ದರು. ಅಂತಿಮವಾಗಿ ವರಿಷ್ಠರು ಹೆಚ್.ಸಿ.ಯೋಗೇಶ್ ಅವರಿಗೆ ಮಣೆ ಹಾಕಿದ್ದಾರೆ.

ಎರಡನೇ ಬಾರಿ ಕಣಕ್ಕಿಳಿಯುತ್ತಿರುವ ಶ್ರೀನಿವಾಸ್ ಕರಿಯಣ್ಣ

*** ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಟಿಕೆಟ್ ಗೆ ಭಾರೀ ಪೈಪೋಟಿ ಕಂಡುಬಂದಿತ್ತು. 13 ಜನ ಟಿಕೆಟ್ ಕೋರಿ ಅರ್ಜಿ ಸಲ್ಲಿಸಿದ್ದರು. ಅಂತಿಮವಾಗಿ ಮಾಜಿ ಶಾಸಕ ಕರಿಯಣ್ಣ ಅವರ ಪುತ್ರ ಡಾ.ಶ್ರೀನಿವಾಸ್ ಕರಿಯಣ್ಣ ಅವರು ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಾರಿ ಡಾ.ಶ್ರೀನಿವಾಸ್ ಕರಿಯಣ್ಣ ಅವರಿಗೆ ಟಿಕೆಟ್ ಅನುಮಾನ ಎಂದೇ ಹೇಳಲಾಗಿತ್ತು. ಆದರೆ ಸದ್ದಿಲ್ಲದೆ ಮತ್ತೊಮ್ಮೆ ಟಿಕೆಟ್ ಗಿಟ್ಟಿಸುವಲ್ಲಿ ಅವರು ಸಫಲರಾಗಿದ್ದಾರೆ.

ಕಳೆದ 2018 ರ ಚುನಾವಣೆಯಲ್ಲಿಯೂ ಶ್ರೀನಿವಾಸ್ ಕರಿಯಣ್ಣ ಗ್ರಾಮಾಂತರ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿದಿದ್ದರು.  33,493 ಮತಗಳನ್ನು ಗಳಿಸಿದ್ದರು. ವಿಜೇತ ಅಭ್ಯರ್ಥಿ ಬಿಜೆಪಿಯ ಕೆ.ಬಿ.ಅಶೋಕನಾಯ್ಕ್ ಅವರು 69,326 ಮತ, ಎರಡನೇ ಸ್ಥಾನ ಪಡೆದಿದ್ದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್ಯನಾಯ್ಕ್ ಅವರು 65,549 ಮತ ಗಳಿಸಿದ್ದರು.

ಮತ್ತೊಮ್ಮೆ ಅವಕಾಶ ಪಡೆದ ಗೋಣಿ ಮಾಲತೇಶ್

*** ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅಖಾಡಕ್ಕಿಳಿಯುತ್ತಿರುವ ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೋಣಿ ಮಾಲತೇಶ್ ಅವರು ಕಣಕ್ಕಿಳಿಯುತ್ತಿದ್ದಾರೆ. 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ.ಎಸ್.ಯಡಿಯೂರಪ್ಪ ಎದುರು ಕಣಕ್ಕಿಳಿದಿದ್ದ ಗೋಣಿ ಮಾಲತೇಶ್ ಅವರು, 51,586 ಮತ ಗಳಿಸಿದ್ದರು.

ವಿಜೇತ ಅಭ್ಯರ್ಥಿ ಬಿ.ಎಸ್.ಯಡಿಯೂರಪ್ಪ ಅವರು 86,983 ಮತ ಪಡೆದಿದ್ದರು. ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ನಾಗರಾಜ್ ಹಾಗೂ ಗೋಣಿ ಮಾಲತೇಶ್ ನಡುವೆ ಟಿಕೆಟ್ ಗೆ ಭಾರೀ ಪೈಪೋಟಿ ಕಂಡುಬಂದಿತ್ತು. ಕಾಂಗ್ರೆಸ್ ವರಿಷ್ಠರು ಮತ್ತೊಮ್ಮೆ ಗೋಣಿ ಮಾಲತೇಶ್ ಸ್ಪರ್ಧೆಗೆ ಅವಕಾಶ ಕಲ್ಪಿಸಿದ್ದಾರೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್ ವೊಂದು, ರಸ್ತೆ ಬದಿಯ ಕಂದಕಕ್ಕೆ ಉರುಳಿಬಿದ್ದ ಪರಿಣಾಮ, ಬಸ್ ನಲ್ಲಿದ್ದ 13 ಜನ ಮೃತಪಟ್ಟು 27 ಮಂದಿ ಗಾಯಗೊಂಡ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದ ರಾಯಗಡ ಬಳಿ ಶನಿವಾರ ಮುಂಜಾನೆ ನಡೆದಿದೆ. Previous post ಮಹಾರಾಷ್ಟ್ರದ ರಾಯಗಡ ಬಳಿ ಕಂದಕಕ್ಕೆ ಉರುಳಿದ ಖಾಸಗಿ ಬಸ್ : 13 ಮಂದಿ ಸಾವು – 29 ಜನರಿಗೆ ಗಾಯ!
Next post ಡಿಸಿ – ಎಸ್ಪಿ ಖಡಕ್ ಸೂಚನೆ : ಮರಳು, ಜಲ್ಲಿ ಕಲ್ಲು ಸಾಗಾಣೆ ಲಾರಿಗಳು ವಶ!