ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ -20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ! ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಮೂರನೇ ಪಟ್ಟಿಯಲ್ಲಿಯೂ ಪ್ರಕಟವಾಗದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಸರು!

-ಬಿ.ರೇಣುಕೇಶ್-

ಶಿವಮೊಗ್ಗ, ಎ. 17: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಪಕ್ಷ, 10 ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟಿಸಿದೆ. ಆದರೆ ಟಿ – 20 ಕ್ರಿಕೆಟ್ ಮ್ಯಾಚ್ ನಷ್ಟೆ ಕುತೂಹಲ ಕೆರಳಿಸಿರುವ, ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರು ಘೋಷಣೆಯಾಗಿಲ್ಲ. ಇದರಿಂದ ಕುತೂಹಲ ಮುಂದುವರಿಯುವಂತಾಗಿದೆ!

ಪ್ರಸ್ತುತ ಶಿವಮೊಗ್ಗ ನಗರ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರಗಳಿಗೆ ಮಾತ್ರ, ಬಿಜೆಪಿ ಪಕ್ಷ ಅಭ್ಯರ್ಥಿಗಳ ಹೆಸರು ಘೋಷಣೆ ಬಾಕಿ ಉಳಿಸಿಕೊಂಡಿದೆ. ಉಳಿದ ಎಲ್ಲ ಕ್ಷೇತ್ರಗಳಿಗೆ ಕಣಕ್ಕಿಳಿಯುವ ಉಮೇದುವಾರರ ಹೆಸರು ಪ್ರಕಟಿಸಿದೆ.

ಕುತೂಹಲ: ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಸದ್ಯ ಬಿಜೆಪಿ ಟಿಕೆಟ್ ರೇಸ್ ನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್, ಬಿ.ಎಸ್.ಯಡಿಯೂರಪ್ಪ ಬೆಂಬಲಿಗ ಎಸ್.ಎಸ್.ಜ್ಯೋತಿಪ್ರಕಾಶ್, ಮಹಾನಗರ ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ, ಡಾ.ಧನಂಜಯ ಸರ್ಜಿ ಮೊದಲಾದವರ ಹೆಸರು ಮುಂಚೂಣಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಪಾಲಿಕೆ ಸದಸ್ಯ ಎಸ್.ಎನ್.ಚನ್ನಬಸಪ್ಪ ಅವರಿಗೆ ಟಿಕೆಟ್ ಖಚಿತ. ಹೆಸರು ಘೋಷಣೆಯಷ್ಟೆ ಬಾಕಿಯಿದೆ. ಈಗಾಗಲೇ ವರಿಷ್ಠರಿಂದ ಅವರಿಗೆ ಸಂದೇಶ ರವಾನಿಯಾಗಿದೆ ಎಂಬೆಲ್ಲ ಅಂತೆಕಂತೆಗಳು ಸ್ಥಳೀಯ ಬಿಜೆಪಿ ಪಾಳೇಯದಲ್ಲಿ ಹಬ್ಬಿದ್ದವು. ಈ ಕುರಿತಂತೆ ಚನ್ನಬಸಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಮೂರನೇ ಹಂತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರು ಪ್ರಕಟವಾಗಿಲ್ಲ.

ಇದರಿಂದ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ಕುರಿತಂತೆ ಮನೆ ಮಾಡಿರುವ ಕುತೂಹಲ ಮುಂದುವರಿಯುವಂತಾಗಿದೆ. ಯಾರಿಗೆ ಬಿಜೆಪಿ ಟಿಕೆಟ್ ದೊರಕಲಿದೆ ಎಂಬುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ.

ಒಟ್ಟಾರೆ 222 ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರು ಘೋಷಿಸಿದ ಬಿಜೆಪಿ

*** ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ, ಒಟ್ಟಾರೆ 224 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೂರು ಹಂತಗಳಲ್ಲಿ ಬಿಜೆಪಿ ಪಕ್ಷವು 222 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ.

ಮೊದಲ ಪಟ್ಟಿಯಲ್ಲಿ 189 ಮತ್ತು ಎರಡನೇ ಪಟ್ಟಿಯಲ್ಲಿ 23 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿತ್ತು.  ಮೂರನೇ ಹಂತದಲ್ಲಿ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ. ಶಿವಮೊಗ್ಗ ನಗರ ಹಾಗೂ ಮಾನ್ವಿ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆಯಾಗಬೇಕಾಗಿದೆ.

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶೆಟ್ಟರ್ ಎದುರು ಕಣಕ್ಕಿಳಿಯುತ್ತಿರುವವರು ಯಾರು?

*** ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿರುವ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಕಣಕ್ಕಿಳಿಯುತ್ತಿರುವ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ

ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಅವರು ಅಖಾಡಕ್ಕಿಳಿಯುತ್ತಿದ್ದಾರೆ.

ಬಿಜೆಪಿ ಪ್ರಕಟಿಸಿದ 10 ಕ್ಷೇತ್ರಗಳ ಅಭ್ಯರ್ಥಿಗಳ ವಿವರ

  • ನಾಗಠಾಣ : ಸಂಜೀವ್‌ ಐಹೊಳೆ
  • ಸೇಡಂ : ರಾಜಕುಮಾರ್‌ ಪಾಟೀಲ್‌
  • ಕೊಪ್ಪಳ : ಮಂಜುಳಾ ಅಮರೇಶ್‌
  • ರೋಣ : ಕಳಕಪ್ಪ ಬಂಡಿ
  • ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ : ಮಹೇಶ್‌ ಟೆಂಗಿನಕಾಯಿ
  • ಹಗರಿಬೊಮ್ಮನಹಳ್ಳಿ : ಬಿ ರಾಮಣ್ಣ
  • ಹೆಬ್ಬಾಳ : ಕಟ್ಟಾ ಜಗದೀಶ್‌
  • ಗೋವಿಂದರಾಜನಗರ : ಉಮೇಶ್‌ ಶೆಟ್ಟಿ
  • ಮಹದೇವಪುರ : ಮಂಜುಳಾ ಅರವಿಂದ್‌ ಲಿಂಬಾವಳಿ
  • ಕೃಷ್ಣರಾಜ : ಶ್ರೀವತ್ಸಾ
ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮಿನಕೊಪ್ಪದ ಕೆ.ಹೆಚ್.ಬಿ ಪ್ರೆಸ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಇತ್ತೀಚೆಗೆ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಎಂದು ಸ್ಥಳೀಯ ಜಾನುವಾರು ಪಾಲಕರು ಅಳಲು ತೋಡಿಕೊಂಡಿದ್ದಾರೆ. Previous post ಜಾನುವಾರು ಕಳ್ಳರ ಹಾವಳಿ : ಗಮನಹರಿಸುವರೆ ಶಿವಮೊಗ್ಗ ವಿನೋಬನಗರ ಠಾಣೆ ಪೊಲೀಸರು?!
‘ಅಣ್ಣ – ತಮ್ಮನ ಹಣಾಹಣಿಗೆ, ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ವೇದಿಕೆ ಸಿದ್ಧವಾಗಿದೆ. ಸತತ ನಾಲ್ಕನೇ ಬಾರಿ, ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ‘ಸಹೋದರರ ಸವಾಲ್’ ನಿಂದ ಸೊರಬ ಕ್ಷೇತ್ರ ರಾಜ್ಯದ ಗಮನ ಸೆಳೆದಿದೆ! Next post ಅಣ್ಣ – ತಮ್ಮನ ಜಂಗೀ ಕುಸ್ತಿಗೆ ಸಿದ್ದವಾದ ಸೊರಬ ಕ್ಷೇತ್ರ!